ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಸ ವರ್ಷದ ಪಾರ್ಟಿಯಲ್ಲೆ ಮಧ್ಯರಾತ್ರಿ ಪ್ರೇಯಸಿಯಿಂದ ಪ್ರಿಯಕರನಿಗೆ ಚಾಕು ಇರಿತ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಹೊಸ ವರ್ಷದ ಪಾರ್ಟಿಯಲ್ಲೆ ಮಧ್ಯರಾತ್ರಿ ಪ್ರೇಯಸಿಯಿಂದ ಪ್ರಿಯಕರನಿಗೆ ಚಾಕು ಇರಿತ

ಹಾಸನ : ಕಾಲೇಜಿನ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರೂ ಪ್ರೇಮಿಗಳು ಸಲ್ಪ ದಿನಗಳು ದೂರವಾಗಿದ್ದು, ಹೊಸ ವರ್ಷದ ಆಚರಣೆ ವೇಳೆ ಖಾಸಗೀ ಹೋಟೆಲ್ಗೆ ಬಂದಿದ್ದ ಪ್ರಿಯಕರನ ಬಳಿ ಹೋಗಿ ಗಲಾಟೆ ತೆಗೆದು ಮೊದಲೆ ನಿರ್ಧರಿಸಿದಂತೆ ಚಾಕುವಿನಿಂದ ಹಿರಿದ ಘಟನೆ ಹೊಸ ವರ್ಷದ ಹಿಂದಿನ ದಿವಸ ತಡರಾತ್ರಿಯಲ್ಲಿ ನಡೆದಿದೆ.

   ಹಾಸನ ತಾಲ್ಲೂಕಿನ ಎ. ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ೨೪ ವರ್ಷ ಎಂಬುವರೇ ಪ್ರಿಯತಮೆಯಿಂದ ಚಾಕು ಇರಿತಕ್ಕೆ ಒಳಗಾದವನು. ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ಭವಾನಿ ಎಂಬುವಳು ಮನುಕುಮಾರ್ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇವರಿಬ್ಬರಲ್ಲಿ ಪ್ರೀತಿ ಪ್ರೇಮ ನಡೆಯುತಿತ್ತು. ಏಕೋ ಕೆಲ ದಿನಗಳಿಂದ ಇಬ್ಬರೂ ಬೇರೆಯಾಗಿದ್ದರು. ಯಾವ ಕರೆ ಕೂಡ ಮಾಡಿರಲಿಲ್ಲ. ನಿನ್ನೆ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಖಾಸಗಿ ಹೋಟೆಲ್‌ಗೆ ಬಂದಿದ್ದ ಮನುಕುಮಾರ್ ವಿಚಾರ ತಿಳಿದುಕೊಂಡು ಪದೇ ಪದೇ ಮನುಕುಮಾರ್‌ಗೆ ಭವಾನಿ ಫೋನ್ ಮಾಡಿದರೂ ಏಕೋ ರಿಸಿವ್ ಮಾಡಲಿಲ್ಲ. ತಡರಾತ್ರಿ ೧೨.೩೦ಕ್ಕೆ ಹೋಟೆಲ್ ಬಳಿ ಬಂದ ಭವಾನಿಯು ಅಲ್ಲೇ ಬಿದ್ದಿದ್ದ ಪಾಸ್ ಹಾಕಿಕೊಂಡು ಗೇಟ್ ಒಳಗೆ ಹೋದಳು. ಅಷ್ಟರಲ್ಲಿ ಮನುಕುಮಾರ್ ಗೇಟ್ ಬಳಿ ಬಂದನು. ಈ ವೇಳೆ ಭವಾನಿ ಹಾಗೂ ಮನುಕುಮಾರ್ ನಡುವೆ ಜಗಳ ಶುರುವಾಯಿತು. ತಕ್ಷಣ ಜಗಳ ಮನುಕುಮಾರ್ ಸ್ನೇಹಿತರು ಬಿಡಿಸಲು ಮುಂದಾದರು. ನೋಡುತಿದ್ದಂತೆ ಈ ವೇಳೆ ಮನುಕುಮಾರ್‌ಗೆ ಭವಾನಿ ಏಕಾಏಕಿ ಚಾಕುವಿನಿಂದ ಇರಿದಳು. ಕೂಡಲೇ ಮನುಕುಮಾರನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಿದರು. ಸ್ಥಿತಿ ಗಂಬೀರವಾಗಿದ್ದರಿಂದ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ಕೊಡಲಾಗುತ್ತಿದೆ.

 ಮನುಕುಮಾರ್ ಹಾಸನದಲ್ಲಿ ಹಾರ್ಡ್‌ವೇರ್ ಮತ್ತು ಪ್ಲೇವುಡ್ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಈ ವೇಳೆ ಚಾಕು ಇರಿತಕ್ಕೆ ಒಳಗಾದ ಸಂಬಂಧಿಕರು ಮಾಧ್ಯಮದ ಮುಂದೆ ಘಟನೆ ಬಗ್ಗೆ ತಿಳಿಸಿ ತಮ್ಮ ಅಳಲು ತೋಡಿಕೊಂಡರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು