ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎ.ವಿ.ಕೆ. ಕಾಲೇಜಿನಲ್ಲಿ ಎಲ್‌ಪಿಜಿ ವತಿಯಿಂದ – ಎಲ್‌ಪಿಜಿ ಭದ್ರತಾ ಜಾಗೃತಿ ಕಾರ್ಯಕ್ರಮ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಎ.ವಿ.ಕೆ. ಕಾಲೇಜಿನಲ್ಲಿ ಎಲ್‌ಪಿಜಿ ವತಿಯಿಂದ – ಎಲ್‌ಪಿಜಿ ಭದ್ರತಾ ಜಾಗೃತಿ ಕಾರ್ಯಕ್ರಮ

ಹಾಸನ : ಹಾಸನದ ಎವಿ.ಕೆ. ಕಾಲೇಜಿನಲ್ಲಿ ಭಾರತ್‌ಗ್ಯಾಸ್ ಡಿಸ್ಟ್ರಿಬ್ಯೂಟರ್‌ಗಳ ಆಶ್ರಯದಲ್ಲಿ ಎಲ್‌ಪಿಜಿ ಪಂಚಾಯತ್ ವತಿಯಿಂದ “ಎಲ್‌ಪಿಜಿ ಭದ್ರತಾ ಜಾಗೃತಿ ಕಾರ್ಯಕ್ರಮ” ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ, ವಿದ್ಯಾರ್ಥಿಗಳಿಗೆ ಅಡುಗೆ ಅನಿಲ (LPG) ಯ ಸುರಕ್ಷಿತ ಬಳಕೆ ಹಾಗೂ ಗ್ಯಾಸ್ ಲೀಕ್‌ನಂತಹ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ ಭಾರತ್‌ಗ್ಯಾಸ್ ಪ್ರದೇಶ ವ್ಯವಸ್ಥಾಪಕ ಶ್ರೀ ಸಂದೀಪ್ ಕುಮಾರ್ ರೈನಾ, ಜ್ಯೇಷ್ಟ ಮಾರಾಟ ನಿರ್ವಾಹಕ ಶ್ರೀ ಅನಂತರಾವ್, ಹಾಗೂ ಎವಿ.ಕೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಯತೀಂದ್ರ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ಅವರು ತಮ್ಮ ಸಂದೇಶದಲ್ಲಿ, “ಪ್ರತಿಯೊಂದು ಮನೆಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬಳಸುವಾಗ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು” ಎಂದು ಎಚ್ಚರಿಸಿದರು. ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳಿಗೆ ಎಲ್‌ಪಿಜಿ ಲೀಕ್ ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಪ್ರಾಯೋಗಿಕ ಪ್ರದರ್ಶನಗಳು ನೀಡಲಾಯಿತು. ತಜ್ಞರು “ಪ್ರತಿ ಐದು ವರ್ಷಕ್ಕೊಮ್ಮೆ ಎಲ್‌ಪಿಜಿ ಪೈಪ್‌ಗಳನ್ನು ಬದಲಾಯಿಸಬೇಕು, ಸಂಪರ್ಕ ಕಿಟ್‌ಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು” ಎಂದು ಸಲಹೆ ನೀಡಿದರು. ಭಾರತ್‌ಗ್ಯಾಸ್ ಪ್ರತಿನಿಧಿಗಳು, ಪ್ರಮಾಣಿತ ಎಲ್‌ಪಿಜಿ ಪೈಪ್‌ಗಳು ಹಾಸನದ ಅಧಿಕೃತ ಭಾರತ್‌ಗ್ಯಾಸ್ ಡಿಸ್ಟ್ರಿಬ್ಯೂಟರ್‌ಗಳ ಬಳಿ ಲಭ್ಯವಿವೆ ಎಂದು ತಿಳಿಸಿದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು