ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಗರಸಭೆ ಅಧ್ಯಕ್ಷರಾಗಿ ಎಂ.‌ಚಂದ್ರೇಗೌಡ ಮುಂದುವರಿಕೆ ಅವಿಶ್ವಾಸ ಗೆದ್ದ ಚಂದ್ರೇಗೌಡ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ನಗರಸಭೆ ಅಧ್ಯಕ್ಷರಾಗಿ ಎಂ.‌ಚಂದ್ರೇಗೌಡ ಮುಂದುವರಿಕೆ ಅವಿಶ್ವಾಸ ಗೆದ್ದ ಚಂದ್ರೇಗೌಡ

ಹಾಸನ:  ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ ವಿರುದ್ಧ ಜೆಡಿಎಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯ ವಿಫಲಗೊಂಡ ಬಳಿಕ, ಚಂದ್ರೇಗೌಡ ತಮ್ಮ ಗೆಲುವನ್ನು ಹಾಸನ ಜಿಲ್ಲೆಯ ಜನತೆಯ ಆತ್ಮಗೌರವದ ಗೆಲುವು ಎಂದು ಬಣ್ಣಿಸಿದ್ದಾರೆ.

ಈ ಗೆಲುವಿಗೆ ಬಿಜೆಪಿಯ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್‌ ಪಟೇಲ್‌ರ ಬೆಂಬಲವೇ ಕಾರಣ ಎಂದು ಅವರು ತಿಳಿಸಿದ್ದಾರೆ.“ನಾನು ಯಾವುದೇ ಅವ್ಯವಹಾರ, ಅನೈತಿಕ ಚಟುವಟಿಕೆಯಲ್ಲಿ ತೊಡಗಿಲ್ಲ. ಕಪ್ಪು ಚುಕ್ಕೆ ಬಾರದಂತೆ ಆಡಳಿತ ನಡೆಸಿದ್ದೇನೆ. ಜೆಡಿಎಸ್‌ ಸದಸ್ಯರಿಗೆ ಪಕ್ಷದಿಂದ ವಿಪ್‌ ಜಾರಿಯಾಗಿತ್ತು, ಆದರೆ ಮಾನಸಿಕವಾಗಿ ಅವರು ನನ್ನ ಪರವೇ ಇದ್ದರು. ಹೀಗಾಗಿ ಪ್ರೀತಂ ಗೌಡ ಮತ್ತು ಶ್ರೇಯಸ್‌ ಪಟೇಲ್‌ರ ಮೊರೆ ಹೋದೆ,” ಎಂದು ಚಂದ್ರೇಗೌಡ ಸ್ಪಷ್ಟಪಡಿಸಿದ್ದಾರೆ.

ತಮ್ಮ ಗೆಲುವಿಗೆ ಬಿಜೆಪಿ ಸದಸ್ಯರು ಮತ್ತು ಸಂಸದರ ಸಂಪೂರ್ಣ ಬೆಂಬಲವಿತ್ತು ಎಂದು ಹೇಳಿರುವ ಚಂದ್ರೇಗೌಡ, “ಹಾಸನಾಂಬೆ ದೇವಿ ಮತ್ತು ಕೊಲ್ಲಾಪುರದ ದೇವಿಯ ಆಶೀರ್ವಾದದಿಂದ ಕೆಂಡದ ಹಾದಿಯಲ್ಲಿ ಜಯಶಾಲಿಯಾಗಿದ್ದೇನೆ. ಇನ್ಮುಂದೆ ಪ್ರೀತಂ ಗೌಡ ಮತ್ತು ಶ್ರೇಯಸ್‌ ಪಟೇಲ್‌ ಸೂಚಿಸಿದ ಮಾರ್ಗದಲ್ಲಿ ಹಾಸನವನ್ನು ಉತ್ತಮ ನಗರವಾಗಿ ರೂಪಿಸುತ್ತೇನೆ,” ಎಂದು ಘೋಷಿಸಿದ್ದಾರೆ.

ಜೆಡಿಎಸ್‌ನ ರಾಜಕೀಯ ತಂತ್ರವನ್ನು ವಿಫಲಗೊಳಿಸಿ ಅಧಿಕಾರದಲ್ಲಿ ಮುಂದುವರಿದಿರುವ ಚಂದ್ರೇಗೌಡ, ಈ ಗೆಲುವಿನ ಮೂಲಕ  ತಮ್ಮ ಸ್ಥಾನವನ್ನು ಭದ್ರಗೊಳಿಸಿದ್ದಾರೆ. ಈ ಘಟನೆಯಿಂದ ಜೆಡಿಎಸ್‌ಗೆ ಭಾರೀ ಹಿನ್ನಡೆಯಾಗಿದ್ದು, ಮುಂದಿನ ರಾಜಕೀಯ ನಡೆಗಳ ಬಗ್ಗೆ ಕುತೂಹಲ ಮೂಡಿಸಿದೆ.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು