ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟ ನಿಷೇಧಿಸಿದ್ದು ನಾನಲ್ಲ, ಮಧು ಜಿ ಮಾದೇಗೌಡ ನೇತೃತ್ವದ ಸಮಿತಿ: ಮಹೇಶ್‌ ಜೋಷಿ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟ ನಿಷೇಧಿಸಿದ್ದು ನಾನಲ್ಲ, ಮಧು ಜಿ ಮಾದೇಗೌಡ ನೇತೃತ್ವದ ಸಮಿತಿ: ಮಹೇಶ್‌ ಜೋಷಿ

ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಆಹಾರ ವ್ಯವಸ್ಥೆ ಹಾಗೂ ವಿತರಣೆಯನ್ನು ಮಾಡುವುದಕ್ಕೆ ಜಿಲ್ಲಾ ಮಟ್ಟದಲ್ಲಿ ಸಂಬಂಧಪಟ್ಟ ಸಮಿತಿಗಳಿವೆ ಅದಕ್ಕೂ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿಗೂ ಯಾವುದೇ ಸಂಬಂಧವಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಮಂಡ್ಯದಲ್ಲಿ ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಒದಗಿಸುವ ಬಗ್ಗೆ ನಡೆಯುತ್ತಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿ ಈ ವಿಷಯವನ್ನು ತಿಳಿಸಿದ್ದಾರೆ.

ಮಂಡ್ಯದಲ್ಲಿ ಅಯೋಜೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ 25.6.2024ರಂದು ಎ.ಬಿ.ರಮೇಶ್ ಬಾಬು ಬಂಡಸಿದ್ದೇಗೌಡರ ಅಧ್ಯಕ್ಷತೆಯಲ್ಲಿ 35 ಜನರ ‘ಆಹಾರ ಸಮಿತಿ’ಯನ್ನು ರಚಿಸಲಾಗಿದ್ದು, ಸಮ್ಮೇಳನದಲ್ಲಿ ನಡೆಯ ಬೇಕಾದ ಊಟೋಪಚಾರಗಳ ವ್ಯವಸ್ಥೆಯನ್ನು ಈ ಸಮಿತಿಯು ನಿರ್ವಹಿಸುತ್ತದೆ. ಡಿಸಂಬರ್ 6ರಂದು ಈ ಸಮಿತಿಯು ಸಭೆ ಸೇರಿ ಸಮ್ಮೇಳನದಲ್ಲಿ ಮುದ್ದೆ, ಸೊಪ್ಪು ಸಾಂಬಾರ್ ವಿಶೇಷ ತಿನಿಸಾಗಿದ್ದು, ಉತ್ತರ, ದಕ್ಷಿಣ ಕರ್ನಾಟಕ ಶೈಲಿಯ ಊಟವನ್ನು 300 ಕೌಂಟರ್ಗಳಲ್ಲಿ ವ್ಯವಸ್ಥೆ ಮಾಡುವುದು ಸೇರಿದಂತೆ ಅನೇಕ ಮಹತ್ವದ ನಿರ್ಣಯಗಳನ್ನು ತೆಗೆದು ಕೊಂಡಿದೆ. ಇದು ಎಲ್ಲಾ ಪ್ರಮುಖ ಪತ್ರಿಕೆಗಳಲ್ಲಿಯೂ ವರದಿಯಾಗಿದ್ದು, ಈ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಭಾಗವಹಿಸಿರಲಿಲ್ಲ ಎನ್ನುವುದು ಗಮನಾರ್ಹ ಸಂಗತಿಯಾಗಿದೆ ಎಂದು ಪರಿಷತ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮಧು.ಜಿ.ಮಾದೇಗೌಡರ ಅಧ್ಯಕ್ಷತೆಯಲ್ಲಿ 30 ಜನರ ‘ವಸ್ತು ಪ್ರದರ್ಶನ ಸಮಿತಿ’ಯನ್ನು ರಚಿಸಲಾಗಿದ್ದು ಪುಸ್ತಕ ಮಳಿಗೆ, ವಾಣಿಜ್ಯ ಮಳಿಗೆ, ಆಹಾರ ಮಳಿಗೆಗಳ ಹೊಣೆಯನ್ನು ಈ ಸಮಿತಿಯು ಹೊಂದಿರುತ್ತದೆ. ಈ ವಸ್ತು ಪ್ರದರ್ಶನ ಸಮಿತಿಯೇ ಈಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ‘ಮಾಂಸಾಹಾರ, ಮದ್ಯ ಮತ್ತು ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ’ ಎಂಬ ಸೂಚನೆಯೂ ಸೇರಿದಂತೆ ಕೆಳಕಂಡ ನಿಯಮಗಳನ್ನು ನೀಡಿದೆ.

  1. ಮಳಿಗೆ ಸಮಯವು ಬೆಳಿಗ್ಗೆ೯:೦೦ ರಿಂದ ರಾತ್ರಿ ೧೦:೦೦ ವರೆಗೆ ಇರುತ್ತದೆ.
  2. ದಿನಾಂಕ ೬ನೇ ಡಿಸೆಂಬರ್ನಿಂದ ಮಳಿಗೆ ನೋಂದಣಿ ಆರಂಭವಾಗಲಿದ್ದು, ೧೩ರ ರಾತ್ರಿ ನೋಂದಣಿ ಮುಕ್ತಾಯವಾಗಲಿದೆ.
  3. ಮಾಂಸಾಹಾರ, ಮದ್ಯ ಮತ್ತು ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ.
  4. ಮಳಿಗೆಗಳಲ್ಲಿ ಅಡುಗೆ ಮಾಡುವುದನ್ನು ನಿಷೇಧಿಸಲಾಗಿದೆ.
  5. ಪ್ರತಿಯೊಂದು ಮಳಿಗೆಗೆ ಸಮಿತಿ ಒದಗಿಸುವ ಸೌಲಭ್ಯಗಳು ಈ ಮುಂದಿನಂತಿವೆ ( ಒಂದು ಟೇಬಲ್, ಎರಡು ಕುರ್ಚಿ , ಒಂದು ಜಂಕ್ಷನ್ ಬಾಕ್ಸ್, ವಿದ್ಯುತ್ ಸೌಲಭ್ಯ).
  6. ಮಳಿಗೆ ನೋಂದಣಿಯು ವಸತಿ ಸೌಲಭ್ಯವನ್ನು ಒಳಗೊಂಡಿರುವುದಿಲ್ಲ.
  7. ದಿನಾಂಕ ೧೯ ಡಿಸೆಂಬರ್ ೨೦೨೪ ರಂದು ಹಂಚಿಕೆ ಮಾಡಲಾದ ಮಳಿಗೆಗಳನ್ನು ಸಂಬಂಧ ಪಟ್ಟ ನೋಂದಣಿದಾರರು ಹಸ್ತಾಂತರ ಪಡೆಯುವುದು.
  8. ದಿನಾಂಕ ೨೦ ,೨೧, ೨೨ ಮೂರು ದಿನಗಳ ಅವಧಿಗೆ ಮಾತ್ರ ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ.
  9. ಸಾಹಿತ್ಯ ಸಮ್ಮೇಳನದ ವಿನ್ಯಾಸ, ಪುಸ್ತಕ ಮಳಿಗೆ ಮತ್ತು ವಾಣಿಜ್ಯ ಮಳಿಗೆಗಳ ವಿನ್ಯಾಸವನ್ನು ಈ ಕೆಳಗೆ ತಮ್ಮ ಮಾಹಿತಿಗಾಗಿ ಒದಗಿಸಿದ್ದು ಈ ನಕ್ಷೆಯನ್ನು ಪರಿಶೀಲಿಸಿ ತಮ್ಮ ಇಚ್ಛೆಯ ಮಳಿಗೆಯನ್ನು ಕಾಯ್ದಿರಿಸಲು ಆಯ್ಕೆ ಮಾಡಲು ಕೋರಿದೆ.
  10. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.
  11. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಅಥವಾ ಸಮಸ್ಯೆ ಸೃಷ್ಟಿಸುವ ಚಟುವಟಿಕೆಗಳಲ್ಲಿ ಯಾರೂ ಭಾಗವಹಿಸಬಾರದು.
  12. ನಿಮ್ಮ ಆಯಾ ಮಳಿಗೆಗಳಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.
    ಈ ಸೂಚನೆಗಳಿಗೂ ಕನ್ನಡ ಸಾಹಿತ್ಯ ಪರಿಷತ್ತಿಗೂ ಯಾವ ಸಂಬಂಧವೂ ಇರುವುದಿಲ್ಲ

ಕನ್ನಡ ಸಾಹಿತ್ಯ ಪರಿಷತ್ತು, ಸಮ್ಮೇಳನದಲ್ಲಿ ಬಹುಮುಖ್ಯವಾದ ಸಮ್ಮೇಳನಾಧ್ಯಕ್ಷರ ಆಯ್ಕೆ , ವಿಚಾರ ಗೋಷ್ಟಿಗಳ ರೂಪಿಸುವಿಕೆ, ಸನ್ಮಾನಿತರ ಆಯ್ಕೆ, ಪುಸ್ತಕಪ್ರಕಟಣೆ ಮೊದಲಾದ ಹೊಣೆಗಳನ್ನು ನಿರ್ವಹಿಸುತ್ತದೆ. ಇಂತಹ ನಿರ್ಧಾರಗಳನ್ನೂ ಕೂಡ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಏಕ ಪಕ್ಷೀಯವಾಗಿ ತೆಗೆದು ಕೊಳ್ಳುವುದಿಲ್ಲ. ಸಂಬಂಧ ಪಟ್ಟ ಸಮಿತಿಗಳಲ್ಲಿ ಪ್ರಸ್ತಾಪಿಸಿ ಅಲ್ಲಿಂದ ಅನುಮೋದನೆ ಪಡೆದ ನಂತರವೇ ತೀರ್ಮಾನಿಸುತ್ತಾರೆ.

ಹಿನ್ನೆಲೆ ಹೀಗಿದ್ದರೂ ಅನವಶ್ಯಕವಾಗಿ ಡಾ.ಮಹೇಶ ಜೋಶಿಯವರ ಹೆಸರನ್ನು ಈ ವಿವಾದದಲ್ಲಿ ಎಳೆದು ತರುವಲ್ಲಿ ಕೆಲವರು ಮುಖ್ಯಪಾತ್ರ ವಹಿಸಿರುವುದು ಕನ್ನಡ ಸಾಹಿತ್ಯ ಪರಿಷತ್ತಿಗೆ ಖೇದವನ್ನು ಉಂಟು ಮಾಡಿದೆ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಎನ್.ಎಸ್.ಶ್ರೀಧರ ಮೂರ್ತಿ ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು