ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

KPSCಗೆ ಮೇಜರ್ ಸರ್ಜರಿ, ಕೆಪಿಎಸ್‌ಸಿ ಪರೀಕ್ಷಾ ನಿರ್ದೇಶಕರ ನೇಮಕ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

KPSCಗೆ ಮೇಜರ್ ಸರ್ಜರಿ, ಕೆಪಿಎಸ್‌ಸಿ ಪರೀಕ್ಷಾ ನಿರ್ದೇಶಕರ ನೇಮಕ


ಬೆಂಗಳೂರು :
 ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕ ಹಾಗೂ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆಗೆ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಪ್ರಸನ್ನ ಎಚ್., ಐಎಎಸ್ (2017 ಬ್ಯಾಚ್) ಅವರನ್ನು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹುದ್ದೆಗೆ ಹೆಚ್ಚುವರಿ ಹೊಣೆಗಾರಿಕೆಯಲ್ಲಿ ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಈ ಹಿಂದೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ದಿಗ್ವಿಜಯ್ ಬೋಡ್ಕೆ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಲವಿಷ್ ಒರ್ಡಿಯಾ, ಐಎಎಸ್ (2020 ಬ್ಯಾಚ್) ಅವರನ್ನು ಕೆಪಿಎಸ್‌ಸಿಯ ಜಂಟಿ ಪರೀಕ್ಷಾ ನಿಯಂತ್ರಕರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ. ಈ ಹುದ್ದೆ ಈವರೆಗೆ ಖಾಲಿ ಇತ್ತು. ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹಾಗೂ ಜಂಟಿ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಐಎಎಸ್ ವೇತನ ನಿಯಮಗಳು, 2016ರ ನಿಯಮ 12ರ ಅನ್ವಯ ಹಿರಿಯ ಶ್ರೇಣಿಯ ಐಎಎಸ್‌ನ ನಿರ್ದೇಶಕ, ಪೌರಾಡಳಿತ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಯ ಹುದ್ದೆಗಳು ಎಂದು ಸರ್ಕಾರ ಘೋಷಿಸಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವೆಗಳು-11) ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ರಾಜ್ಯಪಾಲರ ಹೆಸರಿನಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು