ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಡುಪಿಗೆ ಬರುವ ಧೈರ್ಯ ಮಾಡಿದಂತೆ ಮಣಿಪುರಕ್ಕೂ ಹೋಗುವ ಧೈರ್ಯ ಮಾಡಿ: ಕಾಂಗ್ರೆಸ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಉಡುಪಿಗೆ ಬರುವ ಧೈರ್ಯ ಮಾಡಿದಂತೆ ಮಣಿಪುರಕ್ಕೂ ಹೋಗುವ ಧೈರ್ಯ ಮಾಡಿ: ಕಾಂಗ್ರೆಸ್

ಉಡುಪಿ ವಿಡಿಯೋ ಪ್ರಕರಣವನ್ನು ಮೊದಲಿಗೆ ನಿರ್ಲಕ್ಷ್ಯ ಮಾಡಿದ್ದ ಬಿಜೆಪಿ ನಂತರ ಅದು ರಾಷ್ಟ್ರ ಮಟ್ಟದಲ್ಲಿ ಸೋಷಿಯಲ್‌ ಮೀಡಿಯಾಗಳಲ್ಲಿ ಸುದ್ದಿಯಾದ ನಂತರ ಎದ್ದು ಕುಳಿತು ಆ ಕುರಿತು ಪ್ರತಿಭಟನೆಗಳನ್ನು ಮಾಡತೊಡಗಿತು.

ಮೊದಲಿಗೆ ತಣ್ಣಗಿದ್ದ ಈ ವಿಚಾರ ನಂತರ ಕನ್ನಡ ಮಾಧ್ಯಮಗಳಲ್ಲೂ ಸದ್ದು ಮಾಡತೊಡಗಿತು. ಶೆಫಾಲಿ ವೈದ್ಯ, ರಶ್ಮಿ ಸಾಮಂತ್‌ ಅವರಂತಹ ಬಲಪಂಥೀಯ ಮಹಿಳೆಯರು ಇದನ್ನು ಮುನ್ನೆಲೆಗೆ ತರುತ್ತಿದ್ದಂತೆ ರಾಷ್ಟ್ರ ಮಟ್ಟದಲ್ಲಿ ಎಚ್ಚೆತ್ತುಕೊಂಡ ಬಿಜೆಪಿ ಇದರ ತನಿಖೆಗೆ ಮಹಿಳಾ ಆಯೋಗವನ್ನೂ ಕಳಿಸಿತ್ತು. ಆದರೆ ನಿನ್ನೆ ಆಯೋಗದ ಸದಸ್ಯೆ ಖುಷ್ಬೂ ಸುಂದರ್‌ ಬ್ರೇಕಿಂಗ್‌ ನ್ಯೂಸಿಗೆ ಕಾದಿದ್ದ ಮಾಧ್ಯಮಗಳಿಗೆ ಬುದ್ಧಿ ಹೇಳುವುದರೊಂದಿಗೆ ಅದೂ ಅಷ್ಟೇನೂ ಫಲಪ್ರದವಾದಂತಿಲ್ಲ.

ಈ ನಡುವೆ ಬಿಜೆಪಿಯ ಈ ರಾಜಕಾರಣವನ್ನು ಕಾಂಗ್ರೆಸ್‌ ಕಟುವಾಗಿ ಟೀಕಿಸಿದ್ದು, ಅದು ಬಿಜೆಪಿ ಉಡುಪಿಗೆ ಬರುವ ಧೈರ್ಯ ಮಾಡಿದಂತೆ ಮಣಿಪುರಕ್ಕೂ ಹೋಗುವ ಧೈರ್ಯ ಮಾಡಿ ಎಂದು ಕುಟುಕಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್‌, “ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕಾಂಗ್ರೆಸ್ ಆಡಳಿತದ ಕರ್ನಾಟಕಕ್ಕೆ ಬಂದು ನಿರ್ಭೀತಿಯಿಂದ ಉಡುಪಿ ಕಾಲೇಜು ಪ್ರಕರಣವನ್ನು ಪರಿಶೀಲಿಸಿದ್ದಾರೆ, ಆದರೆ ಮಹಿಳೆಯರನ್ನು ಬೆತ್ತಲೆಗೊಳಿಸಿದ, ನೂರಾರು ಅತ್ಯಾಚಾರಗಳು ನಡೆದಿರುವ ಬಿಜೆಪಿ ಆಡಳಿತದ ಮಣಿಪುರಕ್ಕೆ ಹೋಗುವುದಕ್ಕೆ ಧೈರ್ಯ ಇಲ್ಲವೇ ಅಥವಾ ಇಚ್ಛೆ ಇಲ್ಲವೇ? ರಾಷ್ಟ್ರೀಯ ಮಹಿಳಾ ಆಯೋಗವು ಮಣಿಪುರದ ವಿಚಾರದಲ್ಲಿ ಕಣ್ಮುಚ್ಚಿ ಕುಳಿತಿರುವುದೇಕೆ?” ಎಂದು ಕೇಳಿದೆ.

ಆದರೆ ಬಿಜೆಪಿಗೆ ಈಗಲೂ ಈ ಪ್ರಕರಣವನ್ನು ಬಿಡುವ ಮನಸ್ಸಿದ್ದಂತೆ ಕಾಣುತ್ತಿಲ್ಲ. ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ಅದರ ಬೆಂಬಲಿಗರು ತನ್ನದೇ ಪಕ್ಷದ ಖುಷ್ಬೂ ಅವರ ವಿರುದ್ಧ ಕಿಡಿ ಕಾರತೊಡಗಿದ್ದಾರೆ.

ಈ ನಡುವೆ ಸುಳ್ಳು ಸುದ್ದಿ ಹರಡಿದ ರಶ್ಮಿ ಸಾಮಂತ್‌ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕುರಿತೂ ಆಕ್ರೋಶ ವ್ಯಕ್ತವಾಗುತ್ತಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version