ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ, ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದ – ಡಿ ಕೆ ಶಿವಕುಮಾರ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ, ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದ – ಡಿ ಕೆ ಶಿವಕುಮಾರ್

ಚಾಮರಾಜನಗರ: ಸುನೀಲ್ ಬೋಸ್ ಅವರನ್ನು 3 ಲಕ್ಷ ಮತಗಳ ಅಂತರದಿಂದ ಚಾಮರಾಜನಗರದ ಜನತೆ ಗೆಲ್ಲಿಸಬೇಕು. ಸಂಸತ್ತಿಗೆ ಮಹದೇವಪ್ಪ ಅವರನ್ನು ಕಳುಹಿಸಿ ಎರಡನೇ ಅಂಬೇಡ್ಕರರನ್ನಾಗಿ ಮಾಡಬೇಕು ಎನ್ನುವ ಆಸೆ ಇತ್ತು ಆದರೆ ಅವರು ಒಪ್ಪಲಿಲ್ಲ. ಕ್ಷೇತ್ರದ ಮತದಾರರು ಮಲ್ಲಿಕಾರ್ಜುನ ಖರ್ಗೆ ಅವರು ಮತ್ತು ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಇಂದು ಲೋಕಸಭಾ ಅಭ್ಯರ್ಥಿ ಸುನೀಲ್‌ ಬೋಸ್‌ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗವಹಿಸಿ ಮತನಾಡಿದ ಅವರು “ಸುನೀಲ್ ಬೋಸ್ ನನ್ನ ಮಗನಿದ್ದಂತೆ, ಅವರನ್ನು ಸಂಸತ್ತಿಗೆ ಕಳುಹಿಸಬೇಕು. ಧ್ರುವನಾರಾಯಣ ಅವರ ಕನಸನ್ನು ನನಸು ಮಾಡಲು ನಾವು ಸುನೀಲ್ ಜೊತೆ ನಿಂತಿದ್ದೇವೆ. ಸಿದ್ದರಾಮಯ್ಯ ಅವರು ಚಾಮರಾಜನಗರದ ಮನೆ ಮಗ ಇದ್ದಂತೆ. ಅವರ ಮೇಲೆ ನಂಬಿಕೆ ಇಟ್ಟು ಮತ ನೀಡಬೇಕು. ಅವರ ಬೆಂಬಲಕ್ಕೆ ಮತದಾರರು ನಿಲ್ಲಬೇಕು.” ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಉಪ ಮುಖ್ಯಮಂತ್ರಿ “ಕೊರೋನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರೂ ರಕ್ಷಣೆಗೆ ಯಾವ ಬಿಜೆಪಿಯವರು ಬರಲಿಲ್ಲ. ಸಹಾಯವನ್ನು ಮಾಡಲಿಲ್ಲ. ನಿಮ್ಮ ಸಹಾಯಕ್ಕೆ ಬಂದ ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಮರೆಯಬಾರದು.

ಕಮಲ ಕೆರೆಯಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ, ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದ. ಕೊಟ್ಟ ಮಾತನ್ನು ನಾವು ಉಳಿಸಿಕೊಂಡು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಐದು ಬೆರಳು ಸೇರಿ ಕೈ ಗಟ್ಟಿಯಾಯಿತು. ಐದು ಗ್ಯಾರಂಟಿಗಳು ಸೇರಿ ಈ ಕೈ ಗಟ್ಟಿಯಾಯಿತು.

ಉಚಿತ ಅಕ್ಕಿ, ಬಸ್ ಪ್ರಯಾಣ, 2 ಸಾವಿರ ಗೃಹಲಕ್ಷ್ಮಿ ಹಣ ಸೇರಿದಂತೆ ಎಲ್ಲ ಯೋಜನೆಗಳು ಮನೆಗೆ ತಲುಪುತ್ತಿವೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲನೇ ದಿನವೇ ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದೆವು. ಇಂತಹ ನಿರ್ಧಾರವನ್ನು ಮೋದಿಯವರು ಮಾಡಿದ್ದಾರೆಯೇ? 15 ಲಕ್ಷ ಎಲ್ಲಿ, ಅಚ್ಚೇದಿನ್ ಎಲ್ಲಿ, 2 ಕೋಟಿ ಉದ್ಯೋಗ ಎಲ್ಲಿ ಮಾನ್ಯ ಮೋದಿಯವರೇ?. ಅವರಿಂದ ಏನೂ ಆಗಲಿಲ್ಲ” ಎಂದು ತಿಳಿಸಿದರು.

ಹಾಲಿ ಸಂಸದರಾದ ಶ್ರೀನಿವಾಸ ಪ್ರಸಾದ್ ಅವರು ಸುನೀಲ್ ಬೋಸ್ ಅವರಿಗೆ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಈಗ ಜನರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡುತ್ತೇನೆ. ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲದ ಜೊತೆಗೆ ಅವರ ಎಲ್ಲಾ ಹಿತೈಷಿಗಳ, ಬೆಂಬಲಿಗರ ಶಕ್ತಿಯನ್ನು ನಮಗೆ ನೀಡಿದ್ದಾರೆ ಎಂದು ಅವರು ಈ ಸಮಯದಲ್ಲಿ ಹೇಳಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version