ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮನೆ ತರವಿಗೆ ಬಂದ BBMP ಅಧಿಕಾರಿಗಳು: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಂಪತಿಗಳು

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮನೆ ತರವಿಗೆ ಬಂದ BBMP ಅಧಿಕಾರಿಗಳು: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಂಪತಿಗಳು

ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿದ ಆರೋಪದ ಮೇಲೆ ಬಿಬಿಎಂಪಿ ಅಧಿಕಾರಿಗಳು ಮನೆಗಳ ತೆರವಿಗೆ ಮುಂದಾಗಿದ್ದರು. ಈ ವೇಳೆ ದಂಪತಿಗಳು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬಸವನಪುರದ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ.

ಹೌದು, ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ ಎಂದು ಆರೋಪಿಸಿ ದಂಪತಿಗಳು ವಾಸಿಸುತ್ತಿದ್ದ ಮನೆಯನ್ನು ಕೆಡವಲು ಹೋದಂತ ಅಧಿಕಾರಿಗಳಿಗೆ, ದಂಪತಿಗಳು ಮನೆ ನಿರ್ಮಿಸುವಾಗ ಬಿಬಿಎಂಪಿ ಅಧಿಕಾರಿಗಳೇ ಅನುಮತಿ ನೀಡಿದ್ದು, ಬ್ಯಾಂಕಿನಲ್ಲಿ ಲಕ್ಷಾಂತರ ರೂ. ಸಾಲ ಮಾಡಿ ಮನೆ ಕಟ್ಟಲಾಗಿದೆ. ಆಗ ಈ ಜಾಗ ರಾಜಕಾಲುವೆಯಲ್ಲಿದೆ ಎಂದು ಗೊತ್ತಿರಲಿಲ್ಲವೇ? ಅನುಮತಿ ನೀಡಿದ್ದು ಯಾಕೆ? ಆಗ ಅನುಮತಿ ನೀಡಿ ಈಗ ಏಕಾಏಕಿ JCB ತಂದು ಮನೆ ನೆಲಸಮ ಮಾಡಲು ಮುಂದಾಗಿರುವುದು ಏಕೆ ಎಂದು ದಂಪತಿ ಪ್ರಶ್ನಿಸಿದ್ದಾರೆ.

ಇದಲ್ಲದೇ ಅಧಿಕಾರಿಗಳು ತೆರವಿಗೆ ಮುಂದಾದಾಗ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆ ತೆರವು ಮಾಡಿದ್ದಲ್ಲಿ ಮನೆಮಂದಿಯೊಂದಿಗೆ ನಾವೂ ಸುಟ್ಟು ಬೂದಿಯಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಆ ಬಳಿಕ ಮನೆ ತೆರವು ಕಾರ್ಯವನ್ನು ಬಿಬಿಎಂಪಿ ಅಧಿಕಾರಿಗಳು ನಿಲ್ಲಿಸಿದ್ದು, ಪೊಲೀಸರು ದಂಪತಿಯ ಮನವೊಲಿಸುತ್ತಿದ್ದಾರೆ. ಪೊಲೀಸರು ನಮ್ಮನ್ನು ತಡೆದು ಮನೆ ತೆರವಿಗೆ ಅನುವು ಮಾಡಿಕೊಟ್ಟರೆ ನಾವು ಆತ್ಮಹತ್ಯೆ ಮಾಡದೇ ಬಿಡುವುದಿಲ್ಲ ಎಂದು ದಂಪತಿ ಹೇಳಿದ್ದು, ಈ ಕಾರಣಕ್ಕಾಗಿ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು