ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅರವಿಂದ ಕೇಜ್ರಿವಾಲ್ ಬಂಧನ ವಿರೋಧಿಸಿ ಮಾ.31ಕ್ಕೆ ಬೃಹತ್ ಪ್ರತಿಭಟನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಅರವಿಂದ ಕೇಜ್ರಿವಾಲ್ ಬಂಧನ ವಿರೋಧಿಸಿ ಮಾ.31ಕ್ಕೆ ಬೃಹತ್ ಪ್ರತಿಭಟನೆ

ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ಖಂಡಿಸಿ ಹಾಗೂ ಸಂವಿಧಾನದ, ಪ್ರಜಾಪ್ರಭುತ್ವದ ಉಳಿವಿಗಾಗಿ ಮೋದಿ ಸರ್ಕಾರದ ದುಷ್ಕೃತ್ಯಗಳನ್ನು ವಿರೋಧಿಸಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದ ಮುಖಂಡರನ್ನು ಒಳಗೊಂಡಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಇಂದು ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಾರ್ಚ್ 31ರಂದು ಭಾನುವಾರ ನಗರದ ಫ್ರೀಡಂ ಪಾರ್ಕ್’ನಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಎಎಪಿ ಹಾಗೂ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಲಿದ್ದಾರೆ. ಮೋದಿ ಸರ್ಕಾರದ ಕ್ರೌರ್ಯವನ್ನು ವಿರೋಧಿಸಿ ಜನಸಾಮಾನ್ಯರೂ ಸ್ವಇಚ್ಛೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಮೋದಿ ಸರ್ಕಾರಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಲಿದ್ದೇವೆ ಎಂದು ಮೋಹನ್ ದಾಸರಿ ವಿವರಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮುಂತಾದ ತನಿಖಾ ಸಂಸ್ಥೆಗಳ ಮೂಲಕ ವಿರೋಧಿ ಮುಖಂಡರನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ಚೀನಾ, ರಷ್ಯಾ, ದಕ್ಷಿಣ ಕೊರಿಯಾದಂತಹ ರಾಷ್ಟ್ರಗಳಲ್ಲಿ ಸರ್ವಾಧಿಕಾರಿ ಕೃತ್ಯಗಳು ನಡೆಯುತ್ತಿರುವ ಬಗ್ಗೆ ಕೇಳಿದ್ದೆವು. ಆದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತವೂ ಸರ್ವಾಧಿಕಾರದತ್ತ ಜಾರಿರುವುದು ಆಘಾತಕಾರಿಯಾಗಿದೆ. ಇದನ್ನು ಜನಸಾಮಾನ್ಯರು ಅರಿಯದೆ ಹೋದರೆ, ಎಚ್ಚೆತ್ತುಕೊಳ್ಳದಿದ್ದರೆ ದೊಡ್ಡ ಅಪಾಯ ಕಾದಿದೆ. ಪ್ರಜೆಗಳ ಪರಮೋಚ್ಛ ಹಕ್ಕಾಗಿರುವ ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಪ್ರಜೆಗಳನ್ನು ಎಚ್ಚರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮೋಹನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕುಮಾರ್ ಹಾಗೂ ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಭಾಗವಹಿಸಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು