ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ವಿದ್ಯಾರ್ಥಿಗಳು ವಿಶ್ವಜ್ಯೋತಿಗಳಾಗಲಿ – ಡಾ.ಜೋಗಿಲ ಸಿದ್ಧರಾಜು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ವಿದ್ಯಾರ್ಥಿಗಳು ವಿಶ್ವಜ್ಯೋತಿಗಳಾಗಲಿ – ಡಾ.ಜೋಗಿಲ ಸಿದ್ಧರಾಜು

ಬೆಂಗಳೂರು : ಜಾನಪದ ಪರಂಪರೆಯಲ್ಲಿ ನಮ್ಮ ತಾಯಂದಿರು ಹೇಳಿರುವ ‘ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿಗೆ ಚೂಡಾಮಣಿಯಾಗು, ಜಗಕ್ಕೆ ಜ್ಯೋತಿಯೇ ಆಗು’ ಎಂಬ ಮಾತಿನಂತೆ ವಿದ್ಯಾರ್ಥಿಗಳು ವಿಶ್ವಜ್ಯೋತಿಗಳಾಗಬೇಕು ಎಂದು ಅಂತಾರಾಷ್ಟ್ರೀಯ ಜಾನಪದ ಗಾಯಕರಾದ ಡಾ.ಜೋಗಿಲ ಸಿದ್ಧರಾಜು ಅವರು ಅಭಿಪ್ರಾಯಪಟ್ಟರು.ಬೆಂಗಳೂರಿನ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ಹಬ್ಬ-2025’ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಭಿತ್ತಿಚಿತ್ರ ಪ್ರದರ್ಶನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜಾನಪದವು ಅಜ್ಞಾತ ಸೃಜನಶೀಲ ಮನಸ್ಸುಗಳ ಆನುಭಾವಿಕ ನಿರ್ಮಾಣವಾಗಿದೆ. ಅದು ಹುಟ್ಟಿದ್ದು ಜನರ ಪಾದಗಳಿಂದ ಹಾಗೂ ಪದಗಳಿಂದ. ಜಗತ್ತಿಗೆ ಕೇಡಾಗದಂತೆ ತಮ್ಮ ಜೀವನವನ್ನು ಅತ್ಯಂತ ಆರೋಗ್ಯಕರವಾಗಿ ಸೃಜನಶೀಲವಾಗಿಸಿಕೊಂಡವರು ಜಾನಪದರು. ಇದನ್ನು ಇಂದಿನ ಆಧುನಿಕರು ಅರಿತುಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಿ ವಿಶ್ವಮಾನವರಾಗಬೇಕು. ಕುಗ್ರಾಮವೊಂದರಿಂದ ಬಡತನ ಉಂಡು ಬೆಳೆದ ನನ್ನ ಬದುಕು ಹಾಗೂ ಕಲಾಜ್ಞಾನವನ್ನು ವಿಶ್ವಮಟ್ಟಕ್ಕೇರಿಸಿ ಶ್ರೀಮಂತಗೊಳಿಸಿದ್ದೇ ಜಾನಪದ ಎಂದು ತಿಳಿಸಿದರು.ಪ್ರಪಂಚದಾದ್ಯಂತ ಇಂದು ವೇಗಗತಿಯಲ್ಲಿ ಬೆಳೆಯುತ್ತಿರುವ ನಾಗರಿಕತೆಯು ತಾಯಿಬೇರನ್ನು ಕತ್ತರಿಸಿಕೊಂಡು ತಬ್ಬಲಿಯೂ ಆಗಬಾರದು ಮತ್ತು ವಿವೇಕಹೀನವೂ ಆಗಬಾರದು. ಜೀವಪರವಾದ ಮೌಲ್ಯಗಳನ್ನು ತಮ್ಮೊಳಗೆ ಅಂತಸ್ಥ ಮಾಡಿಕೊಂಡು ಸರ್ವಜನರೊಂದಿಗೆ ಸಾಮರಸ್ಯದಿಂದ ಬಾಳಬೇಕು. ಇಂದು ಎಲ್ಲರೂ ಓದುತ್ತಾ ಜ್ಞಾನ ಸಂಪಾದನೆ ಮಾಡುತ್ತಿದ್ದಾರಾದರೂ ಎಷ್ಟು ಜನರು ಮಾನವೀಯತೆಯಿಂದ ವರ್ತಿಸುತ್ತಿದ್ದಾರೆ ಎಂಬುದು ಪ್ರಶ್ನೆಯಾಗಿದೆ. ನಮ್ಮ ಬಾಳಿಗೆ ಬೇಕಾದ ಅಪರಿಮಿತ ಅರಿವು ಜಾನಪದರಾದಿಯಾಗಿ ನಮ್ಮ ಕನ್ನಡ ಸಾಹಿತ್ಯ ಪರಂಪರೆಯಿಂದ ದೊರೆಯುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವಿಯ ಮಾನವಿಕ ಹಾಗೂ ಸಮಾಜ ವಿಜ್ಞಾನ ನಿಕಾಯದ ನಿರ್ದೇಶಕರಾದ ರೆ.ಫಾ.ಡಾ.ಜೋಶಿ ಮ್ಯಾಥ್ಯೂ ಅವರು ವಹಿಸಿದ್ದರು. ಮಾನವಿಕ ನಿಕಾಯದ ಡೀನರಾದ ಡಾ.ಗೋಪಕುಮಾರ್ ಎ.ವಿ ಹಾಗೂ ಸಮಾಜ ವಿಜ್ಞಾನ ಹಾಗೂ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಕಾವೇರಿ ಸ್ವಾಮಿ ಅವರು ಅತಿಥಿಗಳಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಸ್ವಾಗತಿಸಿದರು. ಕನ್ನಡ ಹಬ್ಬ-೨೦೨ರ ಸಂಯೋಜಕರಾದ ಡಾ.ಎಂ.ಭೈರಪ್ಪ ಸಾಂಸ್ಕೃತಿಕ ಸ್ಪರ್ಧಾ ವಿಜೇತರ ವಿವರ ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರೊ.ಎನ್.ಚಂದ್ರಶೇಖರ್ ಅವರು ವಂದಿಸಿದರು. ಕನ್ನಡ ಅಧ್ಯಾಪಕರಾದ ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ಡಾ.ಕಿರಣಕುಮಾರ್ ಹೆಚ್.ಜಿ ಉಪಸ್ಥಿತರಿದ್ದರು. ಕನ್ನಡ ಹಬ್ಬ ನಿಮಿತ್ತವಾಗಿ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಸಾಹಿತ್ಯ ವೇದಿಕೆಯ ವಿದ್ಯಾರ್ಥಿ ಸಂಚಾಲಕರಾದ ಕುಮಾರಿ ಧೃತಿ ಹಾಗೂ ಕುಮಾರ ನಿತಿನ್ ಗೌಡ ನಿರ್ವಹಿಸಿದರು ಇನ್ನಿತರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು