ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನರೇಗಾ ಕೂಲಿಕಾರರ ಮಗನಿಗೆ ಘಟಿಕೋತ್ಸವದಲ್ಲಿ 7 ಚಿನ್ನದ ಪದಕ. ಬಡ ವಿದ್ಯಾರ್ಥಿಯ ಶೈಕ್ಷಣಿಕ ಸಾಧನೆಗೆ ಸಹಕಾರಿಯಾದ ನರೇಗಾ ಕೂಲಿ ಹಣ

P

Peepal Media • ರಾಜ್ಯ

• 2 ನಿಮಿಷದ ಓದು

ನರೇಗಾ ಕೂಲಿಕಾರರ ಮಗನಿಗೆ ಘಟಿಕೋತ್ಸವದಲ್ಲಿ 7 ಚಿನ್ನದ ಪದಕ. ಬಡ ವಿದ್ಯಾರ್ಥಿಯ ಶೈಕ್ಷಣಿಕ ಸಾಧನೆಗೆ ಸಹಕಾರಿಯಾದ ನರೇಗಾ ಕೂಲಿ ಹಣ

ಕಾರವಾರ, ಸೆ.24(ಕರ್ನಾಟಕ ವಾರ್ತೆ) ಸಮಾಜದ ಹಲವು ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಬಡತನದ ಹೊಡೆತಕ್ಕೆ ಸಿಲುಕಿ ಕಮರಿದ ಉದಾಹರಣೆಗಳ ನಡುವೆಯೇ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ರಾಮಚಂದ್ರ ಮತ್ತು ಬಮ್ಮವ್ವ ಖಿಲಾರಿ ಕುಟುಂಬ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಪಂ ನಿಂದ ಕೈಗೊಳ್ಳುವ ಸಮುದಾಯ ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರಂತರವಾಗಿ ಕೂಲಿ ಕೆಲಸ ಮಾಡಿ, ನರೇಗಾ ಕೂಲಿ ಹಣದಲ್ಲಿಯೇ ಮಗ ಮಯೂರನಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿ ವಿದ್ಯಾಭ್ಯಾಸ ಮಾಡಿಸಿದ್ದು, ಸ್ನಾತಕೋತ್ತರ ವಿದ್ಯಾರ್ಥಿ ಮಯೂರನೂ ಸಹ ಕಾಲೇಜ್‌ನ ರಜೆ ಅವದಿಯಲ್ಲಿ ಗ್ರಾಮಕ್ಕೆ ಬಂದಾಗ ನರೇಗಾ ಕೂಲಿ ಕೆಲಸ ನಿರ್ವಹಿಸುವ ಮೂಲಕ ಉತ್ತಮ ಅಧ್ಯಯನ ನಡೆಸಿ ಪ್ರಸ್ತುತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 74ನೇ ಘಟಿಕೋತ್ಸದಲ್ಲಿ ರಾಜ್ಯಶಾಸ್ತ್ರ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ಏಳು ಚಿನ್ನದ ಪದಕ ಪಡೆದು ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದ ರಾಮಚಂದ್ರ ಖಿಲಾರಿ ಕುಟುಂಬ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಯ ಕೆಲಸದ ಮೇಲೆ ಅವಲಂಬಿತವಾಗಿದ್ದು, 2022 ರಿಂದ 2024ರ ವರೆಗೆ ನಿರಂತರವಾಗಿ ಕೂಲಿ ಕೆಲಸ ನಿರ್ವಹಿಸುತ್ತಿದೆ. ಅಲ್ಲದೇ ನರೇಗಾ ಕೂಲಿ ಹಣದಲ್ಲಿಯೇ ಮಗ ಮಯೂರನ ವಿದ್ಯಾಭ್ಯಾಸದ ಖರ್ಚುವೆಚ್ಛ, ಮನೆಯ ನಿರ್ವಣೆ ಹೊಣೆಯನ್ನ ನಿಭಾಯಿಸಿಕೊಂಡು ಬರುತ್ತಿದೆ.
2022-23ನೇ ಸಾಲಿನಲ್ಲಿ 70 ದಿನ ಕೆಲಸ ಮಾಡಿ ಒಟ್ಟು 21630 ರೂ. ಕೂಲಿ, 2023-24ನೇ ಸಾಲಿನಲ್ಲಿ 97 ದಿನ ಕೂಲಿ ಕೆಲಸ ಮಾಡಿ ಒಟ್ಟು 30652 ರೂ ಕೂಲಿ ಹಾಗೂ 2024-25ನೇ ಸಾಲಿನಲ್ಲಿ ಈವರೆಗೆ 29 ದಿನ ಕೂಲಿ ಕೆಲಸ ಮಾಡಿ ಒಟ್ಟು 10121 ರೂ ಕೂಲಿ ಹಣವನ್ನ ಪಡೆದುಕೊಂಡಿದೆ. ಒಟ್ಟಾರೆಯಾಗಿ ನರೇಗಾದಡಿ ಕಳೆದ 3 ವರ್ಷದಲ್ಲಿ 196 ದಿನ ಕೂಲಿ ಕೆಲಸ ಮಾಡಿ ಒಟ್ಟು 62403 ರೂಪಾಯಿ ಕೂಲಿ ಹಣ ಪಡೆದಿದೆ. ನರೇಗಾ ಕೂಲಿ ಕೆಲಸದಿಂದ ಗಳಿಸಿದ ಈ ಹಣವನ್ನು ಮಗ ಮಯೂರನ ಸ್ನಾತಕೋತ್ತರ ವ್ಯಾಸಾಂಗಕ್ಕೆ ಬಳಸಿದ್ದು, ಅತ್ಯಂತ ಕಷ್ಟಕರ ಸಂದರ್ಭದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ನೆರವಾಗಿದೆ.

ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಪೂರಕವಾಗಿದ್ದು, ಹೊಸಳ್ಳಿ ಗ್ರಾಮದಲ್ಲಿ ರಾಮಚಂದ್ರ ಮತ್ತು ಬಮ್ಮವ್ವ ಖಿಲಾರಿ ದಂಪತಿ ಸೇರಿದಂತೆ ಎರಡು ಜನ ಗಂಡು ಮಕ್ಕಳನ್ನೊಳಗೊಂಡ ನಾಲ್ಕು ಜನರ ನಮ್ಮ ಕುಟುಂಬ ಸ್ವಂತ ಜಮೀನು ಇರದ ಕಾರಣ ಗ್ರಾಮ ಪಂಚಾಯತಿಯಿAದ ನರೇಗಾದಡಿ ಕೈಗೊಂಡ ಸಮುದಾಯ ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರಂತರವಾಗಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದೆ.

ಕಡು ಬಡತನದಲ್ಲಿಯೂ ಮಗನಿಗೆ ಧಾರವಾಡ ವಿಶ್ವವಿದ್ಯಾಲಯದಲ್ಲಿ ಓದಲು ಅನುಕೂಲ ಮಾಡಿಕೊಟ್ಟೆವು. ಮನೆಯ ಪರಿಸ್ಥಿತಿ ಅರಿತ ಮಗ ಕಾಲೇಜಿನ ರಜೆಯ ದಿನಗಳಲ್ಲಿ ಗ್ರಾಮಕ್ಕೆ ಬಂದಾಗ ಸ್ವತಃ ನರೇಗಾ ಕೂಲಿ ಕೆಲಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅದಲ್ಲದೇ ಕೆಲವು ಸಂದರ್ಭಗಳಲ್ಲಿ ಪೋಷಕರಿಗೂ ಸಹಾಯಕನಾಗಿ ಕೆಲಸ ಮಾಡಿದ್ದಾನೆ. ಮಗನ ಸಾಧನೆಗೆ ಬಡತನ, ಸಿರಿತನ ಅಡ್ಡಿಯಾಗಲಿಲ್ಲ. ಸಾಧಿಸುವ ಛಲ, ಆತ್ಮಸ್ಥೈರ್ಯ, ಪೋಷಕರ ಬೆಂಬಲದೊAದಿಗೆ ಉತ್ತಮವಾಗಿ ಓದಿ ಗ್ರಾಮಕ್ಕೆ ಕೀರ್ತಿ ತಂದಿರುವುದಕ್ಕೆ ತುಂಬಾ ಖುಷಿಯಾಗಿದೆ ಎನ್ನುತ್ತಾರೆ ವಿದ್ಯಾರ್ಥಿಯ ತಂದೆ ರಾಮಚಂದ್ರ ಖಿಲಾರಿ.

ಮನೆಯಲ್ಲಿ ಬಡತ ತಾಂಡವಾಡುತ್ತಿದ್ದ ಕಾರಣಕ್ಕೆ ಮೊದಲಿಗೆ ಉನ್ನತ ಶಿಕ್ಷಣ ಪೂರೈಸುವ ಕುರಿತು ಆತಂಕ ಎದುರಾಗಿತ್ತು. ಆದರೆ ನರೇಗಾದಡಿ ಕೂಲಿ ಕೆಲಸ ಮಾಡಿ ನಿನ್ನ ಓದಿಸುತ್ತೇವೆ ಎಂಬ ಪೋಷಕರ ಬೆಂಬಲ ನನ್ನ ನೆಮ್ಮದಿಯ ಓದಿಗೆ ಉತ್ತೇಜನ ನೀಡಿತು. ನರೇಗಾದಡಿ ಸಿಗುವ ಕೂಲಿ ಕೆಲಸದಿಂದ ಪೋಷಕರು ನೆಮ್ಮದಿಯಿಂದ ಇದ್ದರು. ಹೀಗಾಗಿ ನಿರಾತಂಕವಾಗಿ ಅಭ್ಯಾಸ ಮಾಡಲು ಮಹಾತ್ಮ ಗಾಂಧಿ ನರೇಗಾ ಯೋಜನೆಯು ಆರ್ಥಿಕ ಹಾಗೂ ಮಾನಸಿಕವಾಗಿ ದೈರ್ಯ ತುಂಬಿದರ ಪರಿಣಾಮ ಉತ್ತಮ ಸಾಧನೆ ಸಾಧ್ಯವಾಗಿದೆ ಎನ್ನುತ್ತಾರೆ ಸ್ನಾತಕೋತ್ತರ ವಿದ್ಯಾರ್ಥಿ ಮಯೂರ ಖಿಲಾರಿ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಜರುಗಿದ 74ನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವರು ಹಾಗೂ ಸಮ ಕುಲಾಧಿಪತಿ ಡಾ. ಎಂ.ಸಿ. ಸುಧಾಕರ್ ರವರು ಬಡತನದಲ್ಲಿ ಅರಳಿದ ಪ್ರತಿಭಾವಂತ ವಿದ್ಯಾರ್ಥಿ ಮಯೂರ ಖಿಲಾರಿ ಅವರಿಗೆ ಏಳು ಚಿನ್ನದ ಪದಕ ಹಾಗೂ ಅಭಿನಂದನಾ ಪತ್ರ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ, ಪ್ರೊ. ಎಸ್. ಅಯ್ಯಪ್ಪನ್ ಅಧ್ಯಕ್ಷರು ಎನ್ ಎ ಬಿ ಎಲ್ ಗುರ್ಗಾಂವ್, ಮಾಜಿ ಕಾರ್ಯದರ್ಶಿ ಡಿ ಎ ಆರ್ ಇ ಡೈರೆಕ್ಟರ್ ಜನರಲ್ ಐ ಸಿ ಎ ಆರ್ ನವದೆಹಲಿ, ಕುಲಪತಿ ಕೇಂದ್ರೀಯ ಕೃಷಿ ವಿದ್ಯಾಲಯ, ಇಂಫಾಲ್ ಅಧ್ಯಕ್ಷರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಬೆಂಗಳೂರು ಇವರು ಉಪಸ್ಥಿತರಿದ್ದರು.

ಮಯೂರ ಖಿಲಾರಿ ಪಡೆದ ಏಳು ಪದಕ: ದಿವಂಗತ ಪ್ರೋ. ಆರ್.ಟಿ. ಜಂಗಮ ಬಂಗಾರದ ಪದಕ, ದಿವಂಗತ ಪ್ರೋ. ಹೆಚ್.ಎಸ್. ಹೊಸಮನಿ ಸ್ಮಾರಕ ಬಂಗಾರದ ಪದಕ, ಪ್ರೋ. ವಿ.ಟಿ. ಪಾಟೀಲ ಬಂಗಾರದ ಪದಕ, ಪ್ರೋ. ಎ.ಎಂ. ರಾಜಶೇಖರಯ್ಯ ಬಂಗಾರದ ಪದಕ, ಶ್ರೀ. ಹರ್ಡೇಕರ ಮಂಜಪ್ಪ ಸ್ಮಾರಕ ಗ್ರಂಥಮಾಲ ಬಂಗಾರದ ಪದಕ, ಶ್ರೀಮತಿ ಪವಿತ್ರಾ ಮತ್ತು ಡಾ. ಹೆಚ್.ಎಂ. ವಿರುಪಾಕ್ಷಯ್ಯ ಬಂಗಾರದ ಪದಕ, ಕೆಎಸ್‌ಎಸ್ ಬಂಗಾರದ ಪದಕ ಸೇರಿದಂತೆ ಒಟ್ಟು ಏಳು ಚಿನ್ನದ ಪದಕ, ಪ್ರಶಸ್ತಿ ಪತ್ರ ಪಡೆದಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version