ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನವೆಂಬರ್‌ 6ಕ್ಕೆ ʼಮಾಧ್ಯಮ ಆತ್ಮಾವಲೋಕನ ಮತ್ತು ಜಾಗೃತಿ ಸತ್ಯಾಗ್ರಹʼ ಕಾರ್ಯಕ್ರಮ

P

Peepal Media Desk • ರಾಜ್ಯ

• 1 ನಿಮಿಷದ ಓದು

ನವೆಂಬರ್‌ 6ಕ್ಕೆ ʼಮಾಧ್ಯಮ ಆತ್ಮಾವಲೋಕನ ಮತ್ತು ಜಾಗೃತಿ ಸತ್ಯಾಗ್ರಹʼ ಕಾರ್ಯಕ್ರಮ

ಬೆಂಗಳೂರು: ಮಾಧ್ಯಮ ಭ್ರಷ್ಟಾಚಾರದ ಸತ್ಯ ಮಿಥ್ಯಗಳ ಕುರಿತು ಪ್ರಬುದ್ಧ ಮನಸ್ಸು,ಪ್ರಬುದ್ಧ ಸಮಾಜ ವೇದಿಕೆ ವತಿಯಿಂದ ದಿನಾಂಕ 06-11-22 ರಂದು ಚರ್ಚೆ–ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ವಿವೇಕಾನಂದ ಹೆಚ್‌ ಅವರು, ಇತ್ತೀಚಿನ ದಿನಗಳಲ್ಲಿ ನಾವುಗಳು ಕಂಡಂತೆ ಸುದ್ದಿ ಮಾಧ್ಯಮಗಳೇ ಸುದ್ದಿಯಾಗಿವೆ. ಹೀಗಾಗಿ ಸಾರ್ವಜನಿಕರು ಇದಕ್ಕೆ ಪ್ರತಿಕ್ರಿಯಿಸಲೇ ಬೇಕಾದಂತಹ ಸಂದರ್ಭ ಹುಟ್ಟಿಕೊಂಡಿದೆ ಎಂದು ತಿಳಿಸಿದ್ದಾರೆ. ಭಾನುವಾರದಂದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ ಐದು ಗಂಟೆಯವರೆಗೆ ಸಂವಾದ ನಡೆಯಲಿದ್ದು, ಚರ್ಚೆಯಲ್ಲಿ ಎಲ್ಲಾ ಕ್ಷೇತ್ರಗಳ, ಎಲ್ಲಾ ವರ್ಗಗಳ, ಎಲ್ಲಾ ವಯಸ್ಸಿನವರು ಕೂಡ ಭಾಗವಹಿಸಬಹುದು ಎಂದು ಕಾರ್ಯಕ್ರಮದ ಆಯೋಜಕರು ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯ ಸೋಗಿನಲ್ಲಿ ಲಕ್ಷಗಟ್ಟಲೆ ನಗದು ಹಣ ನೀಡಿರುವ ಸಂಗತಿ ಬಯಲಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮ ಕ್ಷೇತ್ರದ ಭ್ರಷ್ಟಾಚಾರದ ಕುರಿತು ಅಲ್ಲಲ್ಲಿ ಚರ್ಚೆ ನಡೆಯುತ್ತಿದೆ. ಈ ಭ್ರಷ್ಟಾಚಾರ ಹಗರಣವನ್ನು ʻಪೀಪಲ್‌ ಮೀಡಿಯಾʼ ಬಯಲು ಮಾಡಿದ ಬಳಿಕ ಲೋಕಾಯುಕ್ತದಲ್ಲಿ ಸಹ ದೂರು ದಾಖಲಾಗಿದೆ.

ʼಸಮಾಜದ ಎಲ್ಲ ರಂಗಗಳ ಭ್ರಷ್ಟಾಚಾರದ ಕುರಿತು ಮಾತನಾಡುವ ಮಾಧ್ಯಮಗಳು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ನಾವು ಕೂಡ ಸಮಾಜಕ್ಕೆ ಲೆಕ್ಕ ಕೊಡಬೇಕುʼ ಎಂಬ ನಿಟ್ಟಿನಲ್ಲಿ ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ವೇದಿಕೆ ಈ ಕಾಯ್ರಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಆಯೋಜಕರಾದ ಎಂ. ಯುವರಾಜ್. +91 80508 02019, ವಿವೇಕಾನಂದ ಎಚ್.ಕೆ. 9844013068 ಇವರುಗಳನ್ನು ಸಂಪರ್ಕಿಸಬಹುದಾಗಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version