ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೂಢನಂಬಿಕೆಗಳಿಂದ ಹೊರಬಂದು ಮುಟ್ಟನ್ನು ಸಹಜ ದೈಹಿಕ ಪ್ರಕ್ರಿಯೆ ಎನ್ನುವಂತೆ ನೋಡಬೇಕು: ಶಿವಾನಂದ ವಿ ಪಿ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಮೂಢನಂಬಿಕೆಗಳಿಂದ ಹೊರಬಂದು ಮುಟ್ಟನ್ನು ಸಹಜ ದೈಹಿಕ ಪ್ರಕ್ರಿಯೆ ಎನ್ನುವಂತೆ ನೋಡಬೇಕು: ಶಿವಾನಂದ ವಿ ಪಿ

ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮೇ 28 ರಂದು ಕೊಪ್ಪಳ ನಗರದ ದೇವರಾಜ ಅರಸು ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಇವರು ಮಾತನಾಡಿ, ಪ್ರತಿ ವರ್ಷ ಮೇ-28 ರಂದು ವಿಶ್ವ ಮುಟ್ಟಿನ ನೈರ್ಮಲ್ಯ ದಿನ ಜಾಗೃತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ಋತುಚಕ್ರ ನೈರ್ಮಲ್ಯದ (ಸ್ವಚ್ಛತೆ) ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದಾಗಿದೆ. ಮುಟ್ಟು ಇದೊಂದು ದೇವರು ಕೊಟ್ಟಂತಹ ನಿಸರ್ಗದ ಕೊಡುಗೆಯಾಗಿದೆ. ಪ್ರತಿ ಹೆಣ್ಣು ಮಕ್ಕಳು ಸಂಭ್ರಮ ಪಡುವಂತಹ ವಿಷಯವಾಗಿದೆ. ಪ್ರತಿ ತಿಂಗಳು 28-30 ದಿನಗಳಿಗೊಮ್ಮೆ ಮುಟ್ಟಾಗುವುದು ಸಹಜ. ಇದು ಯಾವುದೇ ಶಾಪವಲ್ಲ. ದೇವರು ನೀಡಿದ ವರದಾನವಾಗಿದೆ. ಈ ಸಮಯದಲ್ಲಿ ಕೆಲವು ಹೆಣ್ಣು ಮಕ್ಕಳು ದೇವರ ಕೋಣೆಗೆ ಹೋಗುವುದು ನಿಷೇಧ, ಸಭೆ ಸಮಾರಂಭಗಳಲ್ಲಿ ಭಾಗವಹಿಸದಿರುವುದು, ಒಂದು ಕಡೆ ಕುಳಿತುಕೊಳ್ಳುವುದು, ಇನ್ನಿತರ ಮೂಢನಂಬಿಕೆಯಿಂದ ಬಳಲುತ್ತಾರೆ. ಇಂತಹ ಮೂಢನಂಬಿಕೆಗಳನ್ನು ಬಿಟ್ಟು ಹೊರಬಂದು ಸಹಜ ಪ್ರಕ್ರಿಯೆಂದು ತಿಳಿದುಕೊಳ್ಳಬೇಕು. ಮುಟ್ಟು ಸಹಜ ಪ್ರಕ್ರಿಯೆ, ಕಳಂಕವಲ್ಲ. ಮುಟ್ಟಿನ ಸಮಯದಲ್ಲಿ ಸ್ವಚ್ಛತೆ ಕಾಪಾಡುವುದು ಅತೀ ಮುಖ್ಯವಾಗಿದೆ. ಮುಟ್ಟಿನ ಸಮಯದಲ್ಲಿ ದಿನ-ನಿತ್ಯ ಸ್ನಾನ ಮಾಡಬೇಕು, ಸ್ಯಾನಿಟರಿ ಪ್ಯಾಡ್/ಸ್ವಚ್ಛವಾದ ಬಟ್ಟೆಯನ್ನು ಉಪಯೋಗಿಸಬೇಕು. ಬಟ್ಟೆಗಳನ್ನು ಸಾಬೂನಿಂದ ತೊಳೆದು ಬಿಸಿಲಿನಲ್ಲಿ ಒಣಗಿಸಬೇಕು. ಉಪಯೋಗಿಸಿದ ಸ್ಯಾನಿಟರಿ ಪ್ಯಾಡ್/ ಬಟ್ಟೆಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಬೇಕು. ಈ ಸಮಯದಲ್ಲಿ ಪೌಷ್ಠಿಕ ಆಹಾರವನ್ನು ಸೇವಿಸಬೇಕು ಅದರಲ್ಲೂ ವಿಶೇಷವಾಗಿ ಕಬ್ಬಿಣಾಂಶ, ಕ್ಯಾಲ್ಸಿಯಂ ಇರುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಬೇಕು ಎಂದು ತಿಳಿಸಿದರು.

ಕೊಪ್ಪಳ ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ ಮಾತನಾಡಿ, ಮುಟ್ಟು ಮಹಿಳೆಯರಲ್ಲಿ ಒಂದು ನೈಸರ್ಗಿಕ ಪ್ರಕ್ರಿಯೆ. ಯುವತಿಯರಲ್ಲಿ ಮೊದಲನೇ ಮುಟ್ಟು 11 ರಿಂದ 16 ವರ್ಷದೊಳಗೆ ಯಾವಾಗಲಾದರೂ ಪ್ರಾರಂಭವಾಗಬಹುದು. ಮುಂದೆ 45-50ನೇ ವರ್ಷಕ್ಕೆ ಮುಟ್ಟು ನಿಲ್ಲುತ್ತದೆ. ಈ ಮದ್ಯದ ಅವಧಿಯಲ್ಲಿ ಮುಟ್ಟಿನ ಸ್ವಚ್ಛತೆ ಬಗ್ಗೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡು ತಮ್ಮ ಆರೋಗ್ಯದ ಕಡೆ ಗಮನ ಹರಿಸುವಂತೆ ಮಾಹಿತಿ ನೀಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕರಿಗೆ ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕೆ. ಮಾತನಾಡಿ, ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ಅನುಭವಿಸುವ ತೊಂದರೆ ಮತ್ತು ಪರಿಹಾರ ಕ್ರಮಗಳು, ಜನನಾಂಗ ಮಾರ್ಗದ ಸೋಂಕು ಹಾಗೂ ಲೈಂಗಿಕ ಸಂಪರ್ಕದ ಸೋಂಕುಗಳು ಬರದಂತೆ ಮುಂಜಾಗ್ರತೆ ವಹಿಸಬೇಕು. ಈ ಸಮಯದಲ್ಲಿ ಪೌಷ್ಠಿಕ ಆಹಾರ ಸೇವಿಸಬೇಕು. ಶಾರೀರಿಕ ಕಾಯಿಲೆಗಳು ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಬಿಸಿ ನೀರಿನಿಂದ ಸ್ನಾನ ಮಾಡಬೇಕು. ತಡೆಯಲಾರದ ನೋವು ಇದ್ದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು. ಪ್ರತಿ 2 ವರ್ಷಕೊಮ್ಮೆ ಗರ್ಭಕಂಠದ ಕ್ಯಾನ್ಸರ್ ಬರದಂತೆ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಪ್ಲಿಪ್ ಚಾರ್ಟ್ ಪುಸ್ತಕ ಬಳಸುವುದರ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಶರಣಪ್ಪ, ರೂಪಾ, ಮೇಲ್ವಿಚಾರಕರಾದ ಜಯಶ್ರೀ, ಬಸಮ್ಮ, ಆಶಾ/ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿಯರು, ತಾಯಂದಿರು, ಕಿಶೋರಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು