ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬರ ಘೋಷಣೆ ಮಾಡಿದ ಮಾತ್ರಕ್ಕೆ ಪರಿಹಾರ ಸಿಗಲ್ಲ – ನಿಯಮ ಪಾಲನೆ ಮಾಡಬೇಕು – ಜಿ.ಪರಮೇಶ್ವರ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಬರ ಘೋಷಣೆ ಮಾಡಿದ ಮಾತ್ರಕ್ಕೆ ಪರಿಹಾರ ಸಿಗಲ್ಲ – ನಿಯಮ ಪಾಲನೆ ಮಾಡಬೇಕು – ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ನಿಯಮಗಳಡಿ ಯಾವುದೇ ಪ್ರದೇಶವನ್ನು ಬರಪೀಡಿತ ಎಂದು ಘೋಷಿಸಿದ ಮಾತ್ರಕ್ಕೆ ಆ ಪ್ರದೇಶ ಪರಿಹಾರಕ್ಕೆ ಅರ್ಹವಾಗುವುದಿಲ್ಲ. ಬರ ಘೋಷಣೆ ಹಾಗೂ ಪರಿಹಾರ ನೀಡುವ ಪ್ರಕ್ರಿಯೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ನಡೆಯಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಮಂಗಳವಾರ ಹುಣಸೂರು ತಾಲೂಕಿನ ಕಟ್ಟೆಮಾಳಲವಾಡಿ ಗ್ರಾಮದಲ್ಲಿ ಬರಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಿಯಮಗಳ ಪ್ರಕಾರ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ಇನ್ನೊಂದು ವಾರದ ಬಳಿಕ ಪರಿಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಲಾಗುವುದು. ನಿಗದಿತ ಮಾನದಂಡಗಳನ್ನು ಪೂರೈಸುವ ಹೆಚ್ಚುವರಿ ಪ್ರದೇಶಗಳಿದ್ದರೆ ಅವುಗಳನ್ನೂ ಬರಪೀಡಿತ ಎಂದು ಘೋಷಿಸಲಾಗುವುದು.

ಮುಂದಿನ ಎರಡು ವಾರಗಳೊಳಗೆ ಸಮಗ್ರ ಬರದ ಕುರಿತ ಮನವಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬಳಿಕ ಕೇಂದ್ರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿವೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಪರಿಹಾರ ನಿಧಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಗದಗದಲ್ಲಿ ಬರಪೀಡಿತ ಪ್ರದೇಶಗಳ ಪರಿಶೀಲನೆ ನಡೆಸುತ್ತಿದ್ದರೆ, ಪರಮೇಶ್ವರ್ ಅವರು ಮೈಸೂರು ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಪರಿಶೀಲನೆಗಳ ಬಳಿಕ ರೈತರಿಗೆ ಯಾವ ರೀತಿಯ ನೆರವು ನೀಡಬೇಕು ಹಾಗೂ ಬೆಳೆ ವಿಮೆಗೆ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು