ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುರತ್ಕಲ್‌ ಟೋಲ್‌ ಹೋರಾಟ: ಹೋರಾಟಗಾರರ ಮನೆಗೆ ನುಗ್ಗಿ ಮಧ್ಯರಾತ್ರಿ ಪೊಲೀಸ್‌ ಕಾರ್ಯಾಚರಣೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಸುರತ್ಕಲ್‌ ಟೋಲ್‌ ಹೋರಾಟ: ಹೋರಾಟಗಾರರ ಮನೆಗೆ ನುಗ್ಗಿ ಮಧ್ಯರಾತ್ರಿ ಪೊಲೀಸ್‌ ಕಾರ್ಯಾಚರಣೆ

ಮಂಗಳೂರು: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟವು ನಿರ್ಣಾಯಕ ಹಂತ ತಲುಪುತ್ತಿದ್ದಂತೆ ಇಂದು ತಡರಾತ್ರಿಯಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಮುಗಿಬಿದ್ದಿದ್ದಾರೆ. ಮಧ್ಯರಾತ್ರಿ 12 ಗಂಟೆಯ ವೇಳೆಗೆ ನೂರಕ್ಕೂ ಹೆಚ್ಚು ಮಂದಿ ಹೋರಾಟಗಾರರ ವಿಳಾಸ ಹಿಡಿದು ಮನೆಮನೆಗೆ ನುಗ್ಗಿ ನೊಟೀಸ್‌ ನೀಡತೊಡಗಿದ್ದಾರೆ. ಹೋರಾಟಗಾರರು ಎರಡು ಲಕ್ಷದ ಬಾಂಡ್‌ ನೊಂದಿಗೆ, ಸರ್ಕಾರಿ ಜಾಮೀನಿನೊಂದಿಗೆ ನಾಳೆ ಬೆಳಿಗ್ಗೆ ಪೊಲೀಸ್‌ ಕಮಿಷನರ್‌ ಕಚೇರಿಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ.

ಅಕ್ಟೋಬರ್‌ 18ರಂದು ಸುರತ್ಕಲ್‌ ಟೋಲ್‌ ತೆರವುಗೊಳಿಸುವ ನಿರ್ಣಾಯಕ ಹೋರಾಟಕ್ಕೆ ಹೋರಾಟಗಾರರು ಕರೆ ನೀಡಿದ್ದರು. ಅಂದು ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟವನ್ನು ಹಮ್ಮಿಕೊಂಡು ಟೋಲ್ ತೆರವುಗೊಳಿಸಲು ತೀರ್ಮಾನಿಸಲಾಗಿತ್ತು. ಈ ಹೋರಾಟ ಕೈ ಬಿಡಬೇಕೆಂದು ಹೋರಾಟ ಸಮಿತಿಯನ್ನು ಜಿಲ್ಲಾಡಳಿತ ವಿನಂತಿಸಿಕೊಂಡಿತ್ತು. ಆದರೆ, ಹೋರಾಟಗಾರರು ಕಳೆದ ಆರು ವರ್ಷಗಳಲ್ಲಿ ಈ ಟೋಲ್ ಗೇಟ್ ತೆರವಿನ ಭರವಸೆಗಳು ಬಂದಿದ್ದರೂ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ, ಹೀಗಾಗಿ ಅದನ್ನು ತೆರೆವುಗೊಳಿಸಿದ ನಂತರವೇ ಹೋರಾಟ ಕೈಬಿಡುವುದಾಗಿ ಇಂದು ನಡೆದ ಜಿಲ್ಲಾಡಳಿತ ಸಭೆಯಲ್ಲೂ ಹೋರಾಟ ಸಮೀತಿ ತಿಳಿಸಿತ್ತು.

ಅ18 ರ NITK ಟೋಲ್‌ ಗೇಟ್‌ ಮುತ್ತಿಗೆ ಕಾರ್ಯಕ್ರಮದ ಪ್ರಚಾರಾಂದೋಲನ

ಈ ಹೋರಾಟಕ್ಕೆ ಬಿಜೆಪಿಯೇತರ ಎಲ್ಲ ರಾಜಕೀಯ ಪಕ್ಷಗಳೂ ಬೆಂಬಲ ನೀಡಿದ್ದವು. ದಿನ ಕಳೆದಂತೆ ಈ ಟೋಲ್‌ ವಿರೋಧಿ ಹೋರಾಟವು ಆಳುವ ಬಿಜೆಪಿ ಸರ್ಕಾರವ ಮೇಲೆ ಒತ್ತಡ ತರುತ್ತಿದ್ದಂತೆ ಹೋರಾಟವನ್ನೇ ಬಗ್ಗುಬಡಿಯುವ ಸರ್ವಾಧಿಕಾರಿ ಧೋರಣೆಯನ್ನು ಮಂಗಳೂರು ಪೊಲೀಸರು ತೋರುತ್ತಿದ್ದಾರೆ. ರಾತ್ರೋರಾತ್ರಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು ಮಹಿಳಾ ಹೋರಾಟಗಾರರ ಮನೆಗೂ ಮಧ್ಯರಾತ್ರಿ ತೆರಳಿ ನೋಟೀಸ್‌ ನೀಡಿದ್ದಾರೆ. ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಮನೆಗೂ ಮಧ್ಯರಾತ್ರಿ ಹನ್ನೆರಡು ಗಂಟೆಯಲ್ಲಿ ಹೋಗಿರುವುದು ತಿಳಿದು ಬಂದಿದೆ. ತುರ್ತು ಪರಿಸ್ಥಿತಿಯನ್ನು ನೆನಪಿಸುವ ಪೊಲೀಸರ ಈ ದಮನಕಾಂಡದ ಕುರಿತು ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ʼಪೊಲೀಸರ ಬೆದರಿಕೆಗೆ ನಾವು ಅಂಜುವುದಿಲ್ಲ. ತುಳುನಾಡ ಜನರು ಎಚ್ಚತ್ತಿದ್ದಾರೆ. ಟೋಲ್‌ ವಿರೋಧಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲʼ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಮಧ್ಯರಾತ್ರಿ ಪೊಲೀಸರನ್ನು ಹೋರಾಟಗಾರರ ಮನೆಗಳಿಗೆ ಕಳುಹಿಸುತ್ತೀರಾ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತರೆ ? ಮಹಿಳಾ ಹೋರಾಟಗಾರರ ಮನೆಗೂ ಕಾಳರಾತ್ರಿ “ಗಂಡಸು” ಪೊಲೀಸರ ದಂಡು !! ಅದಕ್ಕೆಲ್ಲ ಜನ ಹೆದರುವ ಕಾಲ ಮುಗಿದಿದೆ. ತುಳುನಾಡಿನ ಮುಂದೆ ಬೆತ್ತಲಾಗುತ್ತಿದ್ದೀರಿ ಬಿಜೆಪಿಗರೆ ಎಚ್ಚರ” ಎಂದು ಅವರು ತಮ್ಮ ಫೇಸ್ಬುಕ್‌ ಪುಟದಲ್ಲಿ ಬರೆದುಕೊಂಡಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು