ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ಬಡ ಜನರನ್ನುಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ: ಈಶ್ವರ ಖಂಡ್ರೆ

P

Peepal Media • ರಾಜ್ಯ

• 2 ನಿಮಿಷದ ಓದು

3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ಬಡ ಜನರನ್ನುಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ: ಈಶ್ವರ ಖಂಡ್ರೆ

2015ಕ್ಕೆ ಮೊದಲು ತಮ್ಮ ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ಬಡ ಜನರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಸದಾಗಿ ಒತ್ತುವರಿ ಮಾಡುವವರಿಗೆ ಅವಕಾಶ ನೀಡುವುದಿಲ್ಲ ಆದರೆ ದೊಡ್ಡ ಒತ್ತುವರಿ ತೆರವು ಮಾಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದರು.

ಅವರು ಇಂದು, ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಹಾಕಿರುವವರ ಯಾವುದೇ ಅರ್ಜಿ ಪುನರ್ ಪರಿಶೀಲನೆಯಲ್ಲಿದ್ದರೆ ಅಂತಹವರ ಒತ್ತುವರಿ ತೆರವು ಮಾಡಿಸದಂತೆ ಸೂಚಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ಕಳೆದ ವಿಧಾನಮಂಡಳದ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯಿದೆ ಜಾರಿಗೆ 25 ವಷÀðಕ್ಕಿಂತ ಹಿಂದೆ ಅರಣ್ಯದಲ್ಲಿದ್ದವರಿಗೆ ಹಕ್ಕು ನೀಡಬೇಕು ಎಂದು ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದರು.

ಹಾವು ಕಚ್ಚಿ ಸಾವನ್ನಪ್ಪುವವರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಂತೆ ಸಾರ್ವಜನಿಕರಿಂದ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಬೇಡಿಕೆ ಇದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಕಾಡು ಹಂದಿ, ನವಿಲುಗಳಿಂದ ಆಗುತ್ತಿರುವ ಬೆಳೆ ಹಾನಿಯ ಪರಿಹಾರ ಹೆಚ್ಚಳ ಮಾಡಬೇಕು, ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂಬ ಬೇಡಿಕೆ ರೈತರಿಂದ ಬಂದಿದೆ. ಈ ಕುರಿತಂತೆ ಒಂದು ಸಮಿತಿ ಮಾಡಿ ವರದಿ ಬಂದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

7-8 ದಶಕಗಳ ಹಿಂದೆ ಕೆಲವರು ವನ್ಯ ಜೀವಿಗಳನ್ನು ಕೊಂದು, ಸತ್ತ ಪ್ರಾಣಿಯ ಜೊತೆ ಫೋಟೋ ತೆಗೆಸಿಕೊಂಡು ಮನೆಯಲ್ಲಿ ತೂಗುಹಾಕುತ್ತಿದ್ದರು. ಮೋಜಿಗಾಗಿ ಬೇಟೆ ಆಡುತ್ತಿದ್ದರು. ಆದರೆ 1972ರಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಬಳಿಕ ಇಂತಹ ಬೇಟೆ, ಕಳ್ಳಬೇಟೆ ನಿಗ್ರಹವಾಗಿದೆ ಎಂದರು.

ಭೂಮಿಗೆ ಕಾಡು ಭೂಷÀಣ, ಕಾಡಿಗೆ ವನ್ಯ ಜೀವಿ, ಸಸ್ಯ ಸಂಕುಲವೇ ಭೂಷÀಣ. ಇಂತಹ ವನ, ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಮಾನವನ ಬದುಕಿಗೆ ಆಧಾರವಾಗಿರುವ ಅರಣ್ಯ ನಾಶ, ಒತ್ತುವರಿ ಮಾಡಬಾರದು . ಇಡೀ ದೇಶದ ಹವಾಮಾನದ ಮೇಲೆ ಪರಿಣಾಮಬೀರಿ, ಮಳೆ ಉತ್ತಮವಾಗಿ ಬೀಳಲು ಪಶ್ಚಿಮಘಟ್ಟಗಳನ್ನು ಎಲ್ಲರೂ ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ನೀಡಬೇಕು ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.80ರಷ್ಟ್ಟು ಅರಣ್ಯವಿದೆ. ವನ, ವನ್ಯಜೀವಿಗಳ ಜೊತೆ ಸಹಬಾಳ್ವೆ ನಡೆಸುವುದರಲ್ಲಿ ಈ ಜಿಲ್ಲೆಯ ಜನರ ಪಾತ್ರ ಮಹತ್ವದ್ದಾಗಿದ್ದು, ಇಷ್ಟು ಬೃಹತ್ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಿರುವ ಎಲ್ಲರೂ ಅಭಿನಂದನಾರ್ಹರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಹಸಿರೇ ಕಾಣುತ್ತದೆ. ಪಶ್ಚಿಮಘಟ್ಟದ ಸುಂದರ ತಾಣದಲ್ಲಿರುವ ಜಿಲ್ಲೆಯ ಜನರು ಪುಣ್ಯವಂತರು ಎಂದರು.

ನಮ್ಮ ಭೂಗ್ರಹಕ್ಕೆ ವಸುಂಧರೆ ಎನ್ನುವ ಹೆಸರಿದೆ. ಅಂದರೆ ಚಿನ್ನ, ರತ್ನ, ವಜ್ರ, ವೈಢೂರ್ಯಗಳನ್ನು ಹೊಂದಿರುವವಳು ಎಂದರ್ಥ. ಈ ಭೂಮಿ ರತ್ನಗರ್ಭವಷ್ಟೇÃ ಅಲ್ಲ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಮಾನವ ಸಂಕುಲಕ್ಕೂ ಆಶ್ರಯಧಾತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಹತ್ತಾರು ಎಕರೆ ಒತ್ತುವರಿ ಮಾಡಿದವರು ಯಾರೂ ಇಲ್ಲ. ಜೀವಿನೋಪಾಯಕ್ಕೆ 1 ಎಕರೆ ಅರಣ್ಯ ಜಮೀನು ಒತ್ತುವರಿ ಮಾಡಿದ ಬಡವರಿದ್ದಾರೆ. ಅವರ ಜೀವನೋಪಾಯಕ್ಕೆ ತೊಂದರೆ ನೀಡದಂತೆ ಕ್ರಮವಹಿಸಬೇಕು. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ ಸರ್ಕಾರಕ್ಕೆ ಮತ್ತು ಅರಣ್ಯ ಸಚಿವರಿಗೆ ಧನ್ಯವಾದ ಅರ್ಪಿಸಿದ ಅವರು, ನಮ್ಮ ಭಾಗದಲ್ಲಿ ಶೇ.80ರಷ್ಟ್ಟ ಅರಣ್ಯಪ್ರದೇಶವಿದ್ದು, ನಮ್ಮ ಜನರೇ ಇದನ್ನು ಸಂರಕ್ಷಿಸಿದ್ದಾರೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಿದ್ಯಾವಂತರಾದ 75 ಸಾವಿರಕ್ಕೂ ಹೆಚ್ಚು ಜನರು ಅರಣ್ಯದಲ್ಲೇ ವಾಸಿಸುತ್ತಿದ್ದಾರೆ. ಅವರು ಹಲವು ದಶಕಗಳಿಂದ ಅರಣ್ಯದಲ್ಲೇ ಬದುಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯನ್ನು ಇತರ ಜಿಲ್ಲೆಯಂತೆ ನೋಡಬಾರದು. ನಮ್ಮ ಬಡ ಜನರಿಗೆ ನ್ಯಾಯ ದೊರಕಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ-ಕಾಲೇಜು ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಇದಕ್ಕೂ ಮುನ್ನ ಸಚಿವರು , ಅನುಮೋದಿತ ಕಾರ್ಯಯೋಜನೆಯ ಪ್ರಕಾರ ಅರಣ್ಯ ಪ್ರದೇಶಗಳ ಸತ್ತ ಮತ್ತು ಬಿದ್ದ ಮರವನ್ನು ಹೊರತೆಗೆಯುವ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಬಳಿಕ ದಾಂಡೇಲಿಯ ಸರ್ಕಾರಿ ಟಿಂಬರ್ ಡಿಪೋದಲ್ಲಿ ನಾಟಾ ಸಂಗ್ರಹ ಮತ್ತು ಇ-ಹರಾಜು ಪ್ರಕ್ರಿಯೆಯನ್ನು ಪರಿಶೀಲಿಸಿದರು.

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕÀ್ಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ್ ರೆಡ್ಡಿ ,ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಶಾಂತ್ ಕುಮಾರ್, ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version