ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರುಡ್ಸೆಟ್ ಸಂಸ್ಥೆಯ ವತಿಯಿಂದ ಉಚಿತ ಮೊಬೈಲ್ ರಿಪೇರಿ ತರಬೇತಿ ಶಿಬಿರ

P

Peepal Media • ರಾಜ್ಯ

• 1 ನಿಮಿಷದ ಓದು

ರುಡ್ಸೆಟ್ ಸಂಸ್ಥೆಯ ವತಿಯಿಂದ ಉಚಿತ ಮೊಬೈಲ್ ರಿಪೇರಿ ತರಬೇತಿ ಶಿಬಿರ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version