ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೋದಿ ಪ್ರವಾಹ ಬಂದಾಗ, ಬರಗಾಲ ಬಂದಾಗ, ತೆರಿಗೆಯಲ್ಲಿ ಅನ್ಯಾಯವಾದಾಗ ಬರಲಿಲ್ಲ, ಈಗ ಚುನಾವಣೆ ಬಂದಾಗ ಬಂದಿದ್ದಾರೆ: ಸಿಎಮ್

P

Peepal Media Desk • ರಾಜ್ಯ

• 2 ನಿಮಿಷದ ಓದು

ಮೋದಿ ಪ್ರವಾಹ ಬಂದಾಗ, ಬರಗಾಲ ಬಂದಾಗ, ತೆರಿಗೆಯಲ್ಲಿ ಅನ್ಯಾಯವಾದಾಗ ಬರಲಿಲ್ಲ, ಈಗ ಚುನಾವಣೆ ಬಂದಾಗ ಬಂದಿದ್ದಾರೆ: ಸಿಎಮ್

ಮೈಸೂರು ಏ 2: ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.‌

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದರು.

ಮೋದಿಯವರು ಈ ಹತ್ತು ವರ್ಷದಲ್ಲಿ ಸುಳ್ಳು ಹೇಳಿ ಭಾರತೀಯರನ್ನು ಮರಳು ಮಾಡಿದ್ದು ಬಿಟ್ಟರೆ, ಭಾರತೀಯರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲಿಲ್ಲ ಏಕೆ ? ಹತ್ತು ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ ? ಯಾವುದನ್ನೂ ಮಾಡದೆ ಹತ್ತು ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ ಎಂದು ಪ್ರಶ್ನಿಸಿದರು.

ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್ ? ಎಂದು ವ್ಯಂಗ್ಯವಾಡಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಕ್ಕಿ, ಬೇಳೆ , ಎಣ್ಣೆ ಯಾವುದರ ಬೆಲೆಯೂ ಕಡಿಮೆ ಆಗಲಿಲ್ಲ. ಮೋದಿ ಪ್ರಕಾರ ಇದೇ ಅಚ್ಛೆ ದಿನ ಇರಬಹುದು. ಆದರೆ ನಿಜವಾದ ಅಚ್ಛೆ ದಿನ್ ನಿಮ್ಮಗಳಿಗೆ ಯಾರಿಗಾದರೂ, ಒಬ್ಬರಿಗಾದರೂ ಬಂದಿದೆಯಾ ಎಂದು ಪ್ರಶ್ನಿಸಿದರು.

ಚುನಾವಣೆ ಬಂತು ನೋಡಿ- ರಾಜ್ಯಕ್ಕೆ ಮೋದಿ ಬಂದ್ರು ನೋಡಿ

ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ-ಮೋದಿ ರಾಜ್ಯಕ್ಕೆ ಬಂದ್ರು ನೋಡಿ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು. ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದರು.

ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಲಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಬುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದರು.

ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.

ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version