ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಮೈಸೂರು ಅಂಬಾರಿ ವಿವಾದ: ರಾಜಮಾತೆಯ ಅಧಿಕಾರವೋ, ಪ್ರಜಾಪ್ರಭುತ್ವದ ಸಾರ್ವಭೌಮತ್ವವೋ?ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ದೇಶಗಳ ಸರಕು ಹಡಗುಗಳ ಸಂಚಾರಕ್ಕೆ – ಇರಾನ್ ನಿಂದ ಮುಕ್ತ ಅವಕಾಶಕಬ್ಬಿನ ಬೆಲೆ ನಿಗದಿ ವಿವಾದ: ಬೆಳಗಾವಿಯಲ್ಲಿ ಜೈಲ್ ಭರೋ ಚಳವಳಿ, ರೈತರು ಪೊಲೀಸ್ ವಶಕ್ಕೆಎಸ್‌ಐಆರ್ ವೇಳೆ ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದ ಕುಟುಂಬದ 6 ಸದಸ್ಯರ ಹೆಸರು ಮರುಸೇರ್ಪಡೆಗೆ ಹೈಕೋರ್ಟ್ ಆದೇಶಕಬ್ಬಿಗೆ ಪ್ರತಿ ಟನ್‌ಗೆ 3600 ರೂ ನೀಡಲು ನಿರ್ಧರಿಸಿದ್ದೇವೆ – ಸತೀಶ್‌ ಜಾರಕಿಹೊಳಿ ಘೋಷಣೆಮೂರು ತಿಂಗಳ ಬಳಿಕ ಚುನಾವಣಾ ಆಯೋಗದ ನಿರ್ಧಾರ ಬದಲಾವಣೆ: ಐಟಿ ವಿಭಾಗದ ಮೇಲ್ವಿಚಾರಣೆ ಮತ್ತೆ ಹಿರಿಯ ಅಧಿಕಾರಿಗೆಯುಜಿಸಿ ನಿಯಮಗಳ ಮರುಪರಿಶೀಲನೆಗೆ ಸಮಿತಿ ರಚಿಸುವ ಕುರಿತು ಯೋಚಿಸಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರಹಾಸನದಲ್ಲಿ ಜನನುಡಿ ಪೂರ್ವಭಾವಿ ಸಭೆ – ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಬರ ಪರಿಹಾರ 2,500 ರೂ.ನಿಂದ 5,000 ರೂ.ಗೆ ಹೆಚ್ಚಳ – ಡಿ.ಕೆ. ಶಿವಕುಮಾರ್ರೇಷನ್ ಕಾರ್ಡ್ ಇ-ಕೆವೈಸಿಗೆ ಕೇವಲ 10 ದಿನ ಬಾಕಿ – 41.33 ಲಕ್ಷ ಫಲಾನುಭವಿಗಳು ಬಾಕಿ ಉಳಿಕೆಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ – BK ಹರಿಪ್ರಸಾದ್ಓದೋಣ ಬಾ ಗುರು – 3 : ಗ್ರಾಮ ಭಾರತದ ಬದುಕು ಬವಣೆಬೆಂಗಳೂರು | ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆಚರ್ಚೆ ನಡೆಸುವುದು ಬೀದಿಯಲ್ಲಲ್ಲ, ಸಂಸತ್ತಿಗೆ ಬನ್ನಿ: ರಾಹುಲ್‌ ಗಾಂಧಿಗೆ ಅಮಿತ್‌ ಶಾ ತಿರುಗೇಟುಹವಾಮಾನ ಬದಲಾವಣೆ ಎದುರಿಸಲು ಜಗತ್ತು ಸಿದ್ಧವಾಗಿಲ್ಲ! ವಾರ್ಷಿಕ 305 ಬಿಲಿಯನ್ ಡಾಲರ್ ಅಗತ್ಯ: ವಿಶ್ವಸಂಸ್ಥೆ ವರದಿಭವ್ಯ ದೃಶ್ಯ ವೈಭವಕ್ಕೆ ಮೆಚ್ಚುಗೆ, ಕಥೆಯ ಆಳಕ್ಕೆ ಟೀಕೆ: ಜಾಗತಿಕ ಮಟ್ಟದಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದ ‘ರಾಮಾಯಣ’!ಬಸ್‌ ದರ ಏರಿಕೆ | ಮೆಜೆಸ್ಟಿಕ್‌ ಬಸ್‌ ಸ್ಟ್ಯಾಂಡಿನಲ್ಲಿ ಭಿಕ್ಷೆ ಬೇಡಿ ಪ್ರತಿಭಟಿಸಿದ ಬಿಜೆಪಿ; ಅಶೋಕ್‌ ಸೇರಿದಂತೆ ಹಲವರು ವಶಕ್ಕೆಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಪಾಲು ನೀಡಿ: ಐಟಿ ಕಂಪನಿಗಳಿಗೆ ಡಿ.ಕೆ. ಶಿವಕುಮಾರ್ ಮನವಿಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲವೇ? ಭಾಷೆ, ಸ್ಥಳೀಯರ ಹಕ್ಕು ಮತ್ತು ಕಾರ್ಪೊರೇಟ್ ಹೊಣೆಗಾರಿಕೆಯ ಸುತ್ತ ಹೊಸ ಸಂಘರ್ಷ!ಬೆಳಗಾವಿಯಲ್ಲಿ ಕಬ್ಬಿನ ದರ ವಿವಾದಕ್ಕೆ ತಾತ್ಕಾಲಿಕ ತೆರೆ; ಟನ್‌ಗೆ ₹3,600 ನಿಗದಿ

ಸುಳ್ಳು ಹೇಳಿದರೂ ಜನ ಮೋದಿ ಮೋದಿ ಅಂತಾರೆ ಅಂತ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಸುಳ್ಳು ಹೇಳಿದರೂ ಜನ ಮೋದಿ ಮೋದಿ ಅಂತಾರೆ ಅಂತ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಮೈಸೂರು ಏ 13: ಸುಳ್ಳು ಹೇಳಿದರೆ ಜನ ಮೋದಿ ಮೋದಿ ಅಂತಾರೆ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದ್ರು, ವಿದೇಶದಿಂದ ಕಪ್ಪು ಹಣ ತರ್ತೀನಿ ಅಂದ್ರು, ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ್ರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಡೀಸೆಲ್- ಪೆಟ್ರೋಲ್-ಗ್ಯಾಸ್-ರಸಗೊಬ್ಬರದ ಬೆಲೆ ಕಡಿಮೆ ಮಾಡ್ತೀವಿ ಅಂದ್ರು, ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಿಸ್ತೀವಿ ಅಂದರು. ಹೀಗೆ ರಾಶಿ ರಾಶಿ ಸುಳ್ಳುಗಳ ಮೂಲಕವೇ ಭಾರತೀಯರನ್ನು ನಿರಂತರವಾಗಿ ಬಕ್ರಾ ಮಾಡಿ ವಂಚಿಸಿದರು. ಹತ್ತು ವರ್ಷಗಳ ಕಾಲ ನಿಮ್ಮನ್ನು ವಂಚಿಸಿದವರಿಗೇ ಮತ ಹಾಕೋಕೆ ನಿಮಗೆ ಮನಸ್ಸು ಬರತ್ತಾ ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದವರು ಯಾರು, ಮಹಿಳಾ-ಮಕ್ಕಳ ಆಸ್ಪತ್ರೆ ಮಾಡಿದವರು ಯಾರು, ಶಾಲೆ-ಹಾಸ್ಟೆಲ್ ಗಳನ್ನು ಮಾಡಿದವರು ಯಾರು, ಮೈಸೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಕೊಟ್ಟ ಸರ್ಕಾರ ಯಾವುದು ಎನ್ನುವುದು ಮೈಸೂರಿನ ಪ್ರತಿ ಪ್ರಜ್ಞಾವಂತರಿಗೂ ಗೊತ್ತು. ನಾವು ಮಾಡಿದಷ್ಟು ಕೆಲಸವನ್ನು ಮಾಡಲು ಬಿಜೆಪಿಗೂ ಅವಕಾಶ ಇತ್ತು. ಜನ ಅವಕಾಶ ಕೊಟ್ಟಿದ್ದರು. ಆದರೆ ಈ ಅವಕಾಶ ಸಿಕ್ಕಾಗ ಬಿಜೆಪಿ ಸಂಸದರು ಕೆಲಸ ಮಾಡಲಿಲ್ಲ. ಹೀಗಾಗಿ ನುಡಿದಂತೆ ನಡೆದು ಅಭಿವೃದ್ಧಿಯ ದಿಕ್ಕಲ್ಲಿ ಮುನ್ನುಗ್ಗುತ್ತಿರುವ ನಮಗೆ ಅವಕಾಶ ಕೊಡಿ. ಸಾಮಾನ್ಯ ಕಾರ್ಯಕರ್ತರಾಗಿ ಹೋರಾಟ, ಪ್ರತಿಭಟನೆಗಳಿಂದ ಬೆಳೆದ ಎಂ.ಲಕ್ಷ್ಮಣ್ ಅವರನ್ನು ಈ ಬಾರಿ ಗೆಲ್ಲಿಸಿ ಎಂದು ಕರೆ ನೀಡಿದರು.

ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು,ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ. ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಬಡವರು, ದುಡಿಯವ ವರ್ಗಗಳ ಪರವಾಗಿ, ಮಹಿಳೆಯರ ಪರವಾಗಿ ಮಾಡಿದ ಒಂದೇ ಒಂದು ಕೆಲಸ ಯಾರಿಗಾದರೂ ಗೊತ್ತಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಕೇವಲ ಸುಳ್ಳುಗಳನ್ನು ಸೃಷ್ಟಿಸಿ, ಭಾವನಾತ್ಮಕವಾಗಿ ಕೆರಳಿಸದವರಿಗೆ ಮತ ಹಾಕಿದರೆ ನೀವು ಮೋಸಹೋದಂತೆ ತಾನೇ ಎಂದು ಪ್ರಶ್ನಿಸಿದರು.

ಮತ ಕೇಳೋದಕ್ಕೆ ಮೋದಿಯವರಿಗೆ ಮುಖ ಇದೆಯಾ?

ನಾಳೆ ಮೈಸೂರಿಗೆ ಬರುತ್ತಿರುವ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ. ಮೋದಿಯವರಾಗಲೀ, ಇವರ ಸಂಸದರಾಗಲೀ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ. ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು, ಹೀಗಿದ್ದಾಗ ಮೋದಿಯವರು ಯಾವ ಮುಖ ಹೊತ್ಕೊಂಡು ರಾಜ್ಯಕ್ಕೆ ಬರ್ತಾರೆ? ಯಾವ ಮುಖ ಹೊತ್ತಕೊಂಡು ಮತ ಕೇಳ್ತಾರೆ ಎಂದು ಪ್ರಶ್ನಿಸಿದರು.‌

ಇಂದಿರಾಗಾಂಧಿ 20 ಅಂಶಗಳ ಕಾರ್ಯಕ್ರಮ ಕೊಟ್ಟರು. ಮೋದಿ ಒಂದಂಶದ ಕಾರ್ಯಕ್ರಮವನ್ನೂ ಕೊಡಲಿಲ್ಲ

ಸ್ವಾತಂತ್ರ್ಯಾ ನಂತರ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಕಾಂಗ್ರೆಸ್. ಬಡತನ ನಿರ್ಮೂಲನೆಗೆ ಇಂದಿರಾಗಾಂಧಿಯವರು 20 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು. ಕೇವಲ ಅತ್ಯಂತ ಶ್ರೀಮಂತರಿಗಾಗಿ ಕೆಲಸ ಮಾಡಿದ ಮೋದಿ ಬಡವರಿಗಾಗಿ, ಬಡತನ ಹೋಗಲಾಡಿಸಲು ಒಂದಂಶದ ಕಾರ್ಯಕ್ರಮವನ್ನೂ ಏಕೆ ಕೊಡಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಿಜೆಪಿಗೆ ಒಂದೂ ಸೀಟು ಕೊಡಬೇಡಿ ಎಂದು ಕರೆ ನೀಡಿದರು.‌

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು