ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿರೋಧ ಪಕ್ಷಗಳ ಜನ ನಾಯಕರನ್ನು CBI, ED, IT ಹೆಸರಲ್ಲಿ ಹೆದರಿಸಿ, ಬೆದರಿಸಿ ಮೋದಿ ದರ್ಬಾರು ನಡೆಸುತ್ತಿದ್ದಾರೆ: ಸಿ ಎಂ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ವಿರೋಧ ಪಕ್ಷಗಳ ಜನ ನಾಯಕರನ್ನು CBI, ED, IT ಹೆಸರಲ್ಲಿ ಹೆದರಿಸಿ, ಬೆದರಿಸಿ ಮೋದಿ ದರ್ಬಾರು ನಡೆಸುತ್ತಿದ್ದಾರೆ: ಸಿ ಎಂ ಸಿದ್ದರಾಮಯ್ಯ

ಸಂಡೂರು ನ 8: ವಿರೋಧ ಪಕ್ಷಗಳ ಜನ ನಾಯಕರನ್ನು CBI, ED, IT ಹೆಸರಲ್ಲಿ ಹೆದರಿಸಿ, ಬೆದರಿಸಿ ಮೋದಿ ದರ್ಬಾರು ನಡೆಸುತ್ತಿದ್ದಾರೆ. ಬಿಜೆಪಿಯ ಬೆದರಿಕೆ, ಷಡ್ಯಂತ್ರ, ಕುತಂತ್ರಗಳಿಗೆ ಈ ಉಪ ಚುನಾವಣೆಯಲ್ಲಿ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಕುಡುತಿನಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾಡಿದ ಭಾಷಣದ ಇತರೆ ಮುಖ್ಯಾಂಶಗಳು:

*ಪ್ರಧಾನಿಗಳಾದ ನರೇಂದ್ರ ಮೋದಿಯಾಗಲಿ, ಬಿಜೆಪಿಯವರಾಗಲೀ ಒಂದೇ ಒಂದು ದಿನ ನಮ್ಮ ಜನರ ದಿನನಿತ್ಯದ ಸಮಸ್ಯೆಗಳ ಬಗ್ಗೆ ಮಾತಾಡೋದಿಲ್ಲ.

*ಬೆಲೆ ಏರಿಕೆ ಬಗ್ಗೆ ಮಾತಾಡಲ್ಲ
*ನಿರುದ್ಯೋಗ ಸಮಸ್ಯೆ ಬಗ್ಗೆ ಮಾತಾಡಿಲ್ಲ ಯ
*ರೂಪಾಯಿ ಮೌಲ್ಯ ಕುಸಿಯುತ್ತಿರುವುದರ ಬಗ್ಗೆ ಮಾತಾಡಲ್ಲ
*ರೈತ, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಮಾತಾಡಿಲ್ಲ.
*ವಿದೇಶದಿಂದ ಕಪ್ಪು ಹಣ ತರಲಿಲ್ಲ.
*ನಿಮ್ಮ ಅಕೌಂಟಿಗೆ 15 ಲಕ್ಷ ಹಾಕಲಿಲ್ಲ
*ಉದ್ಯೋಗ ಸೃಷ್ಟಿ ಮಾಡುವುದಿರಲಿ, ಇರುವ ಉದ್ಯೋಗಗಳೇ ಬಂದ್ ಆಗುವಂತೆ ಮಾಡಿದರು.

*ಕೇವಲ ಕೇಂದ್ರದ ತನಿಖಾ ಸಂಸ್ಥೆಗಳಾದ CBI, ED, IT ಉಪಯೋಗಿಸಿಕೊಂಡು ವಿರೋಧ ಪಕ್ಷದ ನಾಯಕರುಗಳನ್ನು ಹೆದರಿಸಿ, ಬೆದರಿಸಿಕೊಂಡು ತಮ್ಮ ಹುಳುಕುಗಳ ಬಗ್ಗೆ ಯಾರೂ ಮಾತಾಡದಂತೆ ಷಡ್ಯಂತ್ರ ನಡೆಸುತ್ತಿದ್ದಾರೆ.

*ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಇವರ ಯೋಗ್ಯತೆಗೆ ಸರಿಯಾದ ರಸ್ತೆ ಮಾಡಲಿಲ್ಲ. ಹೊಸ ರಸ್ತೆಗಳು ಮಾಡುವುದಿರಲಿ ರಸ್ತೆ ಗುಂಡಿಗಳನ್ನೂ ಸಮರ್ಪಕವಾಗಿ ಮುಚ್ಚಲಿಲ್ಲ.

*ಅತ್ಯಂತ ಹಿಂದುಳಿದ ತಾಲ್ಲುಕು ಎನ್ನುವ ಪಟ್ಟಿಯಲ್ಲಿದ್ದ ಸಂಡೂರನ್ನು ಪ್ರಗತಿಯ ಪಥದಲ್ಲಿ ಧಾಪುಗಾಲು ಹಾಕುವಂತೆ ಮಾಡಿದ್ದು ಶಾಸಕರಾದ ಸಂತೋಷ್ ಲಾಡ್ ಮತ್ತು ಈ.ತುಕಾರಾಮ್.

*ಸಂಡೂರಿನ ಅಭಿವೃದ್ಧಿಯನ್ನು ತಲೆ ಮೇಲೆ ಹೊತ್ತುಕೊಂಡು ಹಗಲಿರುಳು ಕೆಲಸ ಮಾಡಿರುವ ಈ.ತುಕಾರಾಮ್ ಅವರ ಪತ್ನಿ ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ.

*ಅನ್ನಪೂರ್ಣಮ್ಮ ಅವರ ಗೆಲುವು ಸಂಡೂರಿನ ಅಭಿವೃದ್ಧಿಗೆ ವೇಗ ತರುತ್ತದೆ. ಇವರು ಗೆದ್ದರೆ ನಾನೇ ಗೆದ್ದಂತೆ ಎಂದು ಕರೆ ನೀಡಿದರು.

692 ದಿನಗಳ ರೈತರ ಹೋರಾಟಕ್ಕೆ ಸುಖಾಂತ್ಯ ಹಾಡೋಣ: ಸಿಎಂ ಭರವಸೆ

ಸಂಡೂರಿನ ಕುಡುತಿನಿಯಲ್ಲಿ ಕಳೆದ 692 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಿಮ್ಮ 692 ದಿನಗಳ ಹೋರಾಟಕ್ಕೆ ಉಪ ಚುನಾವಣೆ ಮುಗಿಯುತ್ತಿದ್ದಂತೆ ಸುಖಾಂತ್ಯ ಹಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

2010 ರಲ್ಲಿ ರೈತರ ಗಮನಕ್ಕೆ ಬಾರದಂತೆ ಜಮೀನು ಸ್ವಾಧೀನ ಪಡಿಸಿಕೊಂಡು ಆಗಿನ ಬಿಜೆಪಿ ಸರ್ಕಾರ ರೈತ ಕುಟುಂಬಗಳ ಬಾಯಿಗೆ ಮಣ್ಣು ಹಾಕಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನಾ ನಿರತ ರೈತರ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಸಂಸದರಾದ ಈ.ತುಕಾರಾಮ್ ಅವರು ನಿಮ್ಮ ಸಮಸ್ಯೆಗಳನ್ನೆಲ್ಲಾ ವಿವರಿಸಿ ಮನವಿ ನೀಡಿದ್ದಾರೆ. ಮನವಿಯ ಮೇಲೆಯೇ ವಿಶೇಷ ಸಭೆ ಕರೆಯಲು ಸೂಚಿಸಿದ್ದೇನೆ.
ಚುನಾವಣೆ ಮುಗಿಯುತ್ತಿದ್ದಂತೆ ಮೀಟಿಂಗ್ ಕರಿತೀನಿ. KIADB ಸೇರಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸಭೆ ಕರೆದು ಚರ್ಚಿಸೋಣ. ಪರಿಹಾರ ಕಂಡುಕೊಳ್ಳೋಣ ಎಂದು ಭರವಸೆ ನೀಡಿದರು. ನಮ್ಮ ಸರ್ಕಾರ ರೈತರ ಹಿತ ಕಾಯಲು ಏನೇನು ಮಾಡಬೇಕೋ, ಎಲ್ಲವನ್ನೂ ಮಾಡಲು ಸಿದ್ದವಿದೆ ಎಂದು ಭರವಸೆ ನೀಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು