ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡ ಕಲಿಯಲು ನಿರಾಕರಿಸುವ ಕೆಲವು ದುರಹಂಕಾರಿ ಅಧಿಕಾರಿಗಳೇ ಭಾಷಾ ವಿವಾದಕ್ಕೆ ಕಾರಣ: ಮೋಹನದಾಸ್‌ ಪೈ

P

Peepal Media • ರಾಜ್ಯ

• 1 ನಿಮಿಷದ ಓದು

ಕನ್ನಡ ಕಲಿಯಲು ನಿರಾಕರಿಸುವ ಕೆಲವು ದುರಹಂಕಾರಿ ಅಧಿಕಾರಿಗಳೇ ಭಾಷಾ ವಿವಾದಕ್ಕೆ ಕಾರಣ: ಮೋಹನದಾಸ್‌ ಪೈ

ಪ್ರಮುಖ ತಂತ್ರಜ್ಞಾನ ಹೂಡಿಕೆದಾರ ಮತ್ತು ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನದಾಸ್ ಪೈ, ಕರ್ನಾಟಕದಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸ್ಥಳೀಯ ಭಾಷೆಯನ್ನು ಕಲಿಯಬೇಕು ಮತ್ತು ಸಾರ್ವಜನಿಕ ವ್ಯವಹಾರಗಳಲ್ಲಿ ಅದನ್ನು ಬಳಸಬೇಕು ಎಂದು ಸೂಚಿಸಿದ್ದಾರೆ.

ಕೆಲವು ಅಧಿಕಾರಿಗಳು ಕನ್ನಡ ಕಲಿಯಲು ದುರಹಂಕಾರದಿಂದ ನಿರಾಕರಿಸುವುದು ವಿವಾದಗಳಿಗೆ ಕಾರಣ ಎಂದು ಅವರು ಹೇಳಿದರು. ಇದನ್ನು ತಪ್ಪಿಸಲು, ಅವರು ಕನ್ನಡ ಕಲಿಯಬೇಕೆಂದು ಸೂಚಿಸಿದರು.

“ಪ್ರತಿದಿನ ದೊಡ್ಡ ಸಂಖ್ಯೆಯ ಜನರು ಬೆಂಗಳೂರಿಗೆ ಬರುತ್ತಾರೆ. ಕೇವಲ 33 ಪ್ರತಿಶತದಷ್ಟು ಜನರು ಸ್ಥಳೀಯವಾಗಿ ಕನ್ನಡ ಮಾತನಾಡುತ್ತಾರೆ. ಹೊರಗಿನಿಂದ ಬಂದವರು ಇಲ್ಲಿ ಸೌಹಾರ್ದ ರೀತಿಯಲ್ಲಿ ನೆಲೆಯಾಗಿದ್ದಾರೆ. ಆದರೆ ಕೆಲವರು ದುರಹಂಕಾರದಿಂದ ಕೆಲವು ಕನ್ನಡ ಪದಗಳನ್ನು ಮಾತನಾಡಲು ಸಹ ನಿರಾಕರಿಸುತ್ತಾರೆ. ನಾವು ಕೆಲವು ಪದಗಳನ್ನು ಕಲಿಯಬೇಕು ಮತ್ತು ಅವುಗಳನ್ನು ಮಾತನಾಡುವ ಮೂಲಕ ಸ್ಥಳೀಯರಿಗೆ ಗೌರವ ನೀಡಬೇಕು. ಅದು ನಮ್ಮ ಜವಾಬ್ದಾರಿ” ಎಂದು ಮೋಹನದಾಸ್ ಪೈ ಹೇಳಿದರು. ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಮತ್ತು ಗ್ರಾಹಕರೊಬ್ಬರ ನಡುವೆ ನಡೆದ ಭಾಷಾ ಸಂಬಂಧಿ ಘಟನೆಗೆ ಮೋಹನದಾಸ್ ಪೈ ಪ್ರತಿಕ್ರಿಯಿಸುತ್ತಿದ್ದರು. ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ಬ್ಯಾಂಕ್ ಮ್ಯಾನೇಜರ್ ನಿರಾಕರಿಸಿದ್ದು ಸಾರ್ವಜನಿಕರನ್ನು ಕೆರಳಿಸಿದೆ ಎಂದು ಅವರು ಹೇಳಿದರು. ಕೊನೆಗೂ ಬ್ಯಾಂಕ್ ಅಧಿಕೃತ ಕ್ಷಮೆಯಾಚಿಸಬೇಕಾಯಿತು ಎಂದು ಅವರು ನೆನಪಿಸಿಕೊಂಡರು. ‘ಸರ್!, ನನಗೆ ಭಾಷೆ ಗೊತ್ತಿಲ್ಲ.. ನಾನು ಕಲಿಯುತ್ತಿದ್ದೇನೆ.. ನಾನು ನನ್ನ ಸಹೋದ್ಯೋಗಿಯಿಂದ ಸಹಾಯ ಪಡೆಯುತ್ತೇನೆ’ ಎಂದು ಗೌರವದಿಂದ ಉತ್ತರಿಸಿದ್ದರೆ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎಂದು ಅವರು ಹೇಳಿದರು.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಗ್ರಾಹಕ ಸೇವೆಯಲ್ಲಿರುವವರು ಆ ಸ್ಥಳದ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು. ಗ್ರಾಹಕರಿಗೆ ಹಿಂದಿ ಅಥವಾ ಇಂಗ್ಲಿಷ್ ತಿಳಿದಿಲ್ಲದಿದ್ದರೆ, ನೌಕರರು ಸ್ಥಳೀಯ ಭಾಷೆಯನ್ನು ಮಾತನಾಡಲು ಪ್ರಯತ್ನಿಸಬೇಕು ಎಂದು ಅವರ ಅಭಿಪ್ರಾಯಪಟ್ಟರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version