ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸಿ: ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅವರುಗಳು ಅಧಿಕಾರಿಗಳಿಗೆ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ 8 ವಿಧಾನಸಭಾ ಕ್ಷೇತ್ರಕ್ಕೆ ನೇಮಕವಾಗಿರುವ ವೆಚ್ಚ ವೀಕ್ಷಕ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದರು.

ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ ಹಾಗೂ ಇನ್ನಿತರೆ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ನಡೆಸಿ ಅಭ್ಯರ್ಥಿಯು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದರು.

ಅಭ್ಯರ್ಥಿಯು ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆದಿರುವುದು. ಹಾಗೂ ಲೆಕ್ಕಾಚಾರಕ್ಕೆ ಬಾರದೇ ಇರುವ ರೀತಿ ಯಾವುದಾದರೂ ಪ್ರಚಾರ ಕೆಲಸ ಹಣ ವೆಚ್ಚ ಮಾಡುತ್ತಿದ್ದರೆ ತಕ್ಷಣ ತಮ್ಮ ಗಮನಕ್ಕೆ ತರಬೇಕು. ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.

ಹಣದ ಬಲದ ಮೇಲೆ ಚುನಾವಣೆ ನಡೆಯಬಾರದು. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ನೋಡಿಕೊಳ್ಳಿ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳು, ಸ್ಥಾಪನೆಯಾಗಿರುವ ಚೆಕ್ ಪೋಸ್ಟ್ ಗಳು ಹಾಗೂ ಇನ್ನಿತರೆ ಮಾಹಿತಿಗಳನ್ನು ವಿವರಿಸಿದರು.

ಸಭೆಯ ನಂತರ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿರಕರ ಕೋಶಕ್ಕೆ ಹಾಗೂ ವೆಚ್ಚ ವೀಕ್ಷಕರ ಕೊಠಡಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.

ಸಭೆಯಲ್ಲಿ‌ ಜಿಲ್ಲಾ ಪಂಚಾಯತ್ ಸಿ.ಎ.ಒ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು