ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂಗಾರು ಹಂಗಾಮು ಪ್ರಾರಂಭ; ರೈತರು ಮಾಗಿ ಉಳುಮೆ ಅನುಸರಿಸಿ

P

Peepal Media • ರಾಜ್ಯ

• 1 ನಿಮಿಷದ ಓದು

ಮುಂಗಾರು ಹಂಗಾಮು ಪ್ರಾರಂಭ; ರೈತರು ಮಾಗಿ ಉಳುಮೆ ಅನುಸರಿಸಿ

ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವುದರಿಂದ ರೈತರು ತಮ್ಮ ಜಮೀನಿನಲ್ಲಿ ಮಾಗಿ ಉಳುಮೆ ಮಾಡಿಕೊಂಡು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ, ಎರೆಹುಳ ಗೊಬ್ಬರ ಮತ್ತು ಸಾವಯವ ಗೊಬ್ಬರಗಳನ್ನು ತಮ್ಮ ಜಮೀನುಗಳಿಗೆ ಸೇರಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ಮಾಗಿ ಉಳುಮೆ ಎಂದರೆ ಎಂ.ಬಿ.ನೇಗಿಲು, ಡಿಸ್ಕ್ ಪ್ಲೋ ಅಂತಹ ಯಂತ್ರೋಪಕರಣಗಳನ್ನು ಬಳಸಿ, ಇಳಿಜಾರಿನ ಅಡ್ಡಕ್ಕೆ ಹೊಲವನ್ನು ಆಳವಾದ ಉಳುಮೆ, ಮಣ್ಣಿನ ಹೊರಪದರವನ್ನು ತೆರೆದು ಸೂರ್ಯನ ಕಿರಣಗಳಿಂದ ಸೋಂಕುರಹಿತಗೊಳಿಸಲು ಕೆಳಗಿನ ಮಣ್ಣನ್ನು ತಿರುಗಿಸುವುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾಗಿ ಉಳುಮೆಯಿಂದಾಗುವ ಪ್ರಯೋಜನಗಳು:

ಮಾಗಿ ಉಳುಮೆಯಿಂದ ಮಣ್ಣಿನ ಗಟ್ಟಿಯಾದ ಹೊರಪದರವನ್ನು ಒಡೆದು ಆಳವಾದ ಉಳುಮೆ ಮಾಡುವುದರಿಂದ ನೀರಿನ ಇಂಗುವ ಸಾಮರ್ಥ್ಯ ಹೆಚ್ಚಾಗುತ್ತದೆ. ಮಣ್ಣು ಹೆಚ್ಚಿನ ನೀರನ್ನು ಹಿಡಿದುಕೊಂಡು ಸುಲಭವಾಗಿ ಗಿಡಗಳಿಗೆ ದೊರೆಯುವಂತೆ ಮಾಡುತ್ತದೆ.

ಮಾಗಿ ಉಳುಮೆಯಲ್ಲಿ ಪರ್ಯಾಯ ಬಿಸಿಲಿನಿಂದ ಒಣಗಿಸುವಿಕೆ ಹಾಗೂ ಗಾಳಿಯಿಂದ ತಂಪಾಗಿಸುವಿಕೆಯಿAದಾಗಿ ಮಣ್ಣಿನ ರಚನೆಯು ಸುಧಾರಿಸುತ್ತದೆ. ಮಣ್ಣಿನ ಗಾಳಿಯನ್ನು ಸುಧಾರಿಸುವುದರಿಂದ ಸೂಕ್ಷö್ಮಜೀವಿಗಳ ಉತ್ಪತ್ತಿಯು ಹೆಚ್ಚಾಗಿ ಸಾವಯವ ಗೊಬ್ಬರಗಳು ಕರಗಿ ಪೋಷಕಾಂಶಗಳ ಲಭ್ಯತೆಯು ಹೆಚ್ಚುತ್ತದೆ ಎಂದಿದ್ದಾರೆ.

ಮಳೆಯನ್ನು ಹೀರಿಕೊಳ್ಳುವ ಮಣ್ಣಿನ ಸಾಮರ್ಥ್ಯವು ಬೆಳೆದಂತೆ ವಾತಾವರಣದಲ್ಲಿ ಲಭ್ಯವಿರುವ ಸಾರಜನಕ ನೀರಿನಲ್ಲಿ ಕರಗಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಮಣ್ಣಿನಡಿಯಲ್ಲಿ ಅಡಗಿರುವ ಅನೇಕ ಕೀಟಗಳ ಮೊಟ್ಟೆ, ಮರಿಹುಳು ಮತ್ತು ಕೋಶಗಳು ಸೂರ್ಯನ ಅತಿಯಾದ ಬಿಸಿಲಿನ ಶಾಖದಿಂದ ಸತ್ತುಹೊಗಿ ಮುಂದಿನ ಬೆಳೆಗಳ ಮೇಲೆ ಕೀಟಗಳ ಅಪಾಯದ ಪ್ರಮಾಣವನ್ನು ಕಡಿಮೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಸಿಲಿನ ಶಾಖಕ್ಕೆ ಅನೇಕ ಬ್ಯಾಕ್ಟೀರಿಯಾ ಬೀಜಕಗಳು, ಶಿಲೀಂದ್ರಗಳು ಮತ್ತು ಸೂಕ್ಷ್ಮಜೀವಿಗಳು ಸಾಯುತ್ತವೆ, ಇದರಿಂದ ಮುಂದಿನ ಬೆಳೆಗಳಿಗೆ ಉಂಟಾಗುವ ರೋಗಗಳನ್ನು ತಪ್ಪಿಸಿ ಕೀಟ ಮತ್ತು ರೋಗನಾಶಕಗಳಿಗೆ ತಗಲುವ ವೆಚ್ಚವನ್ನು ಉಳಿಸುತ್ತದೆ. ಮಾಗಿ ಉಳಿಮೆಯಿಂದ ನೆಮಟೋಡ್ ಬಾಧೆಯನ್ನು ತಪ್ಪಿಸಬಹುದು. ಮಾಗಿ ಉಳುಮೆಯು ಕಳೆಗಳು ಮೊಳಕೆಯೊಡೆಯುವುದನ್ನು ತಡೆಯುತ್ತದೆ ಇದರಿಂದ ಕಳೆಗಳ ನಿಯಂತ್ರಣವನ್ನು ಮಾಡಬಹುದು.

ಮಾಗಿ ಉಳುಮೆಯಿಂದ ಹೆಚ್ಚಿನ ಮಳೆ ನೀರು ಸಂಗ್ರಹಣೆ, ಪೋಷಕಾಂಶಗಳ ಸಮತೋಲನ ಮತ್ತು ಮಣ್ಣಿನ ಗುಣಧರ್ಮಗಳ ಸುಧಾರಣೆಯಿಂದ ಹೆಚ್ಚಿನ ಬೆಳೆ ಇಳುವರಿ ಪಡೆಯಲು ಸಾಧ್ಯವಾಗುತ್ತದೆ.

ಹಾಗಾಗಿ ರೈತ ಬಾಂಧವರು ಮಾಗಿ ಉಳುಮೆಯ ಈ ಎಲ್ಲಾ ಪ್ರಯೋಜನೆಗಳಿಂದ ಕಡಿಮೆ ಖರ್ಚು ಮಾಡಿ ಹೆಚ್ಚಿನ ಇಳುವರಿ ಪಡೆದುಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version