ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಲಕ್ಷ್ಮೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ೨೦೨೪ರ ಫೆ.೨೧ರಂದು ಇವರ ಪುತ್ರಿ ವಿಜಯಲಕ್ಷ್ಮಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ಪ್ರಿಯಕರ ಕೈ ಕೊಟ್ಟ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಾಯಿ ಲಕ್ಷ್ಮಿ ಅವರು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಯುವಕನ ಮೇಲೆ ದೂರು ನೀಡಿದ್ದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿ ಡೆತ್‌ನೋಟ್‌ನಲ್ಲಿ ಯುವಕರ ಕುಟುಂಬದವರು ಮತ್ತು ಗ್ರಾಮದ ಕೆಲವು ಮುಖಂಡರ ಹೆಸರುಗಳನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ
ನನ್ನ ಮಗಳು ಮೃತಪಟ್ಟು ೨೦ ದಿನ ಕಳೆದರೂ ಕಾನೂನು ಕ್ರಮ ತೆಗೆದುಕೊಳ್ಳದೆ ಇರುವುದರಿಂದ ಹಾಗೂ ಹರಿಕೃಷ್ಣ ಮನೆಯವರು ನಮ್ಮ ಮನೆಯವರ ಮೇಲೆ ದರ್ಪ ದೌರ್ಜನ್ಯ ತೋರಿಸಿ ಹಣದ ಆಮಿಷಕ್ಕೆ ಕಾನೂನು ಜಾರಿಯಾಗಿದ್ದು ಇವರ ನನ್ನ ಸಾವಿಗೆ ಕಾರಣರಾಗಿದ್ದಾರೆ.ಕೆಂಪೇಗೌಡ, ಸರೋಜಮ್ಮ, ನಾಗಣ್ಣ, ಚಿಕ್ಕತಿಮ್ಮೇಗೌಡ, ಪುಟ್ಟೇಗೌಡ, ಶಿವು, ಮಂಜು, ಪ್ರಕಾಶ ಇವರು ನಮ್ಮ ಊರಿನ ಜನಗಳು ನ್ಯಾಯ ಕೇಳುವುದಕ್ಕೆ ಹೋಗುವುದರಿಂದ ಜನರ ಮೇಲೆ ಕಂಪ್ಲೇಟ್ ಮಾಡಿ ಅವರದೇ ತಪ್ಪಿದ್ದರೂ ನಮ್ಮ ಊರಿನ ಜನರ ಮೇಲೆ ತಪ್ಪು ಹೊರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ಇವರೇ ಕಾರಣ ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಡೆತ್‌ನೋಟ್ ನಲ್ಲಿ ಬರೆದಿದ್ದಾರೆ.ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ವೃತ್ತ ನಿರೀಕ್ಷಕರ ಶಿವಪ್ರಸಾದ್ ರಾವ್ ತಿಳಿಸಿದ್ದಾರೆ.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು