ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರಿಂದಲೇ ಷಡ್ಯಂತ್ರ: ಎಡಿಟೆಡ್ ವಿಡಿಯೋ ಸೋರಿಕೆ ಹಿಂದೆ ಸ್ವಾರ್ಥ ಶಕ್ತಿಗಳ ಕೈವಾಡವಿದೆ ಎಂದ ರೇಣುಕಾಚಾರ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರಿಂದಲೇ ಷಡ್ಯಂತ್ರ: ಎಡಿಟೆಡ್ ವಿಡಿಯೋ ಸೋರಿಕೆ ಹಿಂದೆ ಸ್ವಾರ್ಥ ಶಕ್ತಿಗಳ ಕೈವಾಡವಿದೆ ಎಂದ ರೇಣುಕಾಚಾರ್ಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಪಕ್ಷದೊಳಗಿನ ಕೆಲವರೇ ಉದ್ದೇಶಪೂರ್ವಕವಾಗಿ ಷಡ್ಯಂತ್ರ ರೂಪಿಸಿ, ವ್ಯವಸ್ಥಿತವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಿರಿಯ ನಾಯಕ ಎಂ.ಪಿ. ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರ ಜನಪ್ರಿಯತೆ ಹಾಗೂ ಸಂಘಟನಾತ್ಮಕವಾಗಿ ಪಕ್ಷದಲ್ಲಿ ಅವರು ಬೆಳೆಯುತ್ತಿರುವುದನ್ನು ಸಹಿಸದ ಕೆಲವು ಸ್ವಾರ್ಥ ಶಕ್ತಿಗಳು ಅವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಈ ತಂತ್ರ ಹೆಣೆದಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಜಯೇಂದ್ರ ಅವರು ಆಪ್ತ ಸಂಬಂಧ ಹೊಂದಿದ್ದಾರೆನ್ನುವ ತಪ್ಪು ಸಂದೇಶವನ್ನು ಸಾರ್ವಜನಿಕರ ನಡುವೆ ಬಿಂಬಿಸಲು ಕೆಲವು ವದಂತಿಗಳನ್ನು ಸೃಷ್ಟಿಸಲಾಗುತ್ತಿದೆ. ಈ ಸುಳ್ಳು ಆರೋಪಗಳಿಗೆ ಪುಷ್ಟಿ ನೀಡುವ ದೃಷ್ಟಿಯಿಂದಲೇ ದುರುದ್ದೇಶಪೂರ್ವಕವಾಗಿ ಎಡಿಟ್ ಮಾಡಲಾದ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡಲಾಗಿದೆ ಎಂದು ಅವರು ಹರಿಹಾಯ್ದಿದ್ದಾರೆ. ವಿಜಯೇಂದ್ರ ಅವರ ತೇಜೋವಧೆ ಮಾಡಲು ನಿರಂತರ ಪ್ರಯತ್ನಗಳು ನಡೆಯುತ್ತಿದ್ದರೂ, ಇಂತಹ ಯಾವುದೇ ಕುತಂತ್ರಗಳು ಯಶಸ್ವಿಯಾಗುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಬರುವ ನವೆಂಬರ್ ತಿಂಗಳಿಗೆ ವಿಜಯೇಂದ್ರ ಅವರ ರಾಜ್ಯಾಧ್ಯಕ್ಷರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಅವರು, “ವಿಜಯೇಂದ್ರ ಅವರ ನಾಯಕತ್ವ ಮತ್ತು ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ಭರವಸೆಯಿದೆ. ನವೆಂಬರ್ ಅವಧಿಯ ನಂತರವೂ ಅವರೇ ರಾಜ್ಯ ಬಿಜೆಪಿಯ ಸಾರಥಿಯಾಗಿ ಮುಂದುವರಿಯಲಿದ್ದಾರೆ,” ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು