ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 04: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದರು.

ಬಿಜೆಪಿ ಅಧಿಕಾರದಲ್ಲಿತ್ತು
ನಿವೇಶನ ನೀಡಿದಾಗ 2021 ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3 ನೇ ಅಥವಾ 4 ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ
ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ ಎಂದರು.

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು