ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಕೆಪಿಎಸ್‌ಸಿ ಕರ್ಮಕಾಂಡ ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಬಂಧನ ಖಂಡಿಸಿ ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕೆಪಿಎಸ್‌ಸಿ ಕರ್ಮಕಾಂಡ ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಬಂಧನ ಖಂಡಿಸಿ ಸಿಎಂಗೆ ಮುಖ್ಯಮಂತ್ರಿ ಚಂದ್ರು ಪತ್ರ

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ? ಎಂದು ಮುಖ್ಯಮಂತ್ರಿ ಚಂದ್ರು ಖಾರವಾಗಿ ಪ್ರಶ್ನಿಸಿದ್ದಾರೆ.

ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ ಈ ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ. ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌ ವಿರುದ್ಧ ಕ್ರಮ ಕೈಗೊಳ್ಳಿ. ಆ ಸ್ಥಾನದಿಂದ ಅವರನ್ನು ಕೂಡಲೇ ಅಲ್ಲಿಂದ ತೆರವು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಕಾಂತಕುಮಾರ್‌ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಹಿಂದಿನ ಅವಧಿಯ ಸರ್ಕಾರದ ವಿರುದ್ಧ ‘40% ಕಮಿಷನ್‌ ಸರ್ಕಾರ’ ಎಂದು ಆರೋಪಿಸಿ, ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೀವಿ ಎಂಬ ವಾಗ್ದಾನವನ್ನು ನೀಡಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳನ್ನೇ ಬಂಧಿಸುವ ಹಂತಕ್ಕೆ ನಿಮ್ಮ ಸರ್ಕಾರ ಇಳಿದಿರುವುದು ಏಕೆ? ಸರ್ವಾಧಿಕಾರದ ಧೋರಣೆ ತಳೆದಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.

ಯುವನಿಧಿ ಯೋಜನೆ ಬಿಡುಗಡೆ ಸಂದರ್ಭ ಪದವಿ ಪಡೆದ ನಂತರ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಹುಡುಕಿಕೊಳ್ಳಲು ನಿರುದ್ಯೋಗಭತ್ಯೆ ಕೊಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದೀರಿ. ಆದರೆ ವಾಸ್ತವದಲ್ಲಿ ಭ್ರಷ್ಟಾಚಾರದಿಂದ ಅಭ್ಯರ್ಥಿಗಳ ಭವಿಷ್ಯವೇ ಹಾಳಾಗುತ್ತಿರುವುದು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ? ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ ಎಂಬ ವಿದ್ಯಾರ್ಥಿ ನಾಯಕನ ಆರೋಪದಲ್ಲಿ ಹುರುಳಿಲ್ಲವೇ? ಹಾಗಿದ್ದರೆ ಫಲಿತಾಂಶ ಪ್ರಕಟಿಸಲು ವಿಳಂಬ ನೀತಿ ಅನುಸರಿಸುತ್ತಿರುವುದೇಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಂದೊಂದು ಹುದ್ದೆಯ ಭರ್ತಿ ಮಾಡಲು ಒಂದು ವರ್ಷದ ಬದಲು ಐದು ವರ್ಷ ತೆಗೆದುಕೊಳ್ಳಲಾಗುತ್ತಿದೆ. 15 ನೋಟಿಫಿಕೇಶನ್‌ಗಳ ಪರೀಕ್ಷೆ ನಡೆದು ಎರಡು ವರ್ಷಗಳಾಗಿದೆ. ಆದರೆ ಅದರ ಫಲಿತಾಂಶವನ್ನು ಕೆಪಿಎಸ್‌ಸಿ ಇನ್ನೂ ಪ್ರಕಟಿಸಿಲ್ಲ. ಇದು ಮೇಲ್ನೋಟಕ್ಕೆ ನೇಮಕಾತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದನ್ನು ಸಾರಿ ಹೇಳುತ್ತದೆ ಎಂದು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು