ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ : ಜಿ.ಎಸ್.ಸಂಗ್ರೇಶಿ

P

Peepal Media • ರಾಜ್ಯ

• 2 ನಿಮಿಷದ ಓದು

ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ : ಜಿ.ಎಸ್.ಸಂಗ್ರೇಶಿ

ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ತಿಳಿಸಿದರು.
ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ಮಹಾನಗರಪಾಲಿಕೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಮೊಗ್ಗ ಪಾಲಿಕೆಯಲ್ಲಿ ನಿಕಾಯ (ಬಾಡಿ) ಇಲ್ಲದೇ ಒಂದೂವರೆ ವರ್ಷ ಆಗಿದೆ. ಚುನಾವಣೆ ನಡೆಸಲು ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ ಮಾಡಲಾಗಿದೆ. ಸಂಬಂಧಿಸಿದ ಮಂತ್ರಿಗಳು, ಮಾನ್ಯ ಮುಖ್ಯಮಂತ್ರಿಗಳಿಗೆ ಸಹ ಕೋರಲಾಗಿದೆ. ಸರ್ಕಾರದಿಂದ ಈ ಕುರಿತು ಸ್ಪಂದನೆ ಬಾರದ ಕಾರಣ ಸುಪ್ರೀಂ ಕೋರ್ಟ್ ಆದೇಶದನ್ವಯ ಉಚ್ಛ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿ ಪಾಲಿಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಜೂನ್ ವೇಳೆಗೆ ಉಚ್ಛ ನ್ಯಾಯಾಲಯದಲ್ಲಿ ಈ ರಿಟ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ಚುನಾವಣೆ ಕುರಿತು ಸರ್ಕಾರದಿಂದ ಸ್ಪಂದನೆ ಬಂದ ತಕ್ಷಣ ದಿನಾಂಕ ನಿಗದಿಗೊಳಿಸಲಾಗುವುದು.
ಕಳೆದ ಆಗಸ್ಟ್ ಮಾಹೆಯಲ್ಲಿಯೇ ಚುನಾವಣೆಗೆ ಸಂಬಂಧಿಸಿದಂತೆ ಮತದಾತರರ ಪಟ್ಟಿ ತಯಾರಿಸುವ ವೇಳಾಪಟ್ಟಿ ಹೊರಡಿಸಲಾಗಿತ್ತು. ಕಾರಣಾಂತರದಿAದ ಅದರ ಪ್ರಕಾರ ಅಂತಿಮ ಮತದಾರರ ಪಟ್ಟಿ ಸಿದ್ದವಾಗಿಲ್ಲ. ಕರಡು ಮತದಾರರ ಪಟ್ಟಿ ಮಾತ್ರ ಸಿದ್ದವಾಗಿದೆ.
ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ವಿಶೇಷವಾಗಿ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಸಿದ್ದ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು ನ್ಯಾಯ ಮತ್ತು ಮುಕ್ತ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಸಹಕರಿಸಬೇಕೆಂದು ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್ ಮಾತನಾಡಿ, ಆಗಸ್ಟ್ ಮಾಹೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ವೇಳಾಪಟ್ಟಿ ಹೊರಡಿಸಲಾಗಿದ್ದು, ದಿನಾಂಕ: 19-08-2024 ರಿಂದ 24-08-2024 ರವರೆಗೆ ವಾರ್ಡುಗಳ ವಿಂಗಡಣೆ ಅಧಿಸೂಚನೆಯಂತೆ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮತದಾರರನ್ನು ಗುರುತಿಸುವಿಕೆ. 25-08-2024 ರಿಂದ 31-08-2024 ರವರಗೆ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸಿದ ನಂತರ ಫ್ರಂ ಟು ಮ್ಯಾಟ್ರಿಕ್ಸ್ ತಯಾರಿಸಿ ಮುದ್ರಕರಿಗೆ ನೀಡುವುದು. 01-09-2024 ರಿಂದ 04-9-2024 ರವರೆಗೆ ಫ್ರಂ ಟು ಮ್ಯಾಟ್ರಿಕ್ಸ್ ರಂತೆ ಪ್ರಥಮ ಚೆಕ್ ಲಿಸ್ಟ್ ಮುದ್ರಣ. 05-09-2024 ರಿಂದ 10-09-2024 ರವರೆಗೆ ಮುದ್ರಕರಿಂದ ಪ್ರಥಮ ಚೆಕ್‌ಲಿಸ್ಟ್ ಪಡೆದುಕೊಂಡು ವಾರ್ಡ್ವಾರು ಮತ್ತೊಮ್ಮೆ ಪರಿಶೀಲಿಸಿ ಆಗಬೇಕಾಗಿರುವ ಬದಲಾವಣೆಗಳನ್ನು ಮತದಾರರ ಪಟ್ಟಿಯಲ್ಲಿ ಅಳವಡಿಸುವುದು. 17-09-2024 ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸುವುದು. 24-09-2024 ಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನ. 30-09-2024 ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕೊನೆಯ ದಿನ. 06-10-2024 ಕ್ಕೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಗಳನ್ನು ಮಾಡಿಸಿ ಅಂತಿಮ ಚೆಕ್‌ಲಿಸ್ಟ್ ಪಡೆದುಕೊಂಡು ವಾರ್ಡುವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಲು ಅಂತಿಮ ದಿನಾಂಕ. ದಿ: 09-10-2024 ಅಂತಿಮ ಮತದಾರರ ಪಟ್ಟಿ ಪ್ರಕಟಣೆ.
ಮೇಲ್ಕಂಡ ವೇಳಾ ಪಟ್ಟಿಯಂತೆ ಅಂತಿಮ ಮತದಾರರ ಪಟ್ಟಿಯನ್ನು ಕಾರಣಾಂತರಗಳಿAದ ಪ್ರಕಟಿಸಲಾಗಿಲ್ಲ.
ಪಾಲಿಕೆ ವ್ಯಾಪ್ತಿಯಲ್ಲಿ 35 ವಾರ್ಡುಗಳಿದ್ದು 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ ಇದೆ. ಒಟ್ಟು 288 ಮತಗಟ್ಟೆಗಳಿವೆ. 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು ಇದ್ದಾರೆ. ಇದರಲ್ಲಿ 85 ವರ್ಷ ಮೀರಿದ 2583 ಹಾಗೂ ವಿಕಲಚೇತನ 1465 ಮತದಾರರು ಇದ್ದಾರೆ.
ಕರಡು ಮತದಾರರ ಪಟ್ಟಿ ಸಿದ್ದವಾಗಿದೆ. ಚುನಾವಣೆ ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version