ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾಲ್ಮೀಕಿ ನಿಗಮ ಹಗರಣ: ಗೃಹ ಬಂಧನದಲ್ಲಿ ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್

P

Peepal Media • ರಾಜ್ಯ

• 1 ನಿಮಿಷದ ಓದು

ವಾಲ್ಮೀಕಿ ನಿಗಮ ಹಗರಣ: ಗೃಹ ಬಂಧನದಲ್ಲಿ ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್

ಬೆಂಗಳೂರು: ಬೆಂಗಳೂರು ಮತ್ತು ರಾಯಚೂರಿನಲ್ಲಿರುವ ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರವೂ ದಾಳಿ ಮುಂದುವರಿಸಿದೆ.

ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದಾಗ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದ ಕುರಿತು ನಡೆಯುತ್ತಿರುವ ತನಿಖೆಗಳ ನಂತರ ಈ ದಾಳಿಗಳು ನಡೆದಿವೆ. ಅವರು ಜೂನ್‌ನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಜಾರಿ ನಿರ್ದೇಶನಾಲಯ ಎಂಟಕ್ಕೂ ಹೆಚ್ಚು ಸ್ಥಳಗಳಲ್ಲಿ ಹುಡುಕಾಟವನ್ನು ಮುಕ್ತಾಯಗೊಳಿಸಿದೆ. ಬೆಂಗಳೂರಿನ ನಾಗೇಂದ್ರ ಮತ್ತು ದದ್ದಲ್ ಮನೆಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಬುಧವಾರ ಬೆಳಗ್ಗೆಯಿಂದ ಇಡಿ ಎರಡೂ ಕಾಂಗ್ರೆಸ್ ನಾಯಕರಿಗೆ ಮನೆಯಿಂದ ಹೊರಬರದಂತೆ ನಿರ್ಬಂಧಿಸಿದೆ.

ಇಡಿ ಅಧಿಕಾರಿಗಳು ವಸಂತನಗರದಲ್ಲಿರುವ ಕಾರ್ಪೊರೇಷನ್‌ನ ಕೇಂದ್ರ ಕಚೇರಿಯಲ್ಲಿ ಗುರುವಾರ ಸಂಜೆಯವರೆಗೂ ದಾಳಿಯನ್ನು ಮುಂದುವರೆಸಿದರು ಮತ್ತು ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಸ್ಥಳದಿಂದ ಏನೆಲ್ಲಾ ವಶಪಡಿಸಿಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.

ಗುರುವಾರ ಮತ್ತೊಮ್ಮೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಅಧಿಕಾರಿಗಳು ದದ್ದಲ್‌ ಅವರ ಆಪ್ತ ಸಹಾಯಕ ಕಾರ್ತಿಕ್‌ ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಬುಧವಾರ ಇಡಿ ಅಧಿಕಾರಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮೂವರು ಮಾಜಿ ಉದ್ಯೋಗಿಗಳನ್ನು ಭೇಟಿ ಮಾಡಿದರು.

ಬುಧವಾರದ ದಾಳಿಯ ಹಿಂದಿನ ನಿಖರವಾದ ಕಾರಣ ಅಸ್ಪಷ್ಟವಾಗಿದ್ದರೂ, ಹಗರಣದ ತನಿಖೆಯನ್ನು ಕೋರಿ ಇಡಿಯಲ್ಲಿ ಎರಡು ದೂರುಗಳು ದಾಖಲಾಗಿವೆ ಎಂಬುದು ಗಮನಾರ್ಹ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version