ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಚಿವ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್: ಬೆದರಿಕೆ ಆರೋಪದಡಿ NCR ದಾಖಲು

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಸಚಿವ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್: ಬೆದರಿಕೆ ಆರೋಪದಡಿ NCR ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಹಾಗೂ ಹೆಚ್ ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಎಸ್‌ಐಟಿಯ ಐಜಿಪಿ, ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಬೆಂಗಳೂರಿನ ಸಂಜಯ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾನು ಐಎಸ್ ಡಿ ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ಎಸ್‌ಐಟಿಯಲ್ಲಿ ಎಡಿಜಿಪಿಯಾಗಿ ಕೆಲಸ ಮಾಡುತ್ತಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ ಮೇಲೆ ಮೊಕದಮ್ಮೆ ಸಂಖ್ಯೆ 16/2014ರಲ್ಲಿ ತನಿಖೆ ಕೈಗೊಂಡಿದ್ದು, ಇವರ ವಿರುದ್ಧ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ, ಕಾನೂನು ಕ್ರಮ ಕೈಗೊಳ್ಳಲು ಅನುಮತಿಗಾಗಿ ರಾಜ್ಯಪಾಲರಿಗೆ ಕೋರಲಾಗಿತ್ತು.

ರಾಜ್ಯಪಾಲರ ಬಳಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದ ತನಿಖೆಗೆ ಅನುಮತಿ ನೀಡುವಂತೆ ಕೋರಿದ ನಂತರ ಈ ಬಗ್ಗೆ ದಿನಾಂಕ 28-09-2024 ಮತ್ತು 29-09-2024ರಂದು ಪತ್ರಿಕಾ ಘೋಷ್ಠಿಯನ್ನು ನೆಡೆಸಿ ನನ್ನ ಬಗ್ಗೆ ಸುಳ್ಳು ಮತ್ತು ದುರುದ್ದೇಶ ಪೂರಿತ ಆರೋಪಗಳನ್ನು ಮಾಡಿ, ಬೆದರಿಕೆಯನ್ನು ಹಾಕಿರುತ್ತಾರೆ. ಅಲ್ಲದೆ ನನ್ನನ್ನು ಕರ್ನಾಟಕ ರಾಜ್ಯ ಕೇಡರ್ ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದಾರೆಂದು ಚಂದ್ರಶೇಖರ್‌ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಜೊತೆಗೆ ನ್ನ ಕುಟುಂಬದವರ ವಿರುದ್ಧವೂ ಸಹ ಸುಳ್ಳು ಆಪಾದನೆಗಳ್ನು ಮಾಡಿದ್ದು, ಅವರಿಗೂ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾನು ಬೌರಿಂಗ್ ಆಸ್ಪತ್ರೆಯಿಂದ ಸುಳ್ಳು ಮೆಡಿಕಲ್ ದಾಖಲೆಗಳನ್ನು ಪಡೆದು, ಕರ್ನಾಟಕ ಕೇಡರಿನಲ್ಲೇ ಮುಂದುವರೆಯುತ್ತಿರುವುದಾಗಿ ಸುಳ್ಳು ಆರೋಪ ಮಾಡಿರುತ್ತಾರೆ. ನಾನು ಲಂಚ ತೆಗೆದುಕೊಂಡಿರುವುದಾಗಿಯೂ ಸುಳ್ಳು ಆರೋಪ ಮಾಡಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ಕುಮಾರಸ್ವಾಮಿಯವರ ಮಗ ನಿಖಿಲ್‌ ವಿರುದ್ಧವೂ ದೂರು ನೀಡಿದ್ದು, ಅವರ ವಿರುದ್ಧವು ಚಂದ್ರಶೇಖರ್‌ ಹಲವು ಆರೋಪಗಳನ್ನು ಮಾಡಿದ್ದಾರೆ.

ಈ ದೂರನ್ನು ಆಧರಿಸಿ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಹೆಚ್‌ಡಿಕೆ ಆಪ್ತ ಸುರೇಶ್ ಬಾಬು ವಿರುದ್ಧ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದಾರೆ

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು