ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳಿಂದ ಸ್ಥಳ ನಿಯುಕ್ತಿಗಾಗಿ ಆಗ್ರಹಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಧರಣಿ

P

Peepal Media Desk • ರಾಜ್ಯ

• 1 ನಿಮಿಷದ ಓದು

ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳಿಂದ ಸ್ಥಳ ನಿಯುಕ್ತಿಗಾಗಿ ಆಗ್ರಹಿಸಿ ಇಂದಿನಿಂದ ಅನಿರ್ಧಿಷ್ಟಾವಧಿ ಧರಣಿ

ಬೆಂಗಳೂರು: ಸರ್ಕಾರ ಕೂಡಲೇ ನೇಮಕಾತಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಹಾಯಕ ಪ್ರಾಧ್ಯಾಪಕ ಹುದ್ದೆ ಅಭ್ಯರ್ಥಿಗಳು ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದಿನಿಂದ (ಶುಕ್ರವಾರ) ಅನಿರ್ದಿಷ್ಟಾವಧಿಯ ಸತ್ಯಾಗ್ರಹ ನಡೆಸುತ್ತಿದ್ದಾರೆ.

 2021ರಲ್ಲಿಯೇ ಸರ್ಕಾರಿ ಪ್ರಥಮ 26 ವಿಷಯಗಳ 1208 ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ. ಅಂತಿಮ ಆಯ್ಕೆ ಪಟ್ಟಿಯನ್ನು 2023ರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಉನ್ನತ ಶಿಕ್ಷಣ ಇಲಾಖೆಯು ಸಹ ಹೊಸದಾಗಿ ಆಯ್ಕೆಗೊಂಡಿರುವ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೊಳಿಸಬೇಕೆಂದು 26-02-2024ರಂದು ಆದೇಶ ಹೊರಡಿಸಿ ಮತ್ತೆ ಒಂದೇ ದಿನದಲ್ಲಿ ವಾಪಸ್‌ ಪಡೆದಿದೆ. ಇಲಾಖೆಯ ಅಧಿಕೃತ ಜ್ಞಾಪನ ಪತ್ರವನ್ನು ಹಿಂಪಡೆಯಲು ಕಾರಣವನ್ನು ಸಹ ತಿಳಿಸಿಲ್ಲ. ಹೀಗಾಗಿ ಒಂದು ವರ್ಷದಿಂದ ನಮ್ಮ ಸ್ಥಿತಿ ತ್ರಿಶಂಖು ಸ್ಥಿತಿಯಾಗಿದೆ ಎಂದು ಪ್ರತಿಭಟನಾ ನಿರತ ಸಹಾಯಕ ಪ್ರಾಧ್ಯಾಕರು ದೂರಿದರು.

ಲೋಕಸಭೆ ಚುನವಾಣೆ ಮುಕ್ತಾಯವಾಗಿ ಒಂದೂವರೆ ತಿಂಗಳೂ ಕಳೆದರೂ ಸ್ಥಳನಿಯುಕ್ತಿ ಸಂಬಂಧಪಟ್ಟಂತೆ ಕೌನ್ಸಿಲಿಂಗ್‌ ವೇಳಾಪಟ್ಟಿಯನ್ನು ಇಲಾಖೆ ಇನ್ನು  ಪ್ರಕಟಿಸಿರುವುದಿಲ್ಲ. ಹೀಗೆ 03 ವರ್ಷಗಳು ಮುಗಿದರೂ ನಮಗೆ ನೇಮಕಾತಿ ಆದೇಶ ದೊರೆಯುತ್ತಿಲ್ಲ ಇದರಿಂದಾಗಿ ನಮ್ಮ ಭವಿಷ್ಯವು ಡೋಲಾಯಮಾನವಾಗಿದೆ ಎಂದು ಆರೋಪಿಸಿದರು.

 ಉನ್ನತ ಶಿಕ್ಷಣ ಸಚಿವರು ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವಾಗಿ ಉಚ್ಚನ್ಯಾಯಲಯದಲ್ಲಿ ಕೇಸ್ ಇದ್ದು, ಕೋರ್ಟ್ ಕೇಸ್ ಮುಕ್ತಾಯವಾದ ನಂತರ ನೇಮಕಾತಿ ಮುಂದುವರೆಸುವುದಾಗಿ ತಿಳಿಸಿದ್ದಾರೆ. ಆದರೆ ವಾಸ್ತವಾಗಿ ಘನ ಉಚ್ಚನ್ಯಾಯಲಯದ ಮಧ್ಯಂತರ ಆದೇಶದಲ್ಲಿ ಕೌನ್ಸಿಲಿಂಗ್ ನಡೆಸಲು ಸರ್ಕಾರಕ್ಕೆ ಅವಕಾಶ ನೀಡಲಾಗಿದೆ. ಆದರೂ ಸಹ ಸರ್ಕಾರ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡದಿರುವುದು ಆಯ್ಕೆಯಾದ ಅಭ್ಯರ್ಥಿಗಳು ಅಂತಂತ್ರರಾಗಿದ್ದಾರೆ. ಕಲ್ಯಾಣ ಕರ್ನಾಟಕ ಮೀಸಲಾತಿ ವಿಚಾರವಾಗಿ ಉಚ್ಚನ್ಯಾಯಲಯದಲ್ಲಿ ಕೋರ್ಟ್ ಕೇಸ್ ಇದ್ದರೂ ಇತರೆ ಇಲಾಖೆಗಳಲ್ಲಿ ನ್ಯಾಯಲಯದ ಷರತ್ತಿಗೆ ಒಳಪಟ್ಟು ನೇಮಕಾತಿ ಆದೇಶ ನೀಡಿವೆ.  ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಪಧವೀಧರ ಶಿಕ್ಷಕರ ನೇಮಕಾತಿಯಲ್ಲಿ ನೇಮಕಾತಿ ಆದೇಶ ನೀಡಿದೆ ಎಂಬುದನ್ನು ಪ್ರತಿಭಟನಕಾರರು ಈ ಸಂದರ್ಭಧಲ್ಲಿ ನೆನಪಿಸಿದರು.  ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ  ಸಹಾಯಕ ಪ್ರಾಧ್ಯಾಪಕ ಹುದ್ದೆಯ ಅಭ್ಯರ್ಥಿಗಳು ಧರಣಿಯಲ್ಲಿ ಭಾಗವಹಿಸಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version