ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಸ ಜಾತಿ ಗಣತಿ ಸಂಪೂರ್ಣ ಪಾರದರ್ಶಕವಾಗಿರಲಿದೆ : ಡಿ.ಕೆ. ಶಿವಕುಮಾರ್

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಹೊಸ ಜಾತಿ ಗಣತಿ ಸಂಪೂರ್ಣ ಪಾರದರ್ಶಕವಾಗಿರಲಿದೆ : ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಹೊಸ ಜಾತಿ ಗಣತಿಯನ್ನು ಸಂಪೂರ್ಣ ಪಾರದರ್ಶಕವಾಗಿ, ಯಾವುದೇ ಸಂದೇಹಕ್ಕೆ ಅವಕಾಶ ನೀಡದಂತೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಡಿ ಕೆ ಶಿವಕುಮಾರ್, ದೆಹಲಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ರಾಜ್ಯದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

“ಹಿಂದಿನ ಜಾತಿ ಗಣತಿಯ ದತ್ತಾಂಶದ ನಿಖರತೆ ಕುರಿತ ಅನುಮಾನ ಮತ್ತು ಕೆಲವು ಸಮುದಾಯಗಳನ್ನು ಸರಿಯಾಗಿ ಎಣಿಸಿಲ್ಲ ಎನ್ನುವ ಆತಂಕಗಳನ್ನು ತೊಡೆದುಹಾಕಲು ನಿರ್ಧರಿಸಲಾಗಿದೆ. ಮನೆ-ಮನೆ ಭೇಟಿ ಮತ್ತು ಆನ್‌ಲೈನ್ ಸಮೀಕ್ಷೆಯ ಮೂಲಕ ಮತ್ತೊಮ್ಮೆ ವಿವರಗಳನ್ನು ಸಂಗ್ರಹಿಸಲಾಗುವುದು. ಈ ಸಂಪೂರ್ಣ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಎಐಸಿಸಿ ನಾಯಕರೊಂದಿಗಿನ ಸಭೆಯ ಬಳಿಕ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದರು.

“ಜೂನ್ 12ರಂದು ನಡೆಯಲಿರುವ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಪುನರ್ ಜಾತಿ ಗಣತಿ‌ ಯೋಜನೆಯನ್ನು ಅಂತಿಮಗೊಳಿಸುವ ಉದ್ದೇಶವಿತ್ತು. ಹಿಂದಿನ ಗಣತಿಯ ಬಗ್ಗೆ ಹಲವು ಸಮುದಾಯಗಳು ವ್ಯಕ್ತಪಡಿಸಿರುವ ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ರಾಷ್ಟ್ರೀಯ ನಾಯಕರು ಜಾತಿ ಗಣತಿಯನ್ನು ಪುನಹ ನಡೆಸುವಂತೆ ಸೂಚಿಸಿದ್ದಾರೆ. ಈ ಪ್ರಕ್ರಿಯೆಯು ನ್ಯಾಯಯುತವಾಗಿರಬೇಕು ಮತ್ತು ಪಾರದರ್ಶಕವಾಗಿರಬೇಕು, ಇದು ಎಲ್ಲ ಸಮುದಾಯಗಳ ಆತಂಕಗಳನ್ನು ಇಲ್ಲವಾಗಿಸಬೇಕು ಎಂದು ಆದೇಶಿಸಿದ್ದಾರೆ” ಎಂದು ಅವರು ಹೇಳಿದರು.

“ನಮ್ಮ ಹಿರಿಯ ನಾಯಕರ ಈ ನಿರ್ಧಾರವು ಪ್ರತಿ ಕುಟುಂಬಕ್ಕೂ ಜಾತಿ ಗಣತಿಯಲ್ಲಿ ಗಣನೆಗೆ ಒಳಪಡುವ ಅವಕಾಶವನ್ನು ಒದಗಿಸುವ ಹೆಜ್ಜೆಯಾಗಿದೆ. ಎಲ್ಲ ಸಮುದಾಯಗಳ ನಾಯಕರು ಮತ್ತು ಸ್ವಾಮಿಗಳು ಈ ಗಣತಿಗೆ ಸಹಕಾರ ನೀಡಬೇಕೆಂದು ಮನವಿ ಮಾಡುತ್ತೇನೆ” ಎಂದು ಶಿವಕುಮಾರ್ ಮನವಿ ಮಾಡಿದರು.

ಹೊಸ ಜಾತಿ ಗಣತಿಯ ಬಗ್ಗೆ ಜನರು ಚಿಂತೆ ಮಾಡಬೇಕಿಲ್ಲ ಎಂದು ಭರವಸೆ ನೀಡಿದ ಉಪಮುಖ್ಯಮಂತ್ರಿ, “ಹಿಂದಿನ ಜಾತಿ ಗಣತಿಯ ಕುರಿತು ವ್ಯಕ್ತವಾದ ಎಲ್ಲ ಆತಂಕಗಳನ್ನು ಸರಿಪಡಿಸಲಾಗುವುದು. ರಾಜ್ಯದಿಂದ ಹೊರಗಿರುವ ಜನರಿಗೂ ಗಣನೆಗೆ ಒಳಪಡಲು ಆನ್‌ಲೈನ್ ಆಯ್ಕೆಯನ್ನು ನೀಡಲಾಗುತ್ತದೆ” ಎಂದು ತಿಳಿಸಿದರು.

2015ರಲ್ಲಿ ನಡೆದ ಜಾತಿ ಗಣತಿಯನ್ನು ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ವಿರೋಧಿಸಿದ್ದರು ಮತ್ತು ಮರು ಗಣತಿಗೆ ಒತ್ತಾಯಿಸಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು