ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಣಾ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ಹೊಸ ಸಿನಿಮಾ ಥೀಮ್ ಪೋಸ್ಟರ್ – ಹೆಚ್ಚಾಯ್ತು ಕುತೂಹಲ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ರಾಣಾ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ಹೊಸ ಸಿನಿಮಾ ಥೀಮ್ ಪೋಸ್ಟರ್ – ಹೆಚ್ಚಾಯ್ತು ಕುತೂಹಲ

ಬೆಂಗಳೂರು: ʼಏಕ್ ಲವ್ ಯಾʼ ಸಿನಿಮಾ ಖ್ಯಾತಿಯ ನಟ ರಾಣಾ ಎರಡನೇ ಸಿನಿಮಾ ಯಾರ ಜೊತೆ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಅದಕ್ಕೆ ಈಗ ಉತ್ತರವೂ ಸಿಕ್ಕಾಗಿದೆ. ಪ್ರೇಮ್ ಶಿಷ್ಯ ವಿಜಯ್ ಈಶ್ವರ್ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದು, ಮೊದಲ ಸಿನಿಮಾವನ್ನು ರಾಣಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇಂದು ರಾಣಾ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ರಾಣಾಗೆ ಶುಭ ಕೋರಿದೆ.

‘ಏಕ್ ಲವ್ ಯಾʼ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ರಾಣಾ ತಮ್ಮ ಎರಡನೇ ಸಿನಿಮಾ ಮೂಲಕ ಮಗದೊಮ್ಮೆ ಸಿನಿರಸಿಕರ ಮನಗೆಲ್ಲಲ್ಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಈ ಬಾರಿ ಪ್ಯಾನ್ ಇಂಡಿಯಾ ಹೀರೋ ಆಗಿ ಮಿಂಚಲಿರುವ ರಾಣಾ ಸಿನಿಮಾಗಾಗಿ ಭರ್ಜರಿ ಸಿದ್ದತೆಯನ್ನು ನಡೆಸುತ್ತಿದ್ದಾರೆ. ಪೋಸ್ಟರ್ ಕೂಡ ಇಂಟ್ರಸ್ಟಿಂಗ್ ಆಗಿದ್ದು, ಶಾನ್ವಿ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ನಟ ರಾಣ

ಪ್ರೇಮ್ ಜೊತೆ ಸಹಾಯಕ ನಿರ್ದೇಶಕನಾಗಿ, ಬರಹಗಾರನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್ ಗೆ ಚಿತ್ರರಂಗದಲ್ಲಿ ಎಂಟು ವರ್ಷಗಳ ಅನುಭವವಿದೆ. ಮೊದಲ ಬಾರಿಗೆ ಕಥೆ ಬರೆದು ಸಿನಿಮಾ ನಿರ್ದೇಶನ ಸಾಹಸಕ್ಕೆ ಕೈ ಹಾಕಿರುವ ವಿಜಯ್ ಈಶ್ವರ್ ದೊಡ್ಡ ಮಟ್ಟದಲ್ಲಿ ಈ ಸಿನಿಮಾವನ್ನು ತೆರೆಗೆ ತರುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಕಲ್ಟ್, ಮಾಸ್ ಸಬ್ಜೆಕ್ಟ್ ಒಳಗೊಂಡ ಚಿತ್ರದ ಟೈಟಲ್ ಸದ್ಯದಲ್ಲೇ ರಿವೀಲ್ ಆಗಲಿದೆ. 

ಚಿತ್ರದಲ್ಲಿ ರಾಣಾ ಲುಕ್ ಕಂಪ್ಲೀಟ್ ಡಿಫ್ರೆಂಟ್ ಆಗಿರಲಿದ್ದು, ಬಿಡುಗಡೆಯಾಗಿರುವ ಥೀಮ್ ಪೋಸ್ಟರ್ ಕೂಡ ಅದನ್ನೇ ಹೇಳುತ್ತಿದೆ. ಬಿಗ್ ಬಜೆಟ್ ನಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟರೊಬ್ಬರು ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಲಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟರೊಬ್ಬರ ಗೆಸ್ಟ್ ಅಪಿಯರೆನ್ಸ್ ಕೂಡ ಸಿನಿಮಾದಲ್ಲಿರಲಿದೆ ಎನ್ನುತ್ತಾರೆ ನಿರ್ದೇಶಕರು. ಸಿನಿಮಾ ಟೈಟಲ್ ತಾಂತ್ರಿಕ ವರ್ಗ, ಎಲ್ಲದರ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು