ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಿರ್ಮಲಾ ಸೀತಾರಾಮನ್ ಹಣಕಾಸು ಆಯೋಗದ ಶಿಫಾರಸುಗಳನ್ನು ನಿರಾಕರಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ನಿರ್ಮಲಾ ಸೀತಾರಾಮನ್ ಹಣಕಾಸು ಆಯೋಗದ ಶಿಫಾರಸುಗಳನ್ನು ನಿರಾಕರಿಸುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತ್ಯವನ್ನು ಮಾತನಾಡುತ್ತಾರೆಂದು ನಾವು ನಿರೀಕ್ಷೆ ಮಾಡುತ್ತೇವೆ. ದುರದೃಷ್ಟವಶಾತ್, ಅವರೇ ಲಿಖಿತ ದಾಖಲೆಗಳನ್ನು ನಿರಾಕರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು, ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ಅತ್ಯಂತ ಖಂಡನೀಯ, ಈ ಹೇಳಿಕೆ ಆರುವರೆ ಕೋಟಿ ಕನ್ನಡಿಗರಿಗೆ ತೋರಿರುವ ಅಗೌರವ ಮತ್ತು ಮಾಡಿರುವ ಅವಮಾನ ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಶತಾಯಗತಾಯ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿ ಬಡವರಿಗೆ ನೀಡಲಾಗಿರುವ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವಂತೆ ಮಾಡಬೇಕೆಂಬ ದುರಾಲೋಚನೆ ಕೇಂದ್ರ ಸರ್ಕಾರಕ್ಕೆ ಇದೆ ಎನ್ನುವುದು ಕನ್ನಡಿಗರಿಗೆ ಈಗ ಅರ್ಥವಾಗಿದೆ. ಇದಕ್ಕೆ ತಕ್ಕ ಉತ್ತರವನ್ನು ರಾಜ್ಯದ ಮತದಾರರು ಲೋಕಸಭಾ ಚುನಾವಣೆಯಲ್ಲಿ ನೀಡಲಿದ್ದಾರೆ.
ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರೇ, ನಾವು ನಮ್ಮ ಗ್ಯಾರಂಟಿ ಯೋಜನೆಗಳಿಗೆ ವಿಶೇಷವಾದ ಅನುದಾನ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಬೇಡಿಕೊಳ್ಳುತ್ತಿಲ್ಲ, ಈ ಯೋಜನೆಗಳಿಗೆ ಬೇಕಿರುವ ಅನುದಾನವನ್ನು ಬಜೆಟ್ ನಲ್ಲೇ ಮೀಸಲಿಟ್ಟಿದ್ದೇವೆ.

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ದ ಸಿಡಿದೆದ್ದಿರುವ ಕನ್ನಡಿಗರ ಕೂಗಿಗೆ ರಾಜ್ಯ ಸರ್ಕಾರ ದನಿಯಾಗಿದೆ, ಇದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯವೂ ಹೌದು. ಅನ್ಯಾಯ ನಡೆದಿರುವ ಕಾರಣಕ್ಕಾಗಿಯೇ 2020-21ರಲ್ಲಿ 15ನೇ ಹಣಕಾಸು ಆಯೋಗವು ತನ್ನ ಮಧ್ಯಂತರ ವರದಿಯಲ್ಲಿ ಕರ್ನಾಟಕವೂ ಸೇರಿದಂತೆ 3 ರಾಜ್ಯಗಳಿಗೆ ವಿಶೇಷ ಅನುದಾನ ₹ 6,764 ಕೋಟಿ (ರಾಜ್ಯಕ್ಕೆ ₹5,495 ಕೋಟಿ, ತೆಲಂಗಾಣಕ್ಕೆ ₹723 ಕೋಟಿ ಹಾಗೂ ಮಿಜೋರಾಂಗೆ ₹546 ಕೋಟಿ) ಶಿಫಾರಸು ಮಾಡಿತ್ತು. ಕರ್ನಾಟಕಕ್ಕೆ ಮಾತ್ರವಲ್ಲ ತೆಲಂಗಾಣ ಮತ್ತು ಮಿಜೋರಾಂಗಳಿಗೂ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿತ್ತು.

15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ ಕೂಡ ಕರ್ನಾಟಕಕ್ಕೆ ₹6,000 ಕೋಟಿ ಇದರಲ್ಲಿ ರೂ.3,000 ಕೋಟಿ ಜಲಮೂಲಗಳ ಸಂರಕ್ಷಣೆ ಹಾಗೂ ₹3,000 ಕೋಟಿ ಬೆಂಗಳೂರಿನ ಫೆರಿಪೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಡುವಂತೆ ಶಿಫಾರಸು ಮಾಡಿತ್ತು. ಇದು ಕೇಂದ್ರ ಸರ್ಕಾರ ವಿಶೇಷ ಪ್ರೀತಿ ಇಲ್ಲವೇ ಔದಾರ್ಯದಿಂದ ಮಾಡಿರುವ ಶಿಫಾರಸುಗಳಲ್ಲ. ಇವೆಲ್ಲವೂ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯಕ್ಕೆ ನೀಡಿರುವ ಪರಿಹಾರ ಅಷ್ಟೆ.

ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದೆ ಎನ್ನುವ ಏಕೈಕ ಕಾರಣಕ್ಕೆ ಈ ಎರಡೂ ಶಿಫಾರಸುಗಳನ್ನು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿರಸ್ಕರಿಸಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ನ್ಯಾಯಯುತ ಪಾಲಿನ ಹಕ್ಕಿನಿಂದ ವಂಚಿತರನ್ನಾಗಿಸಿದರು. ಇದು ರಾಜ್ಯದ ಆರುವರೆ ಕೋಟಿ ಕನ್ನಡಿಗರಿಗೆ ಬಗೆದಿರುವ ದ್ರೋಹವಾಗಿದೆ.

ಕಣ್ಣೆದುರೇ ದಾಖಲೆಗಳಿದ್ದರೂ ಸ್ವಲ್ಪವೂ ಅಂಜಿಕೆಯಿಲ್ಲದೆ ಕೇಂದ್ರ ವಿತ್ತ ಸಚಿವರು ಹಸಿ ಹಸಿ ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುವ ಹತಾಶ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡಿಗರ ಎದುರು ಕೇಂದ್ರ ಸರ್ಕಾರದ ಸುಳ್ಳಿನ ಪರದೆ ಕಳಚಿ ಬಿದ್ದು ನಿಜ ಬಣ್ಣ ಬಯಲಾಗಿ ಬಹಳಾ ಕಾಲ ಆಗಿದೆ. ಇನ್ನಾದರೂ ಸತ್ಯ ಒಪ್ಪಿಕೊಂಡು ಆಗಿರುವ ಅನ್ಯಾಯ ಸರಿಪಡಿಸುವ ಪ್ರಯತ್ನ ಮಾಡಿ.

ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಬಗ್ಗೆ ಈ ರೀತಿಯ ಅಜ್ಞಾನ ಹೊಂದಿರುವುದು ವಿಷಾದನೀಯ ಎಂದು ಅವರು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು