ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಬಿಜೆಪಿಯೊಳಗೆ ಭಿನ್ನಮತದ ತಳಮಳ | ಎಲ್ಲರೂ ನಮ್ಮವರೇ ಯಾರೂ ಪಕ್ಷ ಬಿಡುವುದಿಲ್ಲ: ಶ್ರೀರಾಮುಲು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬಿಜೆಪಿಯೊಳಗೆ ಭಿನ್ನಮತದ ತಳಮಳ | ಎಲ್ಲರೂ ನಮ್ಮವರೇ ಯಾರೂ ಪಕ್ಷ ಬಿಡುವುದಿಲ್ಲ: ಶ್ರೀರಾಮುಲು

ಚಿತ್ರದುರ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳನ್ನು ಘೋಷಿಸಿದ ಕಾರಣ ಬಿಜೆಪಿಗೆ ಸೋಲಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಅದೆಲ್ಲ ನಡೆಯುವುದಿಲ್ಲ, ನಾವು ಖಂಡಿತವಾಗಿಯೂ ಗೆಲ್ಲಲಿದ್ದೇವೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಭವಿಷ್ಯ ನುಡಿದರು.

ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರನ್ನು ಸೆಳೆದು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದೆಲ್ಲ ಕನಸಿನ ಮಾತು, ನಾವೆಲ್ಲ ಪಕ್ಷದಲ್ಲಿ ಒಗ್ಗಟ್ಟಾಗಿದ್ದೇವೆ ಎಂದು ಅವರು ತಿಳಿಸಿದರು. ಈ ಕುರಿತು ಡಿಕೆ ಶಿವಕುಮಾರ್‌ ಹಗಲುಗನಸು ಕಾಣುತ್ತಿದ್ದು, ಇನ್ನು ನಾಲ್ಕೈದು ತಿಂಗಳಲ್ಲಿ ಅವರ ಬಂಡವಾಳ ಜನರಿಗೆ ತಿಳಿಯಲಿದೆ ಎಂದರು.

ಪಕ್ಷದಲ್ಲಿ ಒಗ್ಗಟ್ಟು ಮೂಡಿಸಲು ಬಿ.ವೈ. ವಿಜಯೇಂದ್ರ ಅವರಿಗೆಗೆ ಹೊಣೆ ನೀಡಲಾಗಿದೆ. ಸಿ.ಟಿ. ರವಿ, ಯತ್ನಾಳ್‌, ಸೋಮಣ್ಣ ಎಲ್ಲರೂ ಒಂದೇ ಕುಟುಂಬ. ವಿ.ಸೋಮಣ್ಣ ಪಕ್ಷ ಬಿಟ್ಟು ಹೋಗುವ ವ್ಯಕ್ತಿಯಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೆ ಸರಿ ಮಾಡುತ್ತೇವೆ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಅವರು ನುಡಿದರು.

ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷ ಕಟ್ಟುವ ವಿಷಯದಲ್ಲಿ ಮಾರ್ಗದರ್ಶನ ಮಾಡಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಅವರು ವಿಶ್ವಾಸದಿಂದ ನುಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು