ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಂಡ ಬಾಕಿ ಉಳಿಸಿಕೊಂಡವರಿಗಿಲ್ಲ ದಾಖಲೆ: ಸರ್ಕಾರದ ನಿರ್ಧಾರಕ್ಕೆ ಎಎಪಿ ತೀವ್ರ ವಿರೋಧ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ದಂಡ ಬಾಕಿ ಉಳಿಸಿಕೊಂಡವರಿಗಿಲ್ಲ ದಾಖಲೆ: ಸರ್ಕಾರದ ನಿರ್ಧಾರಕ್ಕೆ ಎಎಪಿ ತೀವ್ರ ವಿರೋಧ

ಬೆಂಗಳೂರು: ಸಣ್ಣಪುಟ್ಟ ಸಂಚಾರ ನಿಯಮ ಉಲ್ಲಂಘನೆಗೂ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತಿದ್ದು, ಇದನ್ನು ಕಟ್ಟಲು ಸಾಧ್ಯವಾಗದ ಬಡ-ಮಧ್ಯಮ ವರ್ಗದ ವಾಹನ ಸವಾರರಿಗೆ ಅಗತ್ಯ ದಾಖಲೆಗಳನ್ನು ನೀಡದಿರಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಅಮಾನವೀಯ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ದೂರಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಗದೀಶ್‌ ವಿ ಸದಂ, ʼದಂಡ ಕಟ್ಟಲು ಸಾಧ್ಯವಾಗದೇ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ವಿಮಾ ಪಾಲಿಸಿ ನವೀಕರಣ, ರಸ್ತೆ ತೆರಿಗೆ ಪಾವತಿ ರಸೀದಿ ಹಾಗೂ ವಾಹನ ಕ್ಷಮತೆ ಪ್ರಮಾಣಪತ್ರ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಾಹನ ಸವಾರರಿಗೆ ಗುಂಡಿಗಳಿಲ್ಲದ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಲೂ ಸಾಧ್ಯವಾಗದ ರಾಜ್ಯ ಸರ್ಕಾರವು ದಂಡ ವಸೂಲಿಗೆ ಮಾತ್ರ ಕಠಿಣ ನಿಲುವು ತೆಗೆದುಕೊಳ್ಳುವುದು ಸರಿಯಲ್ಲ. ಬೆಂಗಳೂರಿನ ಬಹುತೇಕ ವಾಹನ ಸವಾರರ ಮೇಲೆ ಕನಿಷ್ಠ 2,000 ರೂಪಾಯಿಯಿಂದ 40,000 ರೂಪಾಯಿ ತನಕ ದಂಡವಿದೆ. ಇದರಲ್ಲಿ ಹೆಚ್ಚಿನವರು ಬಡ ಹಾಗೂ ಮಧ್ಯಮ ವರ್ಗದವರಾಗಿದ್ದು, ಸರ್ಕಾರದ ನೂತನ ನಿರ್ಧಾರದಿಂದ ಇವರಿಗೆ ತೀವ್ರ ತೊಂದರೆಯಾಗಲಿದೆʼ ಎಂದು ಹೇಳಿದರು.

ʼಬೆಂಗಳೂರಿನಲ್ಲಿ ಸಂಚಾರದಟ್ಟಣೆಯು ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ವಾಹನಸವಾರರು ಪ್ರತಿದಿನ ಹೈರಾಣಾಗುತ್ತಿದ್ದಾರೆ. ಅವರ ಅಮೂಲ್ಯ ಸಮಯವು ರಸ್ತೆಯಲ್ಲಿ ವ್ಯರ್ಥವಾಗುತ್ತಿದೆ. ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಂಚಾರದಟ್ಟಣೆ ನಿರ್ವಹಣೆ ಮಾಡಲು ಬಳಸಿಕೊಳ್ಳುವ ಬದಲು ಕೇವಲ ದಂಡ ವಸೂಲಿ ಮಾಡಲು ಬಳಸಿಕೊಳ್ಳಲಾಗುತ್ತಿದೆ. ವಾಹನ ಸವಾರರನ್ನು ಲೂಟಿ ಮಾಡುವುದೇ ಪೊಲೀಸ್‌ ಇಲಾಖೆಯ ಆದ್ಯತೆಯ ವಿಷಯವಾಗಿದೆʼ ಎಂದು ಜಗದೀಶ್‌ ವಿ ಸದಂ ಆಕ್ರೋಶ ವ್ಯಕ್ತಪಡಿಸಿದರು.

ʼಬೆಂಗಳೂರಿನ ರಸ್ತೆಗಳಿಗೆಂದು ಬಿಡುಗಡೆಯಾದ 26,000 ಕೋಟಿ ರೂಪಾಯಿ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿಯಿಂದ ಬಿಡುಗಡೆಯಾದ 10,000 ಕೋಟಿ ರೂಪಾಯಿ ಬಹುಪಾಲು ಹಣವು ಜನಪ್ರತಿನಿಧಿಗಳ ಜೇಬು ಸೇರಿದೆ. ಪರಿಣಾಮವಾಗಿ, ವಾಹನ ಸವಾರರು ನಾನಾ ರೀತಿಯ ತೊಂದರೆ ಅನುಭವಿಸುವಂತಾಗಿದೆ. ಗಾಯದ ಮೇಲೆ ಬರೆ ಎಂಬಂತೆ ಸರ್ಕಾರ ಇನ್ನಷ್ಟು ನಿಯಮಗಳನ್ನು ತಂದು ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ದಂಡ ಪಾವತಿಸದವರಿಗೆ ಅಗತ್ಯ ದಾಖಲೆಗಳನ್ನು ನೀಡುವುದಿಲ್ಲವೆಂಬ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಶೀಘ್ರವೇ ಹಿಂಪಡೆಯಬೇಕು. ಇಲ್ಲದಿದ್ದರೆ ಆಮ್‌ ಆದ್ಮಿ ಪಾರ್ಟಿಯು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲಿದೆ. ವಾಹನ ಸವಾರರ ಜೊತೆಗೂಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆʼ ಎಂದು ಜಗದೀಶ್‌ ವಿ ಸದಂ ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು