ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ

PPeepal Media Desk

Peepal Media Desk • ರಾಜ್ಯ

• 2 ನಿಮಿಷದ ಓದು

ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ

ಜುಲೈ ತಿಂಗಳಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗಭೌಡ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಉತ್ತಮ ಮಳೆಯಾಗಿಲ್ಲ, ರೈತರ ಬೆಲೆ ಹಾನಿಯಾಗಿದೆ, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ ಎಂದು ಸದನದಲ್ಲಿ ಅನೇಕ ಶಾಸಕರು ಪ್ರಶ್ನೆ ಮುಂದಿಟ್ಟರು.
ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, “ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ. 29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಮಾಹಿತಿ ನೀಡಿದ್ದಾರೆ.
ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿದ್ದರೂ ಸಹ, ಕೆಲವು ಜಿಲ್ಲೆಗಳು ಈಗಲೂ ಮಳೆ ಕೊರತೆಯನ್ನು ಎದುರಿಸುತ್ತಿವೆ. ರಾಜ್ಯದ 330 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದೆ. 404 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ಹೊರೆಯನ್ನು ಸರ್ಕಾರ ಗ್ರಾಮ ಪಂಚಾಯಿತಿಗಳ ಮೇಲೆ ಹೊರಿಸಿಲ್ಲ. ಬದಲಾಗಿ ಪ್ರತಿ ಜಿಲ್ಲೆಗೆ ನೀರಿನ ಪೂರೈಕೆಗೆಂದೆ ಸರ್ಕಾರ ತಲಾ 1 ಕೋಟಿ ರೂ.ಹಣ ಮಂಜೂರು ಮಾಡಲಾಗಿದೆ.
ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಎಚ್ಚರವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೆ,, ಹೆಚ್ಚುವರಿ ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲು ಸರ್ಕಾರ ಬದ್ಧವಾಗಿರುವುದಾಗಿ ಸಚಿವ ತಿಳಿಸಲಾಗಿದೆ ಎಂದರು.

ಹಿಂದಿನ ಸರ್ಕಾರ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ: ಕೃಷ್ಣಭೈರೇಗೌಡ ಕಿಡಿ
ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಎಲ್ಲ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ಪರಿಣಾಮ ಜಲಾಶಯಗಳು ಬಹುತೇಕ ಬರಿದಾಗಿವೆ ಎಂದು ಕೃಷ್ಣಭೈರೇಗೌಡ ಕಿಡಿಕಾರಿದರು.
“ಕಳೆದ ವರ್ಷಾಂತ್ಯದ ಡಿಸೆಂಬರ್ ವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಲಾಶಯಗಳಿಗೆ ನೀರಿನ ಹರಿವು ಭರಪೂರವಾಗಿತ್ತು. ಆದರೆ, ಹಿಂದಿನ ಸರ್ಕಾರ ಜಲಾಶಯಗಳನ್ನು ಅಶಿಸ್ತಿನಿಂದ ನಿರ್ವಹಿಸಿದೆ. ನೀರಿನ್ನು ಬೇಕಾಬಿಟ್ಟಿ ನಾಲೆಗಳಿಗೆ ಹರಿಸಿದೆ. ಪರಿಣಾಮ ಬಹುತೇಕ ಜಲಾಶಯಗಳು ಖಾಲಿಯಾಗಿವೆ” ಎಂದು ಅಸಮಾಧಾನ ಹೊರಹಾಕಿದರು.
ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗದ ಕಾರಣ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ಕುಸಿದಿತ್ತು. ಆದರೆ, ಜುಲೈನಲ್ಲಿ ಉತ್ತಮ ಮಳೆಯಾಗಿದೆ. ಕಾವೇರಿಯ ನಾಲ್ಕು ಜಲಾಶಯಗಳಿಗೆ 18,617 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಕೃಷ್ಣ ನದಿಯ 6 ಜಲಾಶಯಗಳಿಗೆ 76, 264 ಕ್ಯೂಸೆಕ್ಸ್ ನೀರಿನ ಹರಿವಿದೆ. ಆಲಮಟ್ಟಿಗೂ 32,146 ಕ್ಯೂಸೆಕ್ಸ್ ನೀರಿನ ಒಳಹರಿವಿದೆ. ಘಟಪ್ರಭ-ಮಲಪ್ರಭದಲ್ಲೂ ನೀರಿನ ಒಳಹರಿವು ಹಣನೀಯವಾಗಿ ಹೆಚ್ಚಾಗಿದೆ.
ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ಸದ್ಯಕ್ಕಿಲ್ಲ. ಎಲ್ಲ ಗ್ರಾಮಗಳಿಗೂ ಕುಡಿಯುವ ನೀರನ್ನು ಪೂರೈಸುವ “ಬಹುಗ್ರಾಮ ಕುಡಿಯುವ ನೀರು” ಯೋಜನೆಗೆ ಯಾವುದೇ ಆತಂಕ ಇಲ್ಲ. ಆದರೆ, ಹಲವು ಸದಸ್ಯರ ಭಿತ್ತನೆಯಾಗಿರುವ ಬೆಳೆಗೆ ನೀರು ಹರಿಸುವಂತೆ ಹಲವು ಸದಸ್ಯರು ಮನವಿ ಮಾಡುತ್ತಿದ್ದಾರೆ. ಸದ್ಯಕ್ಕೆ ನಾಲೆಗಳಿಗೆ ನೀರು ಹರಿಸುವಷ್ಟು ನೀರಿನ ಶೇಖರಣೆ ಜಲಾಶಯಗಳಲ್ಲಿ ಇಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಬರಗಾಲ ಘೋಷಣೆ:


ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತ ಸಂಕಷ್ಟಕ್ಕೆ ಈಡಾಗಿದ್ದಾನೆ. ಹಲವೆಡೆ ಬೆಲೆ ನಷ್ಟವಾಗಿದೆ. ಹೀಗಾಗಿ ಬರಗಾಲ ಘೋಷಿಸಿ ರೈತರಿಗೆ ನಷ್ಟ ಪರಿಹಾರವನ್ನು ತುಂಬಿಕೊಡಬೇಕು ಎಂದು ವಿಧಾನಸಭೆಯಲ್ಲಿ ಹಲವು ಶಾಸಕರು ಒತ್ತಾಯಿಸಿದರು.
ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣಭೈರೇಗೌಡ, “ರಾಜ್ಯದಲ್ಲಿ ಕೆಲವು ತಾಲೂಕುಗಳಲ್ಲಿ ಬರದ ಛಾಯೆ ಇದೆ. ಅಲ್ಲದೆ, ಬರ ಘೋಷಣೆಗೆ ಕೇಂದ್ರ ಸರ್ಕಾರದ ಕೆಲವು ಮಾನದಂಡಗಳಿವೆ. ಆಗಸ್ಟ್ ಮೊದಲ ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಬರ ಘೋಷಣೆಯ ಬಗ್ಗೆ ಚಿಂತನೆ ನಡೆಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು