ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಸ್ಮರಣಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಸ್ಮರಣಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ಬೆಂಗಳೂರು: ಹಿರಿಯ ಪತ್ರಕರ್ತ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಸ್ಮರಣಾರ್ಥ ನೀಡಲಾಗುವ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನಿಸಲಾಗಿದೆ. ಸಾರ್ವಜನಿಕರು, ಸಂಘ – ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ.

ಅರ್ಹತೆ:

ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವಾನುಭವ ಹೊಂದಿರಬೇಕು. ಹಿರಿಯರಿಗೆ ಆದ್ಯತೆ ನೀಡಲಾಗುವುದು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10 ರಿಂದ 15 ಲೇಖನಗಳು ಪ್ರಕಟವಾಗಿರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿರ್ಮಿಸಿರಬೇಕು. ನಾಮನಿರ್ದೇಶನಗಳನ್ನು ಸಲ್ಲಿಸಲು 2024ನೇ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ.

ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ.17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು 560 001 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ, ಇಲ್ಲವೇ tsraward@gmail.com ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಇತರೆ ಜಿಲ್ಲೆಗಳ ಪತ್ರಕರ್ತರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು.

ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಕಿರು ಪರಿಚಯ:

ಓದುಗರ ಸಂಪಾದಕ ಎಂದೇ ಹೆಸರಾಗಿದ್ದ ದಿ. ವಡ್ಡರ್ಸೆ ರಘುರಾಮ ಶೆಟ್ಟಿಯವರು 1960ರ ದಶಕದಿಂದ ಸುಮಾರು ನಲುವತ್ತು ವರ್ಷಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ.

ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ʼಮುಂಗಾರುʼ ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು.

ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತಿದವರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದವರು.

ವಿಷಯಗಳು: #karnataka #news #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು