ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಖರ್ಗೆ: ಶುಭಕೋರಿದ ಹೆಚ್.ಡಿ.ಕೆ
ಲಿಂಕ್ ನಕಲಿಸಲಾಗಿದೆ ✓

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ಇಂದು ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಹೆಚ್.ಡಿ ಕುಮಾರಸ್ವಾಮಿಯವರು ಖರ್ಗೆ ಅವರಿಗೆ ಟ್ವೀಟ್ ಮುಖಾಂತರ ಶುಭಕೋರಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಪದವಿಗಾಗಿ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಎದುರಾಳಿ ಶಶಿ ತರೂರ್ ಅವರನ್ನು 6,897 ಮತಗಳ ಬಹಳ ದೊಡ್ಡ ಅಂತರದಿಂದ ಸೋಲಿಸಿ ಇಂದು ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ʼಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಶ್ರೀ ಖರ್ಗೆ ಅವರದ್ದು ಸುದೀರ್ಘ ರಾಜಕೀಯ ಅನುಭವ. ಅಚಲವಾದ ಪಕ್ಷನಿಷ್ಠೆ ಅವರನ್ನು ಈ ಉನ್ನತ ಹುದ್ದೆವರೆಗೂ ತಂದಿದೆ. ಶ್ರೀ ಖರ್ಗೆ ಅವರಿಂದ ಆ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆʼ ಎಂದು ಹೇಳಿದ್ದಾರೆ.
Peepal Media Desk
Peepal Media · ರಾಜ್ಯ ವಿಭಾಗ
