ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ” ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಚಿವ ವಿ.ಸೋಮಣ್ಣ

PPeepal Media

Peepal Media ರಾಜ್ಯ

• 1 ನಿಮಿಷದ ಓದು

“ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ” ಕಾಮಗಾರಿ ಪೂರ್ಣಗೊಳಿಸಲು ಸೂಚನೆ: ಸಚಿವ ವಿ.ಸೋಮಣ್ಣ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ʼಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರʼ ವ್ಯಾಪ್ತಿಯಲ್ಲಿನ “ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲುಸೇತುವೆ ” ಕಾಮಗಾರಿಯ ಸ್ಥಳವನ್ನು ಮಾನ್ಯ ವಸತಿ ಸಚಿವರಾದ ʼಶ್ರೀ ವಿ.ಸೋಮಣ್ಣʼ ರವರು ಪರಿಶೀಲನೆ ನಡೆಸಿ, ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.

ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸಿಗ್ನಲ್ ಮುಕ್ತ ಕಾರಿಡಾರ್ ನಿರ್ಮಿಸುವ ಸಲುವಾಗಿ ಮಂಜುನಾಥನಗರದ ಬಳಿ ಮೇಲುಸೇತುವೆ, ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆ ಹಾಗು ಬಸವೇಶ್ವರ ನಗರ ವೃತ್ತದ ಏಕಮುಖ ಸಂಚಾರದ ಬಳಿ ಮೇಲುಸೇತುವೆಯ ಗ್ರೇಡ್ ಸೆಪರೇಟರ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.

ಅದರಂತೆ, ಮಂಜುನಾಥನಗರ ಬಳಿ 18.18 ಕೋಟಿ ರೂ. ವೆಚ್ಚದಲ್ಲಿ 270.62 ಮೀ ಉದ್ದದ ಮೇಲುಸೇತುವೆಯನ್ನು ದಿನಾಂಕ: 27.08.2018 ರಂದು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವುಮಾಡಲಾಗಿರುತ್ತದೆ. ಶಿವನಗರ 1 ಮತ್ತು 8ನೇ ಮುಖ್ಯ ರಸ್ತೆಯ ಕೂಡು ಸ್ಥಳದಲ್ಲಿ ಕೆಳಸೇತುವೆಯ ಬದಲಾಗಿ 71.98 ಕೋಟಿ ರೂ. ವೆಚ್ಚದಲ್ಲಿ 655 ಮೀಟರ್ ಉದ್ದದ ಮೇಲುಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಂಡು ದಿನಾಂಕ: 04.10.2021 ರಂದು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವುಮಾಡಲಾಗಿರುತ್ತದೆ.

ಇನ್ನು ಶಿವನಗರ ನಂತರದ ಜಂಕ್ಷನ್‌ಗಳಾದ ಬಸವೇಶ್ವರ ನಗರ ಜಂಕ್ಷನ್ ಮತ್ತು 72ನೇ ಅಡ್ಡ ರಸ್ತೆಯ ಜಂಕ್ಷನ್ ಬಳಿ ಮೇಲುಸೇತುವೆ ನಿರ್ಮಾಣದ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಬಸವೇಶ್ವರ ಜಂಕ್ಷನ್ ಬಳಿ ಹೆಚ್ಚುವರಿ ಏಕಮುಖ ಸಂಚಾರದ ಮೇಲುಸೇತುವೆಯನ್ನು 54.63 ಕೋಟಿ ರೂ. ವೆಚ್ಚದಲ್ಲಿ ಒಟ್ಟು 735 ಮೀಟರ್ ಉದ್ದದ ಮೇಲುಸೇತುವೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ನವೆಂಬರ್-2022ರ ಅಂತ್ಯದೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆಯ ವೇಳೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್, ವಲಯ ಆಯುಕ್ತರಾದ ಡಾ. ದೀಪಕ್, ವಲಯ ಜಂಟಿ ಆಯುಕ್ತರಾದ ಯೋಗೇಶ್, ಮುಖ್ಯ ಅಭಿಯಂತರರಾದ ದೊಡ್ಡಯ್ಯ, ಲೋಕೇಶ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು