ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖ್ಯಾತ ಚಲನಚಿತ್ರ ನಿರ್ದೇಶಕ, ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್ ನಿಧನ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಖ್ಯಾತ ಚಲನಚಿತ್ರ ನಿರ್ದೇಶಕ, ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಚಲನಚಿತ್ರ ನಿರ್ದೇಶಕ, ಹಿರಿಯ ಪತ್ರಕರ್ತ ಹಾಗೂ ಚಿಂತಕ ಎನ್.ಎಸ್. ಶಂಕರ್ (58) ಅವರು ಭಾನುವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ಮೂಲತಃ ಪತ್ರಿಕೋದ್ಯಮ ಹಿನ್ನೆಲೆಯುಳ್ಳ ಎನ್.ಎಸ್. ಶಂಕರ್ ಲಂಕೇಶ್ ಪತ್ರಿಕೆಯಲ್ಲಿ ತೀಕ್ಷ್ಣ ಬರಹಗಳ ಮೂಲಕ ಗುರುತಿಸಿಕೊಂಡಿದ್ದರು. ತದನಂತರ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು 1997ರಲ್ಲಿ ಬಿಡುಗಡೆಯಾದ ಸೂಪರ್ ಹಿಟ್ ಕಾಮಿಡಿ ಚಿತ್ರ ‘ಉಲ್ಟಾ ಪಲ್ಟಾ’ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೊಸ ಅಲೆ ಸೃಷ್ಟಿಸಿದರು.

ರಮೇಶ್ ಅರವಿಂದ್ ಮತ್ತು ಕಾಶಿ ಪ್ರಮುಖ ಪಾತ್ರಗಳಲ್ಲಿದ್ದ ಈ ಚಿತ್ರವು ಶೇಕ್ಸ್‌ಪಿಯರ್‌ನ ‘ಕಾಮಿಡಿ ಆಫ್ ಎರರ್ಸ್’ ನಾಟಕದ ಆಧಾರಿತವಾಗಿದ್ದು, ಇಂದಿಗೂ ಕನ್ನಡದ ಸಾರ್ವಕಾಲಿಕ ಅತ್ಯುತ್ತಮ ಹಾಸ್ಯ ಚಿತ್ರಗಳಲ್ಲಿ ಒಂದಾಗಿ ಉಳಿದಿದೆ.


ಚಿತ್ರರಂಗ ಮಾತ್ರವಲ್ಲದೆ ಸಾಹಿತ್ಯ ವಲಯದಲ್ಲೂ ಸಕ್ರಿಯರಾಗಿದ್ದ ಶಂಕರ್ ಅವರು ಸಿನಿಮಾ, ರಾಜಕೀಯ ಮತ್ತು ಸಾಮಾಜಿಕ ವಿಷಯಗಳ ಕುರಿತು 20ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.

ಇವರ ಸುದೀರ್ಘ ಸಾಂಸ್ಕೃತಿಕ ಮತ್ತು ಪತ್ರಿಕೋದ್ಯಮದ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು ಇವರಿಗೆ 2024ನೇ ಸಾಲಿನ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಬೆಂಗಳೂರು ಅಂತರರಾಷ್ಟ್ರ ಚಲನಚಿತ್ರೋತ್ಸವದ (BIFFES) ತೀರ್ಪುಗಾರರಾಗಿಯೂ ಅವರು ಸೇವೆ ಸಲ್ಲಿಸಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು