ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್: ಟೆಕ್ಕಿ ಸೇರಿದಂತೆ ಇಬ್ಬರು ಕಿಡಿಗೇಡಿಗಳ ಬಂಧನ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್: ಟೆಕ್ಕಿ ಸೇರಿದಂತೆ ಇಬ್ಬರು ಕಿಡಿಗೇಡಿಗಳ ಬಂಧನ

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ ಹಾಗೂ ಅವಾಚ್ಯ ಪದಗಳನ್ನು ಬಳಸಿದ ಆರೋಪದ ಮೇಲೆ ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ ಮತ್ತು ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ‌

ಆರೋಪಿಗಳು ವಿಜಯಲಕ್ಷ್ಮಿ ಅವರ ದೂರಿನ ನಂತರ ತಮ್ಮ ಸಂದೇಶಗಳನ್ನು ಡಿಲೀಟ್ ಮಾಡಿದ್ದರೂ, ಪೊಲೀಸರು ಐಪಿ (IP) ವಿಳಾಸವನ್ನು ಪತ್ತೆಹಚ್ಚುವ ಮೂಲಕ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಕಳೆದ ವಾರ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 15 ಇನ್‌ಸ್ಟಾಗ್ರಾಮ್ ಐಡಿಗಳು ಮತ್ತು 150ಕ್ಕೂ ಹೆಚ್ಚು ಆಕ್ಷೇಪಾರ್ಹ ಕಾಮೆಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಆದರೆ, ತಮ್ಮ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಬುಧವಾರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಅವರು, “ಮತ್ತೊಬ್ಬ ಮಹಿಳೆ (ನಟಿ ರಮ್ಯಾ) ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ, ಆದರೆ ನನ್ನ ದೂರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ನಾನು ನಂಬಿದ್ದೆ, ಆದರೆ ಈ ಅನುಭವ ನನ್ನ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ” ಎಂದು ಕಿಡಿಕಾರಿದ್ದರು.

ವಿಜಯಲಕ್ಷ್ಮಿ ಅವರ ಆರೋಪವನ್ನು ತಳ್ಳಿಹಾಕಿದ್ದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆ ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಇಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಉಳಿದ ಕಿಡಿಗೇಡಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.

ಈ ಹಿಂದೆ ನಟಿ ರಮ್ಯಾ ಅವರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಗಳನ್ನೂ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದರು ಎಂಬುದು ಗಮನಾರ್ಹ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು