ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೂವರು ಬೇಟೆಗಾರರ ಎನ್‌ಕೌಂಟರ್‌ ಉದ್ರಿಕ್ತರಿಂದ ಕಚೇರಿ – ಪೀಠೋಪಕರಣ ಧ್ವಂಸ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಮೂವರು ಬೇಟೆಗಾರರ ಎನ್‌ಕೌಂಟರ್‌ ಉದ್ರಿಕ್ತರಿಂದ ಕಚೇರಿ – ಪೀಠೋಪಕರಣ ಧ್ವಂಸ

ಹನೂರು : ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, ಕುಮಾರ್ ಮೃತಪಟ್ಟಿದ್ದು ಮಹಿಮದಾಸ್ ಮೈಸೂರಿನ ನಾರಾಯಣ ಹೃದಯಲಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನಜಾವ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೇಟೆಗಾರರನ್ನು ಹಿಡಿಯಲು ಮುಂದಾದಾಗ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆಯವರು ಪ್ರತಿದಾಳಿ ನಡೆಸಿದಾಗ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೂರು ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಉದ್ರಿಕ್ತರಿಂದ ಪೀಠೋಪಕರಣ ಧ್ವಂಸ: ಇನ್ನು ಮೂವರು ಮೃತಪಟ್ಟ ಮಾಹಿತಿ ತಿಳಿದು ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದು ಶಾಗ್ಯ ಡಿಆರ್ಎಫ್ಒ ಕಚೇರಿಗೆ ಒಳನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಗುಂಡೇಟಿಗೆ ಬಲಿಯಾದ ಮೂವರು ಕಳ್ಳ ಬೇಟೆಗಾರರಲ್ಲ, ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿಯನ್ನೇ ಮಾಡರಲಿಲ್ಲ. ಆದರೂ ಸಹ ಪ್ರತಿ ದಾಳಿಯ ಹೆಸರಿನಲ್ಲಿ ಅವರನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಮೃತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿಲ್ಲ‌. ಪ್ರತಿದಾಳಿಯ ನೆಪದಲ್ಲಿ ಮೂವರನ್ನು ಗುಂಡಿಟ್ಟು ಕೊಂದಿದ್ದಾರೆ. ಈ ಪ್ರಕರಣ ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಸಚಿವರು ಹೇಳಿದ್ದೇನು: ಘಟನೆ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳ ಜೊತೆ ಮಾತನಾಡಿದ್ದು- ಕಳ್ಳಬೇಟೆಗೆ ತೆರಳಿದ್ದವರು ಸಿಬ್ಬಂದಿ ಮೇಲೆ ನಾಡಬಂದೂಕುಗಳಿಂದ ದಾಳಿ ಮಾಡಿದಾಗ ಪ್ರತಿದಾಳಿ ಮಾಡಿದಾಗ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯರು, ಮೃತಪಟ್ಟವರು ಅಮಾಯಕರಾಗಿದ್ದು ಬೇಟೆಗೆ ಹೋಗಿರಲಿಲ್ಲ ಎನ್ನುತ್ತಿದ್ದಾರೆ, ಪರಿಶೀಲಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.ಇನ್ನು, ಹನೂರು ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟಿಸುವ ಸಾಧ್ಯತೆ ಇರುವ ಹಿನ್ನೆಲೆ ಅರಣ್ಯ ಕಚೇರಿ ಸುತ್ತಮುತ್ತಲು ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು