ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಧಿಕಾರಿಗಳೇ ಜನರತ್ತ ಬರುವುದು ಜನಸ್ಪಂದನದ ಉದ್ದೇಶ: ಶಾಸಕ ಸ್ವರೂಪ್ ಪ್ರಕಾಶ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಅಧಿಕಾರಿಗಳೇ ಜನರತ್ತ ಬರುವುದು ಜನಸ್ಪಂದನದ ಉದ್ದೇಶ: ಶಾಸಕ ಸ್ವರೂಪ್ ಪ್ರಕಾಶ್


ಹಾಸನ: ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಧಿಕಾರಿಗಳ ಹತ್ತಿರ ಬರುವ ಬದಲಾಗಿ ಅಧಿಕಾರಿಗಳೇ ಜನರತ್ತ ಆಗಮಿಸಿ ಅವರ ಅಹವಾಲುಗಳನ್ನು ಸ್ವೀಕರಿಸಲು ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಜನರ ಸಣ್ಣ ಸಣ್ಣ ಸಮಸ್ಯೆಗಳಿಗೂ ಇಲ್ಲಿ ಪರಿಹಾರ ಸಿಗಲಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಹೇಳಿದರು.
ತಾಲೂಕಿನ ಸಾಲಗಾಮೆಯಲ್ಲಿ ಸೋಮವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಶಾಸಕರ ನಡೆ ಜನರ ಕಡೆ ಎಂಬ ಘೋಷ ವಾಕ್ಯದ ಅಡಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತ ಹಾಗೂ ಸೈನಿಕರು ಈ ದೇಶದ ಬೆನ್ನೆಲುಬು ಅವರ ಯಾವುದೇ ರೀತಿಯ ಸಮಸ್ಯೆಗಳಿಗೆ ಸ್ಪಂದಿಸುವುದು ಎಲ್ಲರ ಕರ್ತವ್ಯವಾಗಿದೆ. ರೈತರ ಯಾವುದೇ ಸಮಸ್ಯೆಗಳನ್ನು ಅಧಿಕಾರಿಗಳು ನಿರ್ಲಕ್ಷ÷್ಯ ಮಾಡಬಾರದು ಎಂದರು. ಹಾಸನ ನಗರ ಪಾಲಿಕೆಯಾಗಿ ಘೋಷಣೆಯಾದ ಬಳಿಕ ತಾಲೂಕಿನ ಶೇಕಡಾ 50 ರಷ್ಟು ಹಳ್ಳಿಗಳು ನಗರ ಪಾಲಿಕೆಗೆ ಒಳಪಡುವುದರಿಂದ ಅನೇಕ ಸಮಸ್ಯೆಗಳು ಎದುರಾಗಿವೆ, ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು ಪ್ರತಿಯೊಬ್ಬರ ಸಮಸ್ಯೆ ಆಲಿಸಿ ಅದಕ್ಕೆ ಪರಿಹಾರ ಮಾರ್ಗೋಪಾಯ ಸೂಚಿಸಲಾಗುವುದು.ಎಲ್ಲಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಇಲ್ಲಿಯೇ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ಆರೋಗ್ಯವಾಗಿದ್ದಾಗ ಮಾತ್ರ ಕೆಲಸ ಮಾಡಲು ಸಾಧ್ಯ ಈ ನಿಟ್ಟಿನಲ್ಲಿ ರೈತರ ಗ್ರಾಮೀಣ ಜನರ ಆರೋಗ್ಯದ ಹಿತ ದೃಷ್ಟಿಯಿಂದ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.


ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ನಗರಸಭೆ, ಶಿಕ್ಷಣ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ತಮ್ಮ ಸಮಸ್ಯೆಗಳ ಬಗ್ಗೆ ಕ್ಷೇತ್ರದ ವ್ಯಾಪ್ತಿಯ ಜನರು ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ಮನವರಿಕೆ ಮಾಡಿಕೊಟ್ಟರು. ಈ ವೇಳೆ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿ ಇನ್ನು ಕೆಲವು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಸಂಭAದಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು


ಈ ಸಂದರ್ಭದಲ್ಲಿ ಹಾಸನ ತಾಲೂಕು ತಾಸಿಲ್ದಾರ್ ಮೇಘನ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುಕ್ಮಿಣಿ, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಸಂಶುದ್ದೀನ್, ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಷಯಗಳು: #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು