ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದ್ವೀಪದಲ್ಲಿ ಅಕ್ರಮ ಮರಳು ದಂಧೆಗೆ ಅಧಿಕಾರಿಗಳ ಬೆಂಬಲ: ಕ್ರಮಕ್ಕೆ ಆಗ್ರಹ

P

Peepal Media Desk • ರಾಜ್ಯ

• 2 ನಿಮಿಷದ ಓದು

ದ್ವೀಪದಲ್ಲಿ ಅಕ್ರಮ ಮರಳು ದಂಧೆಗೆ ಅಧಿಕಾರಿಗಳ ಬೆಂಬಲ: ಕ್ರಮಕ್ಕೆ ಆಗ್ರಹ

ಮಂಗಳೂರು: ಇಲ್ಲಿನ ಪಾವೂರು, ಉಳಿಯ ದ್ವೀಪದಲ್ಲಿ ಮರಳು ದಂಧೆಕೋರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಶಾಮೀಲಾಗಿ ಸುಳ್ಳು ವರದಿ ನೀಡುತ್ತಿದ್ದಾರೆ. ಈ ಭ್ರಷ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಮರಳು ಮಾಫಿಯಾದ ಅಟ್ಟಹಾಸ ಬರಿಗಣ್ಣಿಗೆ ಕಾಣುತ್ತಿದ್ದರೂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ “ಪರಿಶೀಲನೆ” ಯಲ್ಲಿ ಸಾಮಾನ್ಯ ಮರಳುಗಾರಿಕೆ ನಡೆದಿರುವ ಕುರುಹುಗಳೂ ಕಂಡು ಬಂದಿಲ್ಲವಂತೆ. ಸ್ಥಳೀಯ ಮಾಧ್ಯಮಗಳು ಸ್ಥಳಕ್ಕೆ ಹೋಗಿ ಖುದ್ದು ಚಿತ್ರೀಕರಿಸಿ ಪ್ರಸಾರ ಮಾಡಿದ “ವೀಡಿಯೋ ದೃಶ್ಯಗಳು ಹಳೆಯವು” ಎಂದೆಲ್ಲ ವರದಿ ನೀಡುತ್ತಿದ್ದಾರೆ ಎಂದು ಒಕ್ಕೂಟದ ಸಂಚಾಲಕ ಮುನೀರ್‌ ಕಾಟಿಪಳ್ಳ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಮಾಧ್ಯಮಗಳ ಪ್ರತಿನಿಧಿಗಳ ಜೊತೆಗೆ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಖುದ್ದು ಸ್ಥಳ ಪರಿಶೀಲನೆ ನಡೆಸಿದಾಗ ದ್ವೀಪದ ದೊಡ್ಡ ಭಾಗ ನದಿಯ ಪಾಲಾಗಿರುವುದು ಮತ್ತು ದ್ವೀಪದ ಭೂಭಾಗ ಕಿರಿದಾಗಿರುವುದು ಗಮನಕ್ಕೆ ಬಂದಿದೆ. ಆದರೆ, ‘ಹಿರಿಯ ಭೂ ವಿಜ್ಞಾನಿ ಹಾಗೂ ಅವರ ತಾಂತ್ರಿಕ ಅಧಿಕಾರಿಗಳ ತಂಡ’ ಪರಿಶೀಲನೆ ನಡೆಸಿದಾಗ, “30 ಎಕರೆ ಇರಬೇಕಾದ ದ್ಚೀಪ 98 ಎಕರೆ ಆಗಿದೆ” ಎಂದು ವರದಿ ನೀಡಿದ್ದಾರೆ. ಇದಂತೂ ವಿಸ್ಮಯಕಾರಿಯಾಗಿದೆ. ಬಹುಷ, ಮರಳು ದಂಧೆಕೋರರು ಪರಿಸರದ ಮೇಲಿನ ಅಪಾರ ಕಾಳಜಿಯಿಂದ ಹೊರಗಡೆಯಿಂದ ಮರಳು ತಂದು ದ್ವೀಪದ ಸುತ್ತ ಸುರಿದು ದ್ವೀಪವನ್ನು ವಿಸ್ತರಿಸಿದ್ದಾರೆಯೆ, ಹೊರತು ಮರಳು ತೆಗೆದಿಲ್ಲ ಎಂದು ಗಣಿ ಇಲಾಖೆ ಹೇಳಲು ಹೊರಟಂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ದ್ವೀಪವಾಸಿಗಳ ದೂರು, ಮಾಧ್ಯಮಗಳ ವರದಿಯ ಮೇರೆಗೆ ಪರಿಶೀಲನೆಗೆ ತೆರಳಿದ ಹಿರಿಯ ಭೂ ವಿಜ್ಞಾನಿ ಹಾಗೂ ತಾಂತ್ರಿಕ ಅಧಿಕಾರಿಗಳ ತಂಡವನ್ನೇ ಸರಕಾರ ತನಿಖೆಗೆ ಒಳಪಡಿಸಬೇಕು. ಪರಿಶೀಲನೆಗೆ ಉಳಿಯ ದ್ವೀಪಕ್ಕೆ ಆಗಮಿಸಿದ ತಂಡ, ದೂರುದಾರರಾದ ದ್ವೀಪವಾಸಿಗಳ ಉಪಸ್ಥಿತಿಯಲ್ಲಿ ಪರಿಶೀಲನೆ ನಡೆಸುವ ಬದಲಿಗೆ, ಮರಳು ದಂಧೆಕೋರರ ದೋಣಿಯನ್ನು ಉಪಯೋಗಿಸಿ ದ್ಚೀಪಕ್ಕೆ ತೆರಳಿದೆ, ಮರಳು ದಂಧೆಯವರ ಆತಿಥ್ಯದಲ್ಲಿ ಸ್ಥಳ ಪರಿಶೀಲನೆ ನಡೆಸಿದೆ. ಈ ನಡವಳಿಕೆಗಳೇ ಗಣಿ ಇಲಾಖೆಯ ಭ್ರಷ್ಟತೆ, ಮರಳು ಮಾಫಿಯಾ ಜೊತೆಗಿನ ಶಾಮೀಲಾತಿಯನ್ನು ಎತ್ತಿತೋರಿಸುತ್ತದೆ.

ದ್ವೀಪದಲ್ಲಿ ಮರಳುಗಾರಿಕೆ ನಡೆಸುವ ದೃಶ್ಯಗಳು ಇತ್ತೀಚೆಗೆ ದೈಜಿ ವರ್ಲ್ಡ್ ವಾಹಿನಿಯಲ್ಲಿ ಪ್ರಸಾರವಾಗಿವೆ. ಇದು ಹಳೆಯ ವೀಡಿಯೋ ಎಂದು ಇಲಾಖೆ ಪ್ರಕಟನೆ ನೀಡಿರುವುದು ನಿರ್ಲಜ್ಜ ನಡೆ. ಈ ಚಿತ್ರೀಕರಣದ ಎಲ್ಲಾ ದಾಖಲೆಗಳು ಮಾಧ್ಯಮ ಕಚೇರಿಯಲ್ಲಿ ಲಭ್ಯ ಇದ್ದು, ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಬಹುದಾಗಿದೆ. ಇನ್ನು, ಈಗಲೂ ಪಾವೂರು ಸುತ್ತಲೂ ಸಹಿತ, ನೇತ್ರಾವತಿ, ಫಲ್ಗುಣಿ ನದಿಯಲ್ಲಿ ಮರಳುಗಾರಿಕೆಯ ದೋಣಿಗಳು ನೂರಾರು ಸಂಖ್ಯೆಯಲ್ಲಿ ಕಾಣ ಸಿಗುತ್ತವೆ, ಕತ್ತಲಾಗುತ್ತಲೇ, ಈ ದೋಣಿಗಳು ಜೀವತಳೆದು ಮರಳುಗಾರಿಕೆಯಲ್ಲಿ ತೊಡಗುತ್ತವೆ. ಮರಳುಗಾರಿಕೆಗೆ ಪೂರ್ಣ ನಿಷೇಧ ಇರುವ ಮಳೆಗಾಲದ ಅವಧಿಯಲ್ಲಿ ಈ ದೋಣಿಗಳಿಗೆ ನದಿಯಲ್ಲೇನು ಕೆಲಸ, ಗಣಿ ಇಲಾಖೆ ಈ ಕುರಿತು ಕ್ರಮಗಳನ್ನು ಯಾಕೆ ಜರುಗಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಅಕ್ರಮ ಮರಳುಗಾರಿಕೆ ನಡೆಸುವ ದಂಧೆಕೋರರು, ಹಾಗೂ ಅವರೊಂದಿಗೆ ಶಾಮೀಲಾಗಿರುವ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ. ಮರಳು ದಂಧೆಕೋರರಿಗೆ ಪ್ರಭಾವಿ ರಾಜಕಾರಣಿಗಳ ಬೆಂಬಲ ಇರುವುದನ್ನೂ ಇದು ಎತ್ತಿ ತೋರಿಸುತ್ತದೆ. ಉಳಿಯ ದ್ವೀಪದಲ್ಲಿ ನಡೆದಿರುವ ಈ ವರಗಿನ ಅಕ್ರಮ ಮರಳು ಗಾರಿಕೆಯ ಕುರಿತು ಮಾನ್ಯ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳಲ್ಲಿರುವ ಪ್ರಾಮಾಣಿಕ ಅಧಿಕಾರಿಗಳ ತಂಡ ರಚಿಸಿ ತನಿಖೆಗೆ ಆದೇಶಿಸಬೇಕು, ಈಗ ಸ್ಥಳ ಪರಿಶೀಲನೆ ನಡೆಸಿದ ಗಣಿ ಇಲಾಖೆಯ ಅಧಿಕಾರಿಗಳನ್ನೂ ಪ್ರತ್ಯೇಕ ತನಿಖೆಗೆ ಒಳಪಡಿಸಬೇಕು, ಜಿಲ್ಲಾಧಿಕಾರಿಗಳು ನಾವು ಈಗಾಗಲೇ ಮಾಡಿರುವ ಮನವಿಯನ್ನು ಮನ್ನಿಸಿ ಉಳಿಯ ದ್ವೀಪಕ್ಕೆ ತೆರಳಿ ಖುದ್ದು ಪರಿಶೀಲನೆ ನಡೆಸಬೇಕು ಸಮಾನ ಮನಸ್ಕ ಸಂಘಟನೆಗಳು ಬಲವಾಗಿ ಆಗ್ರಹಿಸುತ್ತೇವೆ ಎಂದು ಮುನೀರ್‌ ತಿಳಿಸಿದ್ದಾರೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version