ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜ.6-7 ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಾಸನ ಸಾಹಿತ್ಯೋತ್ಸವಹೆಚ್.ಎಲ್. ಮಲ್ಲೇಶ್ ಗೌಡ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 2 ನಿಮಿಷದ ಓದು

ಜ.6-7 ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಾಸನ ಸಾಹಿತ್ಯೋತ್ಸವಹೆಚ್.ಎಲ್. ಮಲ್ಲೇಶ್ ಗೌಡ

ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮುಂಬರುವ ಜನವರಿ 6 ಮತ್ತು 7 ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಹಾಸನ ಸಾಹಿತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತು ಜಿಲ್ಲಾಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಸಾಹಿತ್ಯೋತ್ಸವದ ಅಧ್ಯಕ್ಷತೆಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕತರಾದ ಚಂದ್ರಶೇಖರ ಕಂಬಾರರು ವಹಿಸಲಿದ್ದು, ನಾಡಿನ ಹಿರಿಯ ಸಾಹಿತಿ ಹಂ.ಪ ನಾಗರಾಜಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಕವಿ ಬಿ.ಆರ್ ಲಕ್ಷ್ಮಣರಾವ್, ಲೇಖಕ ಗಿರೀಶ್ ರಾವ್ ಹತ್ವಾರ್ ಅವರು ಕಾರ್ಯಕ್ರಮದ ಸಂಚಾಲಕರಾಗಿದ್ದು, ಸಾಹಿತ್ಯೋತ್ಸವದ ಅಧ್ಯಕ್ಷರಾಗಿ ಎಚ್.ಬಿ. ಮದನಗೌಡ, ಕಾರ್ಯದರ್ಶಿಯಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ ಕಾರ್ಯ ನಿರ್ವಹಿಸಲಿದ್ದಾರೆ ಎಂದರು. ಎರಡು ದಿನಗಳ ಕಾಲ ನಡೆಯುವ ಸಾಹಿತ್ಯೋತ್ಸವದಲ್ಲಿ ಒಟ್ಟು ಎಂಟು ಮಹತ್ವದ ಗೋಷ್ಠಿಗಳು ನಡೆಯಲಿದ್ದು, ಟಿ.ಎನ್ ಸೀತಾರಾಂ,ರಾಘವೇAದ್ರ ಪಾಟೀಲ,ವಿ.ಮನೋಹರ್, ಮಂಡ್ಯ ರಮೇಶ್, ಶ್ರೀನಿವಾಸ ಪ್ರಭು ಸೇರಿದಂತೆ 50ಕ್ಕೂ ಹೆಚ್ಚು ನಾಡಿನ ಚಿರ ಪರಿಚಿತ ಸಾಹಿತಿಗಳು, ಸಾಧಕರು ನಟರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದು, ಪ್ರಸಿದ್ಧ ಲೇಖಕಿ ಬಾನು ಮುಷ್ಕಾಕ್ ಸಮಾರೋಪದಲ್ಲಿ ಭಾಗಿಯಾಗಲಿದ್ದಾರೆ. ಹಾಸನ ಜಿಲ್ಲೆಯ ಸಾಹಿತ್ಯಾಸಕ್ತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಲ್ಕ ರಹಿತ ನೊಂದಣಿಗೆ ಅವಕಾಶವಿದ್ದು, ಹೊರ ಜಿಲ್ಲೆಗಳ ಸಾಹಿತ್ಯಾಸಕ್ತರು ನೊಂದಾಯಿಸಿಕೊಳ್ಳಲು 250 ರೂ.ಗಳ ಶುಲ್ಕ ನಿಗಧಿ ಪಡಿಸಲಾಗಿದೆ. (ವಸತಿ ವ್ಯವಸ್ಥೆ ನೀಡಲಾಗುವುದು).ನೊಂದಾಣಿಗೆ ಜನವರಿ 3 ರಂದು ಕೊನೆಯ ದಿನಾಂಕವಾಗಿ ಎಂದು ಮಾಹಿತಿ ನೀಡಿದರು. ಸಾಹಿತ್ಯೋತ್ಸವದಲ್ಲಿ ಭಾಗಿಯಾಗುವ ಸರ್ಕಾರಿ ನೌಕರರು ಹಾಗೂ ಶಿಕ್ಷಕರಿಗೆ ಓಓಡಿ ಸೌಲಭ್ಯ ಕೊಡುವ ಬಗ್ಗೆ ಅವರನ್ನ ಭೇಟಿ ಮಾಡಿ ಪ್ರಯತ್ನ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಿ.ಆರ್ ಬೊಮ್ಮೇಗೌಡ, ಗೌರವ ಕಾರ್ಯದರ್ಶಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಾಸನ ದೂರವಾಣಿ ಸಂಖ್ಯೆ: 9108847480, 7411477149 ಗೆ ಸಂಪರ್ಕಿಸಬಹುದಾಗಿದೆ.
ಗೋಷ್ಠಿ-1 ರಲ್ಲಿ ಗೀತ-ಸಂಗೀತ, ಗೋಷ್ಠಿ-2 ರಲ್ಲಿ ನಮ್ಮ ನೆಲೆ ನಮ್ಮ, ಗೋಷ್ಠಿ-3 ರಲ್ಲಿ ರಂಗಾ ತರಂಗ, ಗೋಷ್ಠಿ-4 ರಲ್ಲಿ ಕಂಡದ್ದು ಕಂಡ ಹಾಗೆ ಇವು ಮೊದಲ ದಿನ ನಡೆಯಲಿವೆ. ಕೃಷ್ಣ ಉಡುಪ, ಎಂ.ಸಿ. ಶ್ರೀನಿವಾಸ್, ಸಂಧ್ಯಾರಾಣಿ, ಪಿ.ಚಂದ್ರಿಕಾ, ರೇಣುಕಾ ರಮಾನಂದ, ಹುಲುಗಪ್ಪ ಕಟ್ಟಿಮನಿ, ಪ್ರಕಾಶ್ ಗರುಡು, ಬೇಲೂರು ರಘುನಂದನ, ಅಕ್ಷತಾ ಪಾಂಡವಪುರ, ಟಿ.ಎನ್.ಸೀತಾರಾಂ, ವಿ.ಮನೋಹರ್, ಡಾ.ಅನುರಾಧ ಅನಂತಮೂರ್ತಿ, ಮಂಡ್ಯ ರಮೇಶ್, ಚಂಪಾಶೆಟ್ಟಿ, ವೀರಕಪುತ್ರ ಶ್ರೀನಿವಾಸ್ ಮೊದಲಾದವರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.
ಎರಡನೇ ದಿನ ಮಂಗಳವಾರ ಗೋಷ್ಠಿ-5 ರಲ್ಲಿ ಹೊಸ ದನಿ-ಹೊಸ ಬನಿ, ಗೋಷ್ಠಿ-6 ರಲ್ಲಿ ನಾಳೆಗಳು ನಮಗಿರಲಿ, ಗೋಷ್ಠಿ-7 ರಲ್ಲಿ ಕವಿತಾ ಸಮಯ ಮತ್ತು ಗೋಷ್ಠಿ-8 ರಲ್ಲಿ ಎಐ(ಆರ್ಟಿಫಿಷಿಯಲ್ ಇಂಟಲಿಜೆನ್ಸಿ) ಅಮಾನುಷ ಕೈ ನಡೆಯಲಿದ್ದು, ಗುರುಪ್ರಸಾದ್ ಕಂಟಲಗೆರೆ, ಕುಸಮಾ ಆಯರಹಳ್ಳಿ, ಸಚಿನ್ ತೀರ್ಥಹಳ್ಳಿ, ನಾಗೇಶ ಹೆಗಡೆ, ಅಹಮದ್ ಹಗರೆ, ವಿ.ಗಾಯತ್ರಿ, ತಮಿಳು ಸೆಲ್ವಿ, ಮಾನಸಿ ಸುಧೀರ್, ಮಧು ವೈ. ಎನ್. ಮೇಘನಾ ಸುಧೀಂದ್ರ, ಶರತ್ ಭಟ್ ಸೇರಾಜೆ ಭಾಗಿಯಾಗಲಿದ್ದಾರೆ ಎಂದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬಾನು ಮುಷ್ಕಾಕ್ ವಹಿಸಲಿದ್ದು, ರಾಘವೇಂದ್ರ ಪಾಟೀಲ ಸಮಾರೋಪ ನುಡಿಗಳನ್ನಾಡಲಿದ್ದು, ಮುಖ್ಯ ಅತಿಥಿಗಳಾಗಿ ಜಿಪಂ ಮುಖ್ಯಕರ‍್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ ಮೊದಲಾದವರು ಭಾಗಿಯಾಗಲಿದ್ದಾರೆ ಎಂದರು. ಎರಡು ದಿನಗಳ ಸಾಹಿತ್ಯೋತ್ಸವದಲ್ಲಿ ನಾಡಿನ 50ಕ್ಕೂ ಹೆಚ್ಚು ಚಿರಪರಿಚಿತ ಸಾಹಿತಿಗಳು, ಸಾಧಕರು, ನಟರು ಭಾಗಿಯಾಗಲಿದ್ದಾರೆ ಎಂದರು. ಜಿಲ್ಲೆಯ ಪ್ರತಿಯೊಬ್ಬ ಸಾಹಿತ್ಯ ಮನಸುಗಳೂ ಎಲ್ಲಾರೂ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕ್ನನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ಸಹಕಾರ್ಯದರ್ಶಿ ನಾಗೇಶ್, ಸಮಿತಿ ಸದಸ್ಯರಾದ ಹೆತ್ತೂರು ನಾಗರಾಜ್ ಇತರರು ಉಪಸ್ಥಿತರಿದ್ದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು