ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ: ಡಿ ಕೆ ಶಿವಕುಮಾರ್

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ: ಡಿ ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ಮೂಲದ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲು ಯೋಜಿಸುತ್ತಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಕಾರ, ಹಗರಣದಲ್ಲಿ ಬಿಜೆಪಿ ನಾಯಕರ ಕೈವಾಡವಿದೆ. ಶಿವಕುಮಾರ್ ಅವರು ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ಅದರ ಸಹೋದರ ಸಂಸ್ಥೆ ಶ್ರೀ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಮತ್ತು ಶ್ರೀ ವಸಿಷ್ಟ ಕ್ರೆಡಿಟ್ ಸೌಹಾರ್ದ ಸಹಕಾರಿ ಲಿಮಿಟೆಡ್‌ನಲ್ಲಿ ನಡೆದ ಹಣಕಾಸು ವಂಚನೆಗಳನ್ನು ಉಲ್ಲೇಖಿಸಿದ್ದಾರೆ. ಈ ಬ್ಯಾಂಕ್‌ಗಳು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಡಿಯಲ್ಲಿ ಬರುತ್ತವೆ.

ಬುಧವಾರ ಬೆಳಗ್ಗೆ ಠೇವಣಿದಾರರ ಗುಂಪೊಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಮುನ್ನ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಸಂತ್ರಸ್ತರು ನ್ಯಾಯ ಕೋರಿ ಅವರಿಗೆ ಮನವಿ ಸಲ್ಲಿಸಿದರು.

“ಮೂರು ಲಕ್ಷ ಠೇವಣಿದಾರರಿದ್ದಾರೆ. ಅವರಲ್ಲಿ ಸುಮಾರು 300 ಮಂದಿ ಸತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಹಿರಿಯ ನಾಗರಿಕರು” ಎಂದು ಶಿವಕುಮಾರ್ ಹೇಳಿದರು

“ಬಿಜೆಪಿ ಅಧಿಕಾರದಲ್ಲಿದ್ದಾಗ ಸಿಬಿಐಗೆ ಒಪ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅದನ್ನು ಸಿಬಿಐಗೆ ನೀಡಿದ್ದು ನಮ್ಮ ಸರ್ಕಾರ. ಆದರೆ ಬಿಜೆಪಿಯ ಬಹಳಷ್ಟು ನಾಯಕರು ಶಾಮೀಲಾಗಿರುವುದರಿಂದ ಸಿಬಿಐ ಪ್ರಕರಣ ದಾಖಲಿಸಿಳ್ಳುವುದಾಗಲೀ ಅಥವಾ ತನಿಖೆ ಆರಂಭಿಸುವುದನ್ನಾಗಲೀ ಮಾಡಿಲ್ಲ” ಎಂದು ಶಿವಕುಮಾರ್ ಹೇಳಿದರು.

ಪ್ರಿಯಾಂಕಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಎಸ್‌ಐಟಿ ರಚಿಸುವ ಕುರಿತು ಚಿಂತನೆ ನಡೆಸುವಂತೆ ಕೋರಿದ್ದಾರೆ. ಚುನಾವಣೆ ಮುಗಿದ ಕೂಡಲೇ ಈ ಬಗ್ಗೆ ತೀರ್ಮಾನಿಸಿ ನ್ಯಾಯ ಒದಗಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಡಿಸೆಂಬರ್ 2023 ರಲ್ಲಿ, ಮೂರು ಸಹಕಾರಿ ಬ್ಯಾಂಕ್‌ಗಳಲ್ಲಿನ ಹಗರಣಗಳನ್ನು ಸಿಬಿಐಗೆ ಹಸ್ತಾಂತರಿಸಲು ಸಿದ್ದರಾಮಯ್ಯ ಅನುಮೋದಿಸಿದರು.

ಗುರು ರಾಘವೇಂದ್ರ ಬ್ಯಾಂಕ್ ನಲ್ಲಿ 1,294 ಕೋಟಿ ರೂ.ಗಳ ಅಕ್ರಮ ನಡೆದಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಗುರು ಸಾರ್ವಭೌಮ ಸೊಸೈಟಿ ಆರ್ಥಿಕ ದುರುಪಯೋಗದಿಂದ 284 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ವರದಿಯಾಗಿದೆ. ವಸಿಷ್ಠ ಸಹಕಾರಿ ಬ್ಯಾಂಕ್‌ನಲ್ಲಿ 282 ಕೋಟಿ ರೂಪಾಯಿ ವಂಚನೆಯಾಗಿದೆ.

ಇತ್ತೀಚೆಗೆ, ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚುನಾವಣಾ ಪ್ರಚಾರ ಸಭೆಯೊಂದರಿಂದ ದಿಢೀರ್ ನಿರ್ಗಮಿಸಿದರು, ಈ ಸಭೆಯಲ್ಲಿ ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಠೇವಣಿದಾರರು ತಮ್ಮ ಹಣವನ್ನು ಹಿಂತಿರುಗಿಸಲು ವಿಳಂಬ ಮಾಡಿದ ಬಗ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರು.

“ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವ್ಯಕ್ತಿಗಳು” “ಬಲವಂತವಾಗಿ ಸಭೆಗೆ ಪ್ರವೇಶಿಸಿದ್ದರಿಂದ” ಅಡ್ಡಿ ಉಂಟಾಗಿತ್ತು ಎಂದು ಸೂರ್ಯ ಅವರ ಕಚೇರಿ ನಂತರ ಹೇಳಿತ್ತು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು