ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪಿಎಸ್ ಐ ನೇಮಕಾತಿ ಹಗರಣ: ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ ತನಿಖಾ ಆಯೋಗ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಪಿಎಸ್ ಐ ನೇಮಕಾತಿ ಹಗರಣ: ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ ತನಿಖಾ ಆಯೋಗ

ಬೆಂಗಳೂರು: ಆರು ತಿಂಗಳ ತನಿಖೆಯ ನಂತರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತಾದ ತನಿಖಾ ವರದಿಯನ್ನು ನ್ಯಾಯಮೂರ್ತಿ ಬಿ ವೀರಪ್ಪ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ಪೂರ್ಣಗೊಳಿಸಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ ರಾಜ್ಯ ಸರ್ಕಾರ ಆಯೋಗವನ್ನು ರಚಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ವಹಿಸಲಾಗಿತ್ತು. ನಂತರ ಮತ್ತೆ ಮೂರು ತಿಂಗಳು ವಿಸ್ತರಿಸಲಾಯಿತು.

ವಿಚಾರಣೆ ವೇಳೆ ನ್ಯಾಯಮೂರ್ತಿ ವೀರಪ್ಪ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಈ ವಿಷಯದ ಬಗ್ಗೆ ಮಾತನಾಡಿದ್ದ ಹಲವು ರಾಜಕೀಯ ಮುಖಂಡರಿಗೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳಿದ್ದರೆ ಹಂಚಿಕೊಳ್ಳುವಂತೆ ಅವರು ಕೇಳಿದ್ದರು.

ಕಳೆದ ವರ್ಷ ನಡೆದ ಚುನಾವಣೆಯ ಸಂದರ್ಭದಲ್ಲಿ ಹಿಂದಿನ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು.

ಆಗಿನ ಬಿಜೆಪಿ ನೇತೃತ್ವದ ಸರ್ಕಾರವು ಅಕ್ಟೋಬರ್ 3, 2021 ರಂದು 545 ಪಿಎಸ್‌ಐಗಳ ನೇಮಕಾತಿಗಾಗಿ ಪರೀಕ್ಷೆಗಳನ್ನು ನಡೆಸಿತ್ತು. ರಾಜ್ಯದಾದ್ಯಂತ 92 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಯಿತು. 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಅಂದಿನ ಬಿಜೆಪಿ ಸರಕಾರ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಿತ್ತು.

ಈ ಹಗರಣದಲ್ಲಿ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು, ಇದನ್ನು ಕೇಸರಿ ಪಕ್ಷ ನಿರಾಕರಿಸಿದೆ.

ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಮಂದಿಯನ್ನು ಸಿಐಡಿ ಬಂಧಿಸಿದೆ. ಈ ಪ್ರಕರಣದಲ್ಲಿ ನೇಮಕಾತಿ ಹೊಣೆ ಹೊತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು.

ಹಿಂದಿನ ಬಿಜೆಪಿ ಸರ್ಕಾರವು ಪರೀಕ್ಷೆಗಳನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆಗಳಿಗೆ ಆದೇಶಿಸಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಮರುಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು