ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಂದು ದೇಶ, ಒಂದು ಚುನಾವಣೆ: ಚಿಂತನ ಕರ್ನಾಟಕದಿಂದ ಸಂವಾದ ಸಭೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ಒಂದು ದೇಶ, ಒಂದು ಚುನಾವಣೆ: ಚಿಂತನ ಕರ್ನಾಟಕದಿಂದ ಸಂವಾದ ಸಭೆ

ಬೆಂಗಳೂರು: ದೇಶದೆಲ್ಲೆಡೆ ಈಗ ಒಂದು ದೇಶ, ಒಂದು ಚುನಾವಣೆ ಕುರಿತಾದ ಚರ್ಚೆ ಚಾಲ್ತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಂತನ ಕರ್ನಾಟಕ ವೇದಿಕೆ ಸಂಸ್ಥೆಯು ಈ ವಿಷಯದ ಕುರಿತು ಸಂವಾದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.

ಚರ್ಚೆಯಲ್ಲಿ ವಿವಿಧ ರಾಜಕಾರಣಿಗಳು, ಚುನಾವಣಾ ತಜ್ಞರು ಹಾಗೂ ಹಿರಿಯ ಚಿಂತಕರು ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆಂದು ಸಂಘಟಕರು ಹೇಳಿದ್ದಾರೆ.

ಈ ಸಂವಾದದಲ್ಲಿ ಸಾಮಾಜಿಕ ಚಿಂತಕರು, ಕನ್ನಡ ಪರ ಹೋರಾಟಗಾರರು ಹಾಗೂ ಎಎಪಿಯ ರಾಜ್ಯ ಉಪಾಧ್ಯಕ್ಷರಾದ ಡಾ.ರಮೇಶ್ ಬೆಲ್ಲಂಕೊಂಡ, ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರರಾದ ಶಿವಸುಂದರ್‌, ರಾಜಕೀಯ ವಿಶ್ಲೇಷಕರು, ಚಿಂತಕರಾದ ಎ.ನಾರಾಯಣ, ಖ್ಯಾತನಟ, ರಂಗಕರ್ಮಿ, ಕರ್ನಾಟಕ ರಾಜ್ಯ ಎಎಪಿ ಅಧ್ಯಕ್ಷರಾದ ಡಾ.ಮುಖ್ಯಮಂತ್ರಿ ಚಂದ್ರು, ವಿಜಯಪುರ ಅಕ್ಕಮಹಾದೇವಿ ವಿವಿಯ ನಿವೃತ್ತ ಕುಲಸಚಿವರಾದ ಆರ್‌ ಸುನಂದಮ್ಮ, ಕರ್ನಾಟಕ ರಾಜ್ಯ ಕಾಂಗ್ರೆಸ್‌ ವಕ್ತಾರರಾದ ಸುಧೀರ್ ಕುಮಾರ್‌ ಮುರೊಳ್ಳಿ, ಜೆಡಿಎಸ್‌ ಕರ್ನಾಟಕದ ವಕ್ತಾರರಾದ ಸಿಎಂ ಫೈಜ್‌,  ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ.ಕೆ.ಪ್ರಕಾಶ್, ಸಾಮಾಜಿಕ ಕಾರ್ಯಕರ್ತೆ, ಬರಹಗಾರ್ತಿ ಯುಟಿ ಫರ್ಜಾನ, ಸಿನಿಮಾ ನಟಿ, ರಂಗಭೂಮಿ ಕಲಾವಿದೆ ಸುಷ್ಮಾವೀರ್‌, ಸರ್ವೋದಯ ಕರ್ನಾಟದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್‌, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರರಾದ ಮಂಜುನಾಥ್ ಅದ್ದೆ, ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪ್ರಸಾದ್‌,  ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಾದ  ಚೇತನ್‌ ಜೀರಾಳ್‌ ಸೇರಿ ಹಲವು ಗಣ್ಯರು ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈಗಾಗಲೇ ಒಂದು ದೇಶ ಒಂದು ಚುನಾವಣೆ ಕುರಿತು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಅವರ ನೇತ್ರತ್ವದಲ್ಲಿ ಸಮಿತಿಯೊಂದನ್ನು ನಿರ್ಮಿಸಿದ್ದು, ಅದರ ಬಳಿ ಶೀಘ್ರದಲ್ಲೇ ವರದಿ ನೀಡುವಂತೆ ಕೇಳಿದೆ.

ಈ ಹಿನ್ನೆಲೆಯಲ್ಲಿ ಸಂಘಟನೆಯು ಒಂದು ದೇಶ, ಒಂದು ಚುನಾವಣೆಯ ಹೂರಣವೇನು? ಅಜೆಂಡಾವೇನು? ಎನ್ನುವುದರ ಕುರಿತು ಚರ್ಚೆಯನ್ನು ನಡೆಸಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

ಕಾರ್ಯಕ್ರಮವು ಸೆ.16ರಂದು ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆಯ ಭಾರತೀಯ ವಿದ್ಯಾಭವನ ಕೆ ಆರ್‌ ವಿ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version