ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಈ ಕುರಿತು ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ‘ಎಂದರು.

ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ‘ ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ‘ಎಂದು ಹೇಳಿದರು.

ಇಂದಿನ ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಕೇಳಿದ ಪ್ರಶ್ನೆಗೆ,’ ಇಂದು ಯಾವುದೇ ಚರ್ಚೆ ಇರುವುದಿಲ್ಲ. ನಮ್ಮ ನಾಯಕರಿಗೆ ಕೆಲವು ಮಾರ್ಗದರ್ಶನ ನೀಡಲಾಗುವುದು ‘ಎಂದು ತಿಳಿಸಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version